Cooker Bomb Blast : ಶಂಕಿತರು ಸೋಶಿಯಲ್ ಮೀಡಿಯಾದಲ್ಲಿ ಮಾಡೋ ಪೋಸ್ಟ್, ವಿಡಿಯೋಗಳಿಗೆ ಕೋಟಿಗಟ್ಟಲೆ ಬೀಳ್ತಿತ್ತು ಹಣ ಬರುತ್ತಿದೆ. ಹಾಗಾದ್ರೆ ಶಂಕಿತರಿಗೆ ಹಣ ಹೇಗೆ ಟ್ರಾನ್ಸಫರ್ ಆಗ್ತಿತ್ತು ಗೊತ್ತಾ.. ಎಲ್ಲಿಂದ ಶಂಕಿತರಿಗೆ ಹಣ ಬರ್ತಿತ್ತು..? ಟೆರರಿಸಂನಲ್ಲಿ ಅಮೌಂಟ್ ಟ್ರಾನ್ಸ್ಫರಿಂಗ್ ಹೇಗೆಲ್ಲಾ ನಡೆಯುತ್ತೆ ಎಂದರೆ. ಶಂಕಿತರ ಅಕೌಂಟ್ ಗೆ ಕ್ರಿಪ್ಟೋಕರೆನ್ಸಿ ಮೂಲಕ ಕೋಟಿ ಕೋಟಿ ಹಣ ಬರ್ತಿತ್ತು.
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುರುಷೋತ್ತಮ ಪೂಜಾರಿಯ ಕುಟುಂಬಕ್ಕೆ ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ನಿರ್ಮಿಸಲಾದ ನವೀಕೃತ ಮನೆಯನ್ನು ಹಸ್ತಾಂತರಿಸಲಾಯಿತು. ಆದರೆ ಸರ್ಕಾರ ನೆರವು ನೀಡಿಲ್ಲ ಎಂದು ಆರೋಪಿಸಿದ್ದಾರೆ..
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಮತ್ತು ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಹೊಣೆಯನ್ನ ಐಎಸ್ಐಎಸ್ ಉಗ್ರ ಸಂಘಟನೆ ಹೊತ್ತಿಕೊಂಡಿದೆ. ಐಸಿಸ್ ಸಂಘಟನೆಯ ವಕ್ತಾರ ಇಸ್ಲಾಮಿಕ್ ಸ್ಟೇಟ್ಸ್ ಕೊರಸನ್ ಪ್ರಾವಿನ್ಸ್ ನಡೆಸುವ ವಾಯ್ಸ್ ಆಫ್ ಕೂರಸ ನಿಯತಕಾಲಿಕೆಯಲ್ಲಿ ಮಂಗಳೂರು ಮತ್ತು ತಮಿಳುನಾಡಿನ ಕೊಯಮತ್ತೂರು ಸ್ಪೋಟದ ಹೊಣೆ ಹೊತ್ತಿರುವ ಕುರಿತಾಗಿ ಪ್ರಕಟಿಸಲಾಗಿದೆ.
ಮಂಗಳೂರಿನ ಕಂಕನಾಡಿಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿದ್ದ ಶಂಕಿತ ಉಗ್ರ ಶಾರೀಕ್ ನನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿದೆ. ಸ್ಫೋಟದ ವೇಳೆ ಗಾಯಗೊಂಡಿದ್ದ ಆರೋಪಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಮಂಗಳೂರು ಸ್ಪೋಟ ಪ್ರಕರಣದಲ್ಲಿ ನಕಲಿ ಆಧಾರ ಕಾರ್ಡ್ ಬಳಕೆ ಹಿನ್ನಲೆ ಅಸಲಿ ವ್ಯಕ್ತಿ ತುಮಕೂರಿನಲ್ಲಿ ರೈಲ್ವೇ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಪ್ರೇಮ್ ರಾಜ್ ಹುಟಗಿಯನ್ನು ತುಮಕೂರು ಪೊಲೀಸರು ವಿಚಾರಣೆ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.