ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಆರೋಗ್ಯ ಸುಧಾರಣೆಗಾಗಿ ಸುಮಾರು 720 ಕೋಟಿ ಮೀಸಲಿರಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, 202 ಕೋಟಿ ರೂ. ವೆಚ್ಚದಲ್ಲಿ ಮೈಸೂರು, ಶಿವಮೊಗ್ಗ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಕಿದ್ವಾಯಿ ಸಂಸ್ಥೆಯಡಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳಳನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ.
ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ, ಹೊಸ ಟೆಂಡರ್ ಪ್ರಕ್ರಿಯೆಯನ್ನು ಪ್ರಾರಂಭಗೊಳಿಸಿ ಸ್ಪರ್ಧಾತ್ಮಕ ಬಿಡ್ ಪ್ರಕ್ರಿಯೆ ಮೂಲಕ PPP ಮಾದರಿಯಲ್ಲಿ ವಿಮಾನನಿಲ್ದಾಣ ಅಭಿವೃದ್ಧಿಪಡಿಸಿಲಾಗುವುದು.
ಕುಟುಂಬಕ್ಕಾಗಿ ಶ್ರಮಿಸುವ ಮಹಿಳೆಯರಿಗಾಗಿ ಶ್ರಮ ಶಕ್ತಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಯೋಜನೆಯಡಿ ಸರ್ಕಾರವು ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು ತಲಾ 500 ರೂ. ಗಳ ಸಹಾಯ ಧನವನ್ನು ಡಿ.ಬಿ.ಟಿ. ಮೂಲಕ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಮತ್ತು ಜನರಿಗೆ ಗ್ರಾಮ ಪಂಚಾಯಿತಿಗಳ ಮುಖಾಂತರ ಸ್ಥಳೀಯವಾಗಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಅವಕಾಶ ಮಾಡಲಾಗುವುದು. ಪ್ರಸ್ತುತ ಗ್ರಾಮ ಪಂಚಾಯಿತಿಗಳಿಗೆ, ಜನಸಂಖ್ಯೆ ಆಧರಿಸಿ 12 ಲಕ್ಷ ರೂ. ಗಳಿಂದ 35 ಲಕ್ಷ ರೂ. ಗಳವರೆಗೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ.
2 ತಿಂಗಳು ಬಳಿಕ ಬೊಮ್ಮಾಯಿ ಸರ್ಕಾರ ಮನೆಗೆ ಹೊಗುತ್ತೆ ಎಂದು ಗದಗದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.. ಆಪರೇಷನ್ ಕಮಲ ಮಾಡಿ ಸರ್ಕಾರ ರಚನೆ ಮಾಡಿದ್ದಾರೆ.. ಬಂದು 4 ವರ್ಷ ಆಯಿತು ಒಂದು ಮನೆ ಕೊಟ್ಟಿದ್ದಾರಾ..? ಎಂದು ಪ್ರಶ್ನಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ಬಹುಪಾಲು ಮಂದಿ ರೈತರು ಬಾಳೆ, ಅರಿಶಿಣ ಹಾಗೂ ಟೊಮ್ಯಾಟೊ, ಸಣ್ಣ ಈರುಳ್ಳಿಯನ್ನು ಬೆಳೆಯಲಿದ್ದು ತಮಿಳುನಾಡು ಮತ್ತು ಮೈಸೂರು ಉತ್ತಮ ಮಾರುಕಟ್ಟೆಗಳಾಗಿದೆ. ಹಾಗಾಗಿಯೇ ಅರಿಶಿಣಪುಡಿ ತಯಾರಿಕಾ ಘಟಕ ಮತ್ತು ಟೊಮೆಟೊ, ಬಾಳೆ ಸಂಸ್ಕರಣ ಘಟಕವನ್ನು ಸ್ಥಾಪಿಸಬೇಕೆಂದು ಇಲ್ಲಿನ ಜನರ ಬಹುವರ್ಷಗಳ ಬೇಡಿಕೆ.
ಕಳೆದ ಬಾರಿ 2ಲಕ್ಷ 65ಸಾವಿರ ಕೋಟಿ ಮೌಲ್ಯದ ಬಜೆಟ್ ಮಂಡಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ 3 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡನೆಗೆ ತಯಾರಿ ನಡೆಸಿದ್ದಾರೆ. ಈ ಬಜೆಟ್ನಲ್ಲಿ ಸಿಎಂ ಬೊಮ್ಮಾಯಿ ಎಲ್ಲಾ ವರ್ಗಕ್ಕೂ ಶಿವರಾತ್ರಿ ಸಿಹಿ ನೀಡಲಿದ್ದು ಕಾಂಗ್ರೆಸ್ ಫ್ರೀ ಪಾಲಿಟಿಕ್ಸ್ಗೂ ಚೆಕ್ಮೇಟ್ ನೀಡಲಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.