ಕಾಂಗ್ರೆಸ್ ಶಾಸಕರಾದ ಮಂಜುನಾಥ ಭಂಡಾರಿ, ಎಸ್.ರವಿ, ಅನಿಲ್ ಕುಮಾರ್, ರಾಜೇಂದ್ರ ರಾಜಣ್ಣ, ದಿನೇಶ್ ಗೂಳಿಗೌಡ, ಸುನಿಲ್ ಗೌಡ ಪಾಟೀಲ್, ಚಂದ್ರಶೇಖರ ಪಾಟೀಲ, ಚೆನ್ನರಾಜು, ಮಧು ಮಾದೇಗೌಡ, ಡಾ.ತಿಮ್ಮಯ್ಯ, ರಾಮೋಜಿ ಗೌಡ ,DT ಶ್ರೀನಿವಾಸ, ಶರಣಗೌಡ ಪಾಟೀಲ್, ಭೀಮರಾವ್ ಪಾಟಿಲ. ತಿಪ್ಪಣ್ಣಾ ಕಮಕನೂರು ಅವರು ಜಂಟಿ ಪತ್ರಿಕಾ ಹೇಳಿಕೆ ನೀಡಿ, ರಾಜ್ಯಪಾಲರ ನಡೆಯ ಬಗ್ಗೆ ಧ್ವನಿ ಎತ್ತಿದ್ದಾರೆ.
ಮಳೆಗಾಲದ ಅಧಿವೇಶನ ಇನ್ನೆರಡೇ ದಿನ ಬಾಕಿ ಉಳಿದಿದೆ.. 2 ದಿನದಲ್ಲಿ 10 ಮಸೂದೆ ಅಂಗೀಕರಿಸಬೇಕಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇಂದು, ನಾಳೆ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಿದೆ. ಇಂದು, ನಾಳೆ ಕಾಂಗ್ರೆಸ್ನ ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಿರಬೇಕೆಂದು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ವಿಪ್ ನೀಡಿದ್ದಾರೆ.
ದೆಹಲಿ ಭೇಟಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ‘ಕಾವೇರಿ ನೀರು ಬಳಕೆ ವಿಚಾರವಾಗಿ ಸುಪ್ರೀಂಕೋರ್ಟ್ 2018ರಲ್ಲಿ ಕೊಟ್ಟ ತೀರ್ಮಾನ ಅನುಸಾರ ಬೆಂಗಳೂರಿಗೆ 24 ಟಿಎಂಸಿ ನೀರು ಬಳಸಿಕೊಳ್ಳಲು ವ್ಯವಸ್ಥೆ ಮಾಡಲು ಆದೇಶ ನೀಡಲಾಗಿದೆ ಎಂದು ತಿಳಿಸಿದರು.
ಕಾಂಗ್ರೆಸ್ನ 45 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆಂಬ ಮಾಹಿತಿ ಗುಪ್ತಚರ ಇಲಾಖೆಯಿಂದ ಸರ್ಕಾರಕ್ಕೆ ಸಿಕ್ಕಿದೆ. ಅದನ್ನು ತಡೆಯಲು ಸಿಎಂ, ಡಿಸಿಎಂ ಕಸರತ್ತು ನಡೆಸಿದ್ದಾರೆ' ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
2023ರ ಚುನಾವಣೆ ವೇಳೆ ನಾವು ನೀಡಿದ್ದ ಐದು ಗ್ಯಾರಂಟಿಗಳನ್ನೂ ನಾವು ಈಡೇರಿಸಲು ಶುರು ಮಾಡಿದ್ದೇವೆ. ಕೋಟಿಗಟ್ಟಲೆ ಕನ್ನಡಿಗರು ಈಗಾಗಲೇ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ಬಿಜೆಪಿ ಕಾರ್ಯಕರ್ತರು, ಬೆಂಬಲಿಗರೂ ಅರ್ಜಿ ಸಲ್ಲಿಸಿ ಫಲಾನುಭವಿಗಳಾಗುತ್ತಿದ್ದಾರೆ. ಇದನ್ನು ನಾವು ಸ್ವಾಗತಿಸಬೇಕು. ಕಾಂಗ್ರೆಸ್ ಶಾಸಕರು, ಕಾರ್ಯಕರ್ತರು, ಅಭಿಮಾನಿಗಳು ಮತ್ತು ಮತದಾರರು ತಲೆ ಎತ್ತಿ ಹೆಮ್ಮೆ ಪಡುವ ಸಂದರ್ಭವನ್ನು ನಮ್ಮ ಸರ್ಕಾರ ಸೃಷ್ಟಿಸಿದೆ ಎಂದರು.
Karnataka Cabinet Expansion: ನಾಳೆಯೇ ಸುಮಾರು 20 ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಶುಕ್ರವಾರ ಕಾಂಗ್ರೆಸ್ ವರಿಷ್ಠರು ಅನುಮೋದನೆ ನೀಡುವ ಸಾಧ್ಯತೆಯಿದೆ.
ರಾಜ್ಯದ ಗದ್ದುಗೆ ಏರಲು ಸಿದ್ಧವಾಗ್ತಿದೆ ಕಾಂಗ್ರೆಸ್ ರಣತಂತ್ರ. ಹೆಚ್ಚಿನ ಸಮೀಕ್ಷೆಗಳಲ್ಲಿ ಅತಂತ್ರ ಫಲಿತಾಂಶ ಹಿನ್ನೆಲೆ ತಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳಲು ಮುಂದಾದ ಕಾಂಗ್ರೆಸ್. ತಡರಾತ್ರಿ ಝೂಮ್ ಮೀಟಿಂಗ್ ನಡೆಸಿದ ʻಕೈʼ ನಾಯಕರು. ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಜೊತೆಗೂ ಝೂಮ್ ಮೀಟಿಂಗ್. ಸುರ್ಜೇವಾಲ, ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಮೀಟಿಂಗ್. ಸ್ಪಷ್ಟ ಬಹುಮತ ಬರದಿದ್ದರೆ ಗೆದ್ದವರನ್ನು ಹಿಡಿದಿಟ್ಟುಕೊಳ್ಳಲು ಮೀಟಿಂಗ್.
ಇತ್ತೀಚಿಗೆ ಕೆಪಿಸಿಸಿ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಅರ್ಜಿ ಅವಕಾಶ ಮುಕ್ತಗೊಳಿಸಿತ್ತು. ಈ ಕಾರಣ ಹಾಲಿ ಹಾಗೂ ಮಾಜಿ ಶಾಸಕರು, ಆಕಾಂಕ್ಷಿಗಳ ವಿರುದ್ಧ ಕ್ಷೇತ್ರದಲ್ಲಿ ಪೈಪೋಟಿ ನಡೆಸುವಂತಾಗಿದೆ. ಇದಲ್ಲದೆ ಕೆಪಿಸಿಸಿ ಪ್ರತಿ ಕ್ಷೇತ್ರದಿಂದ 1 ರಿಂದ 3 ಅಭ್ಯರ್ಥಿಗಳ ಲಿಸ್ಟ್ ಕಳುಹಿಸಲು ಸೂಚಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.