ವೈಜ್ಞಾನಿಕ ಅಭಿವೃದ್ಧಿ ಹಾಗೂ ವಿಜ್ಞಾನದ ಬಳಕೆಗೆ ಬೆಂಗಳೂರು ಪ್ರಶಸ್ತವಾದ ಸ್ಥಳವಾಗಿದೆ. ಐಟಿಬಿಟಿ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಹೀಗೆ ತಂತ್ರಜ್ಞಾನದ ಎಲ್ಲ ಆಯಾಮಗಳು ಕರ್ನಾಟಕದಲ್ಲಿ ಹೊಸ ರೂಪವನ್ನು ಪಡೆಯುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸಭೆ ಕಲಾಪದಲ್ಲಿ ಮಾತನಾಡುವ ಸಂದರ್ಭದಲ್ಲಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು, ‘ಮಧ್ಯೆ ಎದ್ದು ನಿಂತ್ರೆ ನಾನು ಏನ್ ಹೇಳಬೇಕು ಅದು ಮರೆತುಹೋಯ್ತು’ ಎಂದರು. ಮಧ್ಯಪ್ರವೇಶಿಸಿದ ಸ್ಪೀಕರ್ ಕಾಗೇರಿ ಅವರು ,ನೀವು ಮರೆಯುವವರ ಎಂದು ಕೇಳಿದರು.
ಸಿಎಂ ಬೊಮ್ಮಾಯಿ ಸಮಾಜದ ಭಾವನೆಗಳ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಲಿಂಗಾಯತ ಮೀಸಲಾತಿ ಘೋಷಣೆಯ ವಿಳಂಬ ನೀತಿ ಖಂಡಿಸಿ ಸೆ.20 ರಂದು ಸಿಎಂ ಮನೆ ಮುಂದೆ ಧರಣಿ ಮಾಡೋದಾಗಿ ಹೇಳಿದ್ದಾರೆ.
ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ವೆಂಟಿಲೇಟರ್ ಕಾರ್ಯ ಸ್ಥಗಿತವಾಗಿ ಸಾವನ್ನಪ್ಪಿದ್ದ ಮೂವರು ರೋಗಿಗಳ ಕುಟುಂಬಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಜನಸ್ಪಂದನದಲ್ಲೇ ಬಿಜೆಪಿಯವ್ರಿಗೆ ಧಮ್ ತೋರಿಸೋಕೆ ಆಗ್ಲಿಲ್ಲ.. ಸಮಾವೇಶದಲ್ಲಿ ಜನ ಎದ್ದು ಹೋಗ್ತಿದ್ದರು ಎಂದು ಬಿಜೆಪಿಯನ್ನು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.. ಜನ ಬಿಜೆಪಿಯವ್ರ ಧಮ್ ನೋಡಿ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ನಗರದಲ್ಲಿ ಮಳೆ ಹಾನಿ ಹಿನ್ನೆಲೆ ಇಂದು ಮಧ್ಯಾಹ್ನ ಹಾನಿಗೀಡಾದ ಪ್ರದೇಶಗಳಿಗೆ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ಸುಮಾರಿಗೆ ಭೇಟಿ ನೀಡಿ, ಪರಿಶೀಲನೆ ಮಾಡಿ ಸ್ಥಳದಲ್ಲಿಯೇ ಅಗತ್ಯ ಸೂಚನೆ ನೀಡುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಇಂದು ಆರ್.ಟಿ.ನಗರದ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿದ್ರು. ಇದೇ ವೇಳೆ ಮಾತನಾಡಿದ ಸಿಎಂ, ರಾಜ್ಯದ ಸಮಸ್ತ ಜನರ ವಿಘ್ನಗಳನ್ನು ದೂರ ಮಾಡಲಿ ಎಂದು ವಿಘ್ನನಿವಾರಕನಿಗೆ ಪ್ರಾರ್ಥಿಸಿದೆನು ಎಂದರು.
ನಾನು ಹೋರಾಟ ಮಾಡುವಾಗಲೆಲ್ಲಾ ಪ್ರತಿ ಸಾರಿ ಬಿಜೆಪಿ ಒಂದಲ್ಲ ಒಂದು ರೀತಿ ತಪ್ಪಿಸಲು ಪ್ರಯತ್ನ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರು ಗೊಂದಲದಲ್ಲಿದ್ದಾರೆ. ಎಲ್ಲಾ ಗೊಂದಲಗಳೂ ಅವರ ಹೇಳಿಕೆಯಿಂದಲೇ ಪ್ರಾರಂಭವಾಗಿದೆ.
ವಿವಿಧ ದೇಶಗಳಲ್ಲಿ ಗಣಿಗಾರಿಕೆಯ ಪರಿಕಲ್ಪನೆ, ಯಂತ್ರೋಪಕರಣ ಹಾಗೂ ಖನಿಜಾನ್ವೇಷಣೆಯಲ್ಲಿ ಆಧುನೀಕರಣವಾಗಿದೆ. ಈ ನಿಟ್ಟಿನಲ್ಲಿ ಸಮಿತಿ ಗಂಭೀರವಾಗಿ ಚಿಂತನೆ ನಡೆಸಿ ರೂಪುರೇಷೆಗಳನ್ನು ಸಿದ್ಧಪಡಿಸಬೇಕು ಎಂದು ಸಿಎಂ ಸೂಚಿಸಿದರು.
ಹಾವನೂರು ಆಯೋಗವನ್ನು ರಚಿಸಿ ಅನುಷ್ಠಾನಕ್ಕೆ ತಂದವರು ಅವರು. ಇಡೀ ಭಾರತ ದೇಶದಲ್ಲಿ ಹಿಂದುಳಿದ ವರ್ಗಗಳ ಬಗ್ಗೆ ಮೊದಲು ಚಿಂತನೆ ಮಾಡಿ ಕಾರ್ಯರೂಪಕ್ಕೆ ತಂದ ಶ್ರೇಯಸ್ಸು ದೇವರಾಜ ಅರಸು ಅವರದ್ದು ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.