BJP vs CONGRESS: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಪಿ.ಎಸ್.ಗೌಡರ್ ಆತ್ಮಹತ್ಯೆ ಪ್ರಕರಣವು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಗೆ ಮತ್ತೊಂದು ಅಸ್ತ್ರವನ್ನು ನೀಡಿದಂತಾಗಿದೆ.
ಚುನಾವಣೆ ವೇಳೆ 3 ಸಾವಿರ, 5 ಸಾವಿರ ಬೆಲೆಯ ಉಡುಗೊರೆ ಕೊಡುತ್ತೇವೆ ಎಂದು ಹೇಳಿ ಗಿಫ್ಟ್ ಕೂಪನ್ ಗಳನ್ನು ಹಂಚಿ ಚುನಾವಣೆಯಲ್ಲಿ ಗೆದ್ದರು. ಅಮಾಯಕ ಹೆಣ್ಣುಮಕ್ಕಳನ್ನು ನಂಬಿಸಿ ಮೋಸ ಮಾಡಿದರು ಎಂದು ರಾಜ್ಯ ಕಾಂಗ್ರೆಸ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗುಡುಗಿದರು.
ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಅನುಮಾನವೇ ಇಲ್ಲ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿ ಆಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಹೊರಡಿಸಿ ಶ್ವೇತಪತ್ರವನ್ನು. ಬನ್ನಿ ಚರ್ಚೆಗೆ, ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ, ಉತ್ತರಿಸಿ ಎಂದು ಎಚ್ಡಿಕೆ ಸವಾಲು ಹಾಕಿದ್ದಾರೆ.
Congress Guarantee Schemes: ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದೆಂದರೆ ಕೋಟ್ಯಂತರ ಸಂಖ್ಯೆಯಲ್ಲಿರುವ ಬಡ ಫಲಾನುಭವಿಗಳನ್ನು ವಿರೋಧಿಸುವುದೆಂದೇ ಅರ್ಥ. ಯಾಕೆ ಬಡವರ ಹೊಟ್ಟೆಗೆ ಹೊಡೆಯುವ ಕಿಚ್ಚು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Congress Guarantee Scheme: ಜನರು ನೀವು ಕೊಟ್ಟ ಮಾತುಗಳನ್ನು ಹೆಚ್ಚು ನಂಬಿದ್ದಾರೆ. ಎಲ್ಲರಿಗೂ ಗೃಹಲಕ್ಷ್ಮಿ, ಎಲ್ಲರಿಗೂ 10 ಕೆಜಿ ಉಚಿತ ಅಕ್ಕಿ, ಎಲ್ಲರಿಗೂ ಗೃಹಜ್ಯೋತಿ, ಡಿಗ್ರಿಯಾದವರಿಗೆ ನಿರುದ್ಯೋಗ ಭತ್ಯೆ ಅಂತಾ ಹೇಳಿದ್ದೀರಿ. ಈಗ ಎಲ್ಲದಕ್ಕೂ ಕಂಡಿಷನ್ ಹಾಕಿ ಎಲ್ಲದಕ್ಕೂ ಏಜೆಂಟ್ಗಳು ಹುಟ್ಟಿಕೊಂಡಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರೊಟೆಸ್ಟ್ ಮಾಡೋಕೆ ಸಜ್ಜು ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ನಿನ್ನೆ ಬಿಜೆಪಿ ಪ್ರತಿಭಟನೆ ಮಾಡಿತ್ತು ಇದಕ್ಕೆ ಪ್ರತಿಯಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಬಿಜೆಪಿ ಕಚೇರಿಗಳಿಗೆ ಮುತ್ತಿಗೆ ಹಾಕಿ ಪ್ರೊಟೆಸ್ಟ್ ಮಾಡೋಕೆ ಸಜ್ಜು ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ನಿನ್ನೆ ಬಿಜೆಪಿ ಪ್ರತಿಭಟನೆ ಮಾಡಿತ್ತು ಇದಕ್ಕೆ ಪ್ರತಿಯಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
5 ಗ್ಯಾರೆಂಟಿಗಳನ್ನು ಈಡೇರಿಸಲು ವಾರ್ಷಿಕವಾಗಿ 59,000 ಕೋಟಿ ರೂ. ಬೇಕಿದೆ. ಈ ಹಣವನ್ನು ಖರ್ಚು ಮಾಡಲು ನಾವು ಸಿದ್ಧರಿದ್ದು, ನಮ್ಮ ಐದೂ ಗ್ಯಾರೆಂಟಿಗಳನ್ನು ಜಾರಿ ಮಾಡುವುದು ನಿಶ್ಚಿತವೆಂದು ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಪ್ರಮುಖ ಗ್ಯಾರಂಟಿಗಳಲ್ಲಿ ಮೊದಲ ಗ್ಯಾರಂಟಿ ಜೂನ್ 11 ರಂದು ಸಮಸ್ತ ಕನ್ನಡಿಗರಿಗೆ ಸಮರ್ಪಣೆ ಆಗಲಿದೆ. ಕೇಂದ್ರ ಸರ್ಕಾರದ ಬೆಲೆ ಏರಿಕೆ, ಹಣದುಬ್ಬರದ ಕಾರಣಕ್ಕೆ ಸಂಕಷ್ಟಕ್ಕೆ ತುತ್ತಾಗಿರುವ ಕನ್ನಡ ನಾಡಿನ ಮಹಿಳಾ ಸಮೂಹಕ್ಕೆ ಕೊಂಚ ನಿರಾಳ ನೀಡುವ ಶಕ್ತಿ ಯೋಜನೆಯ ಚಾಲನೆ ಅತ್ಯಂತ ಅರ್ಥಪೂರ್ಣವಾಗಿ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಸಾರಿಗೆ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡಲು ಬದ್ದವಾಗಿರುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ, ಜೂನ್ 11 ರಿಂದ ಉಚಿತ ಬಸ್ ಸೇವೆ ಪ್ರಾರಂಭವಾಗಲಿದೆ. ಓಲ್ವೋ, ಐಷಾರಾಮಿ ಬಸ್ ಗಳನ್ನ ಹೊರತುಪಡಿಸಿ ರಾಜ್ಯದ ಎಲ್ಲಾ ಸಾರಿಗೆ ಬಸ್ ಗಳಲ್ಲಿ ಉಚಿತ ಬಸ್ ಸೇವೆ ಲಭ್ಯವಿದೆ ಎಂದು ಸ್ಪಷ್ಟಪಡಿಸಿದೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ತಮ್ಮ ಚುನಾವಣೆ ಸೋಲಿನ ಆತ್ಮವಲೋಕನ ಸಭೆ ಕರೆದಿದ್ರು. ಈ ವೇಳೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಹಾಗೂ ಮುಂದಿನ ಲೋಕಸಭೆ ಚುನಾವಣೆ ಬಗ್ಗೆ ಮಾತನಾಡಿದ್ರು. ಇದೇ ವೇಳೆ ಬಿಜೆಪಿ ನಾಐಕರ ವಿರುದ್ಧ ಹರಿಹಾಯ್ದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ದಿಲ್ಲಿಯ ಬಿಜೆಪಿ ನಾಯಕರು ನೀರಿಕ್ಷೆ ಮಾಡಿರಲಿಲ್ಲ ಎಂದು ಕುಟುಕಿದ್ರು
ಬೆಳಗಾವಿಯಲ್ಲಿ ಆಯೋಜಿಸಿರುವ ಕಾಂಗ್ರೆಸ್ ಯುವಧ್ವನಿ ಸಮಾವೇಶ ಮತ್ತು ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸುವ ಮೂಲಕ ರಾಜ್ಯ ವಿಧಾನಸಭೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.