ರಾಹುಲ್ ಗಾಂಧಿ ಅವರು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಭಾನುವಾರ ಬೆಳಗ್ಗೆ ಜಡಚರ್ಲಾದಿಂದ ಪಾದಯಾತ್ರೆ ಆರಂಭಿಸಿದ್ದು, 22 ಕಿ.ಮೀ ದೂರ ಕ್ರಮಿಸುವ ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. ಇದು ತೆಲಂಗಾಣದಲ್ಲಿ ಕಾಂಗ್ರೆಸ್ನ 'ಭಾರತ್ ಜೋಡೋ ಯಾತ್ರೆ'ಯ ಐದನೇ ದಿನವಾಗಿದೆ.
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಇಂದು ಚಾಮರಾಜನಗರದ ಗುಂಡ್ಲುಪೇಟೆ ಮೂಲಕ ರಾಜ್ಯಕ್ಕೆ ಎಂಟ್ರಿ ನೀಡಲಿದೆ. ರಾಹುಲ್ ಗಾಂಧಿ ಸ್ವಾಗತಕ್ಕೆ ಕಾಂಗ್ರೆಸ್ ನಾಯಕರು ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ..
ಭಾರತ ನೆಲದ ಬಗ್ಗೆ ಕೀಳು ಹೇಳಿಕೆ ನೀಡಿದವರ ಬಳಿ ಹೋಗಿ ಆಶೀರ್ವಾದ ಪಡೆದಿದ್ದಾರೆ. ಇಂಥವರಿಂದ ಈ ನೆಲಕ್ಕೇ ಅಪಚಾರವಾಗುತ್ತಿದೆ. ಇಂಥ ಯಾತ್ರೆಗೆ ಜನ ಬೆಲೆ ನೀಡುವುದಿಲ್ಲ ಎಂದು ಭಾರತ್ ಜೋಡೋ ಯಾತ್ರೆ ವಿರುದ್ಧ ಸಚಿವ ಆರ್, ಆಶೋಕ್ ಹರಿಹಾಯ್ದರು.
ಭಾರತ್ ಜೋಡೋ ಯಾತ್ರೆ ಬೆಳಗ್ಗೆ 10.30 ರಿಂದ ಗುಂಡ್ಲುಪೇಟೆಯಲ್ಲಿ ಆರಂಭವಾಗಲಿದ್ದು 30 ಸಾವಿರಕ್ಕೂ ಹೆಚ್ಚು ಮಂದಿ ಈ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ನಿರೀಕ್ಷೆ ಇದೆ. ಗುಂಡ್ಲುಪೇಟೆ ಪಟ್ಟಣದ ಅಂಬೇಡ್ಕರ್ ಭವನದ ಎದುರು ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದ್ದು ಜನರನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಲಿದ್ದಾರೆ. ಇದಾದ ಬಳಿಕ, ಭಾರತ್ ಜೋಡೋ ಪಾದಯಾತ್ರೆ ಮುಂದುವರೆಯಲಿದ್ದು ಸೋಲಿಗರು, ಆಕ್ಸಿಜನ್ ದುರಂತದ ಸಂತ್ರಸ್ತರ ಜೊತೆ ಸಂವಾದ ನಡೆಸಲಿದ್ದಾರೆ.
ಭಾರತ್ ಜೋಡೋ ಯಾತ್ರೆಗೆ ಮೂವರು ಎಸ್ಪಿ, ಎಂಟು ಜನ ಡಿವೈಎಸ್ಪಿ, 25 ಇನ್ಸಫೆಕ್ಟರ್, 50 ಜನ ಸಬ್ ಇನ್ಸ್ ಪೆಕ್ಟರ್, ಒಂದು ಸಾವಿರಕ್ಕೂ ಅಧಿಕ ಮಂದಿ ಪೇದೆ, ಕೆಎಸ್ಆರ್ಪಿ, ಹತ್ತಕ್ಕೂ ಅಧಿಕ ಡಿಆರ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.
ಊಟಿ ವೃತ್ತದಲ್ಲಿ ನೆಚ್ಚಿನ ನಾಯಕ ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ಬೃಹತ್ ಕಮಾನು ನಿರ್ಮಿಸುತ್ತಿದ್ದು ಎಲ್ಲರ ಹುಬ್ಬೇರಿಸುತ್ತಿದೆ. ರಾಗಾ ಹೆಜ್ಜೆ ಹಾಕುವ ಮಾರ್ಗದುದ್ದಕ್ಕೂ ರಾಹುಲ್ ಗಾಂಧಿ ಮತ್ತು ರಾಜ್ಯ ನಾಯಕರುಗಳ ಬೃಹತ್ ಕಟೌಟ್ ಗಳನ್ನು ನಿಲ್ಲಿಸಿದ್ದು ಇಡೀ ರಾಷ್ಟ್ರೀಯ ಹೆದ್ದಾರಿ ಕಾಂಗ್ರೆಸ್ ಮಯವಾಗಿದೆ.
ನನಗೆ ಯಾರೂ ಮಾಲೆ ಹಾಕಬೇಡಿ; ಚುನಾವಣೆಯಲ್ಲಿ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿ ಗೆಲುವಿನ ಮಾಲೆ ಹಾಕಿ- ಭಾರತ್ ಜೋಡೋ ಯಾತ್ರೆಯ ಫೂರ್ವಭಾವಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್
ದ್ವೇಷ ಮತ್ತು ವಿಭಜನೆಯ ರಾಜಕಾರಣದಿಂದ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ಅದರೆ, ನನ್ನ ಪ್ರೀತಿಯ ದೇಶವನ್ನೂ ಕಳೆದುಕೊಳ್ಳಲು ನಾನು ಇಷ್ಟಪಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.