ಬಿಜೆಪಿ ಎಂಬ ಮೂರು ಬಿಟ್ಟ ಪಕ್ಷ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಲಜ್ಜೆಗೆಟ್ಟು ಯಾವ ಕೀಳು ಹಂತಕ್ಕೂ ಇಳಿದು ಪ್ರಪಾಗಂಡಾ ಸೃಷ್ಟಿಸಬಲ್ಲದು ಎಂದು ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ.
ಬೆಳಗಾವಿ ಪ್ರವಾಸದಲ್ಲಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಜೊತೆಗೆ ಸಿಎಂ ಬೊಮ್ಮಾಯಿ ಮಾತನಾಡಿದ್ದು, ಈಶ್ವರಪ್ಪನವರಿಂದ ರಾಜೀನಾಮೆ ಪಡೆಯುವ ಬಗ್ಗೆ ಚರ್ಚಿಸಿದ್ದಾರೆಂದು ತಿಳಿದುಬಂದಿದೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರರಕಣ ಸಂಬಂಧ ಸಚಿವ ಕೆ.ಎಸ್.ಈಶ್ವರಪ್ಪರವರನ್ನು ಕೂಡಲೇ ಬಂಧಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ನಾಯಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆಯಷ್ಟೇ ಸಚಿವರ ವಿರುದ್ಧ ಗಂಭೀರ ಆರೋಪ ಮಾಡಿದ್ದ ಗುತ್ತಿಗೆದಾರ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.