Covid-19 JN Update: ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ 232 ರೋಗಿಗಳು ಸೋಂಕು ಮುಕ್ತರಾಗಿದ್ದಾರೆ ಅಥವಾ ರಾಜ್ಯದಿಂದ ಹೊರಗೆ ತೆರಳಿದ್ದಾರೆ. ಇಲ್ಲಿಯವರೆಗೆ ಒಟ್ಟು 68,38,761 ರೋಗಿಗಳು ಸೋಂಕು ಮುಕ್ತರಾಗಿದ್ದಾರೆ.
Karnataka Covid Cases: ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಆರೋಗ್ಯ ಇಲಾಖೆ ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಮಾರ್ಚ್ 21 ರಿಂದ ಪ್ರತಿದಿನ 100 ಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ಕೊರೊನಾದ ಸಾಪ್ತಾಹಿಕ ಸಾವಿನ ಪ್ರಮಾಣ 0.55 ಪ್ರತಿಶತ ಆಗಿದೆ.
ಈ ಮೂಲಕ ಇಂದು ಬೆಂಗಳೂರಿನ ಪಾಲಿಕೆಯ ಆರೋಗ್ಯಾಧಿಕಾರಿಗಳ ತಂಡ ನಗರದ ವಿವಿಧ ಕಡೆ ಇಂದು ತಪಾಸಣೆ ಮೂಲಕ ಎರಡನೇ ಡೋಸ್ ಪಡೆದವರ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಬಿಟಿಎಂ ಲೇಔಟ್ ನ ರೆಸ್ಟೋರೆಂಟ್ ಹಾಗೂ ಹೋಟೆಲ್ ಗಳಿಗೆ ದಿಢೀರ್ ಭೇಟಿ ನೀಡಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ ಕೊರೊನಾ ಬಗ್ಗೆ ಆರೋಗ್ಯ ಸಚಿವರು ಮತ್ತು ವಿಪತ್ತು ನಿರ್ವಹಣಾ ಸಚಿವರ ಚರ್ಚಿಸಲಿದ್ದಾರೆ. ಕೇಂದ್ರದಿಂದ ಕೆಲವು ಮಾರ್ಗಸೂಚಿಗಳು ಬಂದಿದ್ದು, ರಾಜ್ಯ ಸರ್ಕಾರದಿಂದಲೂ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು. ಈ ಕುರಿತು ನಾಳೆ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು.
ಬೇರೆ ದೇಶಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್ಐ ಮತ್ತು ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು
ಕೋವಿಡ್ ನಿಂದ ಗುಣಮುಖರಾದವರ ಪೈಕಿ ಹಲವರಲ್ಲಿ ಕ್ಷಯ ರೋಗ ಪತ್ತೆಯಾಗಿದೆ.ಈ ಕುರಿತು ವಿಸ್ತೃತವಾದ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (K Sudhakar) ತಿಳಿಸಿದರು.
ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ.ಆದರೆ ಲಸಿಕಾಕರಣದಿಂದ ನಿಯಂತ್ರಣ ಮಾಡಲಾಗಿದೆ. ಕೊರೊನಾ ನಿಯಂತ್ರಣದಲ್ಲಿ ಸಾಗಬೇಕಾದ ಹಾದಿ ಇನ್ನೂ ದೂರವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ರಾಜ್ಯದಲ್ಲಿ ಮಂಗಳವಾರದಂದು 202 ಹೊಸ ಕರೋನವೈರಸ್ (Coronavirus) ಪ್ರಕರಣಗಳು ಮತ್ತು ಏಳು ಸಂಬಂಧಿತ ಸಾವುಗಳ ವರದಿಯಿಂದಾಗಿ ಈಗ ಒಟ್ಟು ಪ್ರಕರಣ ಮತ್ತು ಸಾವುಗಳ ಸಂಖ್ಯೆ ಕ್ರಮವಾಗಿ 39,41,265 ಮತ್ತು 39,957 ಕ್ಕೆ ತಲುಪಿದೆ.
ಜನವರಿ 12 ರಂದು ಧಾರವಾಡ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲ್ಲೂಕಿನಾದಾದ್ಯಂತ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ದಿನಾಂಕ 13-01-2022 ರಿಂದ ಮುಂದಿನ ಆದೇಶವಾಗುವವರೆಗೆ ಶಾಲೆಗಳನ್ನು ತೆರೆಯದಂತೆ ಆದೇಶಿಸಿರುವದನ್ನು ಹಿಂಪಡೆಯಲಾಗಿದೆ. ಜನೆವರಿ 24 ರ ಸೋಮವಾರದಿಂದ ಶಾಲೆಗಳನ್ನು ಪುನರ್ ಆರಂಭಿಸಲು ಜಿಲ್ಲಾಧಿಕಾರಿಗಳು ನಿರ್ದೇಶಿಸಿದ್ದಾರೆ.
ಕೋವಿಡ್-19 ರ ಮೊದಲ ಅಲೆ ಬಂದಾಗ ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಕೇರ್ ಸೆಂಟರ್ಗಳಿಗೆ ದಾಖಲಾಗುತ್ತಿದ್ದರು. 2ನೇ ಅಲೆ ಬಂದಾಗ ಆಸ್ಪತ್ರೆಗಳಿಗೆ ಹೆಚ್ಚು ಸೋಂಕಿತರು ದಾಖಲಾದರು. ಈಗ 3ನೇ ಅಲೆ ಬಂದಿದ್ದು, ಸೋಂಕಿನ ತೀವೃತೆ ಕಡಿಮೆ ಇರುವುದರಿಂದ 94% ರಿಂದ 95% ಜನ ಸೋಂಕಿತರು ಹೋಮ್ ಐಸೋಲೇಷನ್ ಆಗುತ್ತಿದ್ದಾರೆ.
ಕೊರೊನಾ ಉಲ್ಭಣಿಸುತ್ತಿದ್ದರೂ ರೋಗಿಗಳ ಆರೈಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ವಹಿಸಿ ರಾಜ್ಯ ಬಿಜೆಪಿ ಸರ್ಕಾರ, ಬೆಚ್ಚಗೆ ಮಲಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮತ್ತು ಸೋಂಕಿನ ತೀವೃತೆ ಕಡಿಮೆ ಇರುವುದರಿಂದ ಬಹಳಷ್ಟು ಜನ ಸೋಂಕಿತರು ಹೋಂ ಐಸೋಲೇಷನ್ ಆಗುತ್ತಿದ್ದಾರೆ.ರಾಜ್ಯಸರ್ಕಾರದ ಆದೇಶಗಳ ಪ್ರಕಾರ ಹೋಂ ಐಸೋಲೇಷನ್ ಅಡಿಯಲ್ಲಿ ರೋಗಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡಲು ತಂಡವನ್ನು ರಚಿಸಲಾಗಿದೆ.
ಮಾಸ್ಕ ಧರಿಸಲ್ಲ ಎಂದು ಉದ್ದಟತನದ ಹೇಳಿಕೆ ನೀಡಿದ್ದ ಸಚಿವ ಉಮೇಶ್ ಕತ್ತಿ ವಿರುದ್ಧ ಹರಿಹಾಯ್ದಿರುವ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ 'ಕತ್ತಿ ಮಂತ್ರಿ ಆಗಲಿಕ್ಕೆ ಯೋಗ್ಯರಲ್ಲ' ಎಂದು ಅವರು ಕಿಡಿ ಕಾರಿದ್ದಾರೆ.
ಕೋವಿಡ್-19 ಕುರಿತಾಗಿ ವಿವಿಧ ಮಾಧ್ಯಮಗಳ ಮೂಲಕ ಕೆಲವು ವೈಧ್ಯಕೀಯ ಪರಿಣಿತರು ಹಾಗೂ ವೈದ್ಯರು ಸಾರ್ವಜನಿಕರಿಗೆ ಅಪೂರ್ಣವಾದ, ತಪ್ಪು ಮತ್ತು ಆಧಾರರಹಿತ ಮಾಹಿತಿಗಳನ್ನು ನೀಡಿದರೆ ಪ್ರಕರಣ ದಾಖಲಾಯಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತಾಲ ತಿಳಿಸಿದೆ.
ಕರ್ನಾಟಕದಲ್ಲಿ ಭಾನುವಾರ 34,047 ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರಿನಲ್ಲಿ 21,071 ಮತ್ತು ಏಳು ಸಾವುಗಳು ಸೇರಿವೆ.ಕಳೆದ 24 ಗಂಟೆಗಳಲ್ಲಿ ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ.19.29ಕ್ಕೆ ತಲುಪಿದೆ.
ಸಾರ್ವಜನಿಕರು ಅತ್ಯಾವಶ್ಯಕ ಮತ್ತು ತುರ್ತು ಕಾರ್ಯಚಡುವಟಿಕೆಗಳನ್ನು ಹೊರತುಪಡಿಸಿ, ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 05 ಗಂಟೆಯವರೆಗೆ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.