Shakti Scheme Karnataka: ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಈಗಾಗಲೇ ಬರೋಬ್ಬರಿ 500 ಕೋಟಿ ಜನರನ್ನ ತಲುಪಿದೆ. ಇಂದು 500ನೇ ಕೋಟಿಯ ಟಿಕೆಟ್ ಬಸ್‌ನಲ್ಲಿ ಕಂಡಕ್ಟರ್ ಆಗಿ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ವಿತರಿಸಿದ್ದಾರೆ.
ಸತೀಶ್ ಜಾರಕಿಹೊಳಿ ST ಸಮುದಾಯದ ನಾಯಕರಾಗಿದ್ದು, ಇವರೊಂದಿಗೆ ಉತ್ತರ ಕರ್ನಾಟಕದ ಬಹುತೇಕ ಶಾಸಕರು ಬೆಂಬಲವಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಸಿಎಂ ಸಿದ್ದರಾಮಯ್ಯ ಮನವರಿಕೆ ಮಾಡಿದ್ದಾರೆಂದು ತಿಳಿದುಬಂದಿದೆ.
ದಿನದಿಂದ ದಿನಕ್ಕೆ ರಾಜ್ಯ ಸರ್ಕಾರದಲ್ಲಿ ತಳಮಳ ಹೆಚ್ಚಾಗ್ತಿದೆ.. ಸ್ವಪಕ್ಷದ ಶಾಸಕರೇ ಮಾಡ್ತಿರೋ ಆರೋಪಗಳು ಸರ್ಕಾರವನ್ನು ಸಂಕಷ್ಟಕ್ಕೆ ತಳ್ತಿದೆ.. ದಿನ ಕಳೆದಂತೆ ಅಸಮಾಧಾನ ಹೊರ ಹಾಕ್ತಿರೋ ಶಾಸಕರ ಪಟ್ಟಿ ಬೆಳೀತಿದೆ.. ಬಿ.ಆರ್.ಪಾಟೀಲ್ ಬಳಿಕ ಈಗ ಮತ್ತೊಬ್ಬ ಶಾಸಕ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದು, ಸರ್ಕಾರಕ್ಕೆ ಮತ್ತಷ್ಟು ಇರುಸುಮುರಿಸು ಉಂಟು ಮಾಡಿದೆ..
ಸರ್ಕಾರದಲ್ಲಿ ನಡೀತಿರೋದು 224 ಶಾಸಕರಿಗೂ ಗೊತ್ತು
ಕ್ಷೇತ್ರದ ಯಾವುದೇ ಅನುದಾನಕ್ಕೆ ಪೇಮೆಂಟ್ ಆಗಲೇಬೇಕು
ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
CMಗೆ ಮಾನ ಮರ್ಯಾದೆ ಇದೀಯಾ, ಪಕ್ಕದಲ್ಲಿ ಕೂರಿಸ್ಕೋತಾರೆ
ಪರೋಕ್ಷವಾಗಿ ವಸತಿ ಸಚಿವ ಜಮೀರ್ ವಿರುದ್ಧ HDK ಕಿಡಿ
ಜಾತಿಗಣತಿಯನ್ನು ಮತ್ತೆ ಮರುಪರಿಶೀಲನೆ ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಸಂಬಂಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಜಾತಿಗಣತಿಗಾಗಿ ವ್ಯಯವಾಗಿರುವ 167 ಕೋಟಿ ರೂ. ದುಂದುವೆಚ್ಚಕ್ಕೆ ಹೊಣೆಯಾರು ಎಂದು ಪ್ರಶ್ನಿಸಿದ್ದಾರೆ.
ನೋಡ್ರಿ ನಾವು ತಿಂಗಳು ತಿಂಗಳು ಗೃಹಲಕ್ಷ್ಮಿ ಯೋಜನೆಯ ಹಣ ಕೊಡ್ತೀವಿ ಅಂತಾ ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ಟುತ್ತಾ ಇರಬೇಕು... ನಾವು ದುಡ್ಡು ಕೊಡ್ತಾ ಇರಬೇಕು. ಈಗ ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆಯೇ ಹಣ ಬಂದುಬಿಡುತ್ತಾ? ಎಂದು ಡಿಸಿಎಂ ಡಿ.ಕೆ.ಶಿಕುಮಾರ್ ಪ್ರಶ್ನಿಸಿದ್ದಾರೆ.
ಗಂಗಾವತಿ ಶಾಸಕರಾಗಿದ್ದ ಜನಾರ್ಧನ ರೆಡ್ಡಿ ಅವರಿಗೆ ನ್ಯಾಯಾಲಯವು ಏಳು ವರ್ಷಗಳ ಶಿಕ್ಷೆಗೆ ಗುರಿಪಡಿಸಿದ್ದು, ಸಂವಿಧಾನದ ನಿಯಮದಂತೆ ಅವರು ಅನರ್ಹರಾಗುತ್ತಾರೆ. ಈ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೆ ಯಾರು ಅಭ್ಯರ್ಥಿಯಾಗುತ್ತಾರೆ ಎಂದು ಪಕ್ಷ ತೀರ್ಮಾನಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿಯ ಮುಖಂಡರು, ಹಿಂದು ಪರ ಸಂಘಟನೆಯವರು ಮಂಗಳೂರು ಘಟನೆ ವಿಚಾರವಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಪ್ರಚೋದನಾತ್ಮಕವಾಗಿ ಮಾತನಾಡಿ, ಸಮಾಜದಲ್ಲಿ ಶಾಂತಿ ಕದಡಿ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂಬುದು ಅವರ ಉದ್ದೇಶವೆಂದು ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸುವ ಸಂಬಂಧ ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಕುರ್ಚಿಯ ವ್ಯಾಲಿಡಿಟಿ ಅಂತ್ಯಕ್ಕೆ ಸಮೀಪಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹತಾಶೆ ಬಹುವಾಗಿ ಕಾಡುತ್ತಿದೆ. ಸಾರ್ವಜನಿಕ ಜೀವನದಲ್ಲಿದ್ದೇನೆ ಎಂಬ ಪರಿಜ್ಞಾನವೂ ಇಲ್ಲವೆಂಬಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.
ರಾಜ್ಯದಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನ ವಾಪಸ್ ಕಳುಹಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕೇಂದ್ರದ ಸೂಚನೆಗೆ ನಾವು ಸಹಕಾರ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಎಸ್‌ಸಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಮಹಿಳೆಯೊಬ್ಬರ ಮಾಂಗಲ್ಯಸರವನ್ನು ತೆಗೆಸಿದ್ದರು. ಈ ಬಗ್ಗೆ ಮಾಧ್ಯಮದವರು ಕಾಂಗ್ರೆಸ್ಸಿಗರನ್ನು ಪ್ರಶ್ನಿಸಿದರೆ, “ಏಯ್ ಅದು ರೂಲ್ಸು ಕಣ್ರಿ” ಎಂದು ಅಬ್ಬರಿಸಿದ್ದರು. ಆದರೆ ಅದೇ ಮಾಧ್ಯಮದವರು ಹಾಗಾದರೆ ರೂಲ್ಸ್ ಪ್ರಕಾರ ಹಿಜಾಬ್ ಅನ್ನು ಏಕೆ ತೆಗೆಸಲಿಲ್ಲವೆಂದು ಮರು ಪ್ರಶ್ನೆ ಹಾಕಿದರೆ ಅದಕ್ಕೆ ಕಾಂಗ್ರೆಸ್ಸಿಗರದ್ದು “ನೋ ಕಾಮೆಂಟ್ಸ್..ನೋ ಕಾಮೆಂಟ್ಸ್” ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಬಾಗಲಕೋಟೆಯಲ್ಲಿ ಮೊಳಗಲಿದೆ ಬಿಜೆಪಿ ಜನಾಕ್ರೋಶ ರಣಕಹಳೆ
ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ ಜನಾಕ್ರೋಶ ಯಾತ್ರೆ
ಬಸವೇಶ್ವರ ವೃತ್ತ ಸೇರಿ ಪ್ರಮುಖ ಬೀದಿಗಳಲ್ಲಿ ನಡೆಯಲಿರುವ ಯಾತ್ರೆ
ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಪಾದಯಾತ್ರೆ
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ದ ಬಿಜೆಪಿ ಜನಾಕ್ರೋಶ ಯಾತ್ರೆ
ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ರಾಜ್ಯದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗೆ ಹೊಸ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿದಿದೆ. 2024ರ ನವೆಂಬರ್ 25ರ ಸುತ್ತೋಲೆಯನ್ನು ಉಲ್ಲಂಘಿಸಿ ಕೆಲವು ಪ್ರಾಧಿಕಾರಗಳು ಹೊಸ ಅಧಿಸೂಚನೆ ಹೊರಡಿಸಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ನವೆಂಬರ್ 28ರ ನಂತರದ ಯಾವುದೇ ಹೊಸ ನೇಮಕಾತಿ ಅಧಿಸೂಚನೆಗಳನ್ನು ತಕ್ಷಣ ರದ್ದುಗೊಳಿಸಲು ಸರ್ಕಾರ ಸೂಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.