ಕಲಬುರಗಿ ವಿಮಾನ ನಿಲ್ದಾಣದ ಸಿವಿಲ್ ಕಾಮಗಾರಿಗಳು ಪೂರ್ಣಗೊಂಡಿದ್ದು, ವಿವಿಧ ವಿಮಾನ ಯಾನ ಕಂಪೆನಿಗಳು ಕಾರ್ಯಾಚರಣೆ ಆರಂಭಿಸಲು ಉತ್ಸಾಹ ತೋರಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಸೂಚನೆಯಂತೆ ವಿಶೇಷ ಉದ್ದೇಶ ವಾಹಕ (ಎಸ್ಪಿವಿ)ದ ರಚನೆಯ ಪ್ರಕ್ರಿಯೆಯೂ ಪ್ರಗತಿಯಲ್ಲಿದೆ.
ಈಗಾಗಲೇ 300 ಹೊಯ್ಸಳ ಕಾರುಗಳು ಗಸ್ತು ತಿರುಗುತ್ತಿವೆ. ಆದರೆ ಕೆಲ ಬೀದಿಗಳಿಗೆ ಕಾರುಗಳು ಹೋಗಲು ಸಾಧ್ಯವಿಲ್ಲ. ಹೀಗಾಗಿ ನಗರದೆಲ್ಲೆಡೆ ಗಸ್ತು ತಿರುಗಲು ಬೈಕ್ ನೀಡಲಾಗಿದ್ದು, ಹೆಚ್ಚು ಪರಿಣಾಮಕಾರಿಯಾಗಲಿದೆ.
ಸಂಬಂಧಪಟ್ಟ ಪ್ರದೇಶ ವ್ಯಾಪ್ತಿಯ ಶಾಸಕರು ನೀಡಿದ ಸಲಹೆಗಳನ್ನು ಪರಿಗಣಿಸಿದ ಸಿಎಂ ಗ್ರನೈಟ್ ಉದ್ಯಮಗಳು ಎದುರಿಸುತ್ತಿರುವ ಸವಾಲುಗಳನ್ನು ಬಗೆಹರಿಸಲು ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದರು.
ನಿರ್ದಿಷ್ಟ ಕಾಲಮಿತಿಯೊಳಗೆ ರಾಯಚೂರು ಜಿಲ್ಲೆಯ ಜುರಾಲಾ ಯೋಜನೆ ಬಾದೆಗೊಳಗಾದ ಸೇತುವೆ ಕಾಮಗಾರಿಗಳು ಸಂಪೂರ್ಣವಾಗಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ನಂಜುಂಡಪ್ಪ ವರದಿ ಅನುಷ್ಟಾನದ ಬಳಿಕ ಆ ಭಾಗದಲ್ಲಿ ಉಂಟಾಗಿರುವ ಅಭಿವೃದ್ಧಿಗಳನ್ನು ಪರಿಶೀಲಿಸಿ, ಇನ್ನೂ ಅಭಿವೃದ್ಧಿ ಹೊಂದಬೇಕಾದ ಪ್ರದೇಶಗಳಿಗೆ ಹೆಚ್ಚಿನ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.