Cyclone Yaas Bihar Update: ರಾಜಧಾನಿ ಪಾಟ್ನಾವನ್ನು ವೈಶಾಲಿಗೆ ಸಂಪರ್ಕಿಸುವ ಭದ್ರಾ ಘಾಟ್ನಲ್ಲಿರುವ ಪಿಪಾ ಸೇತುವೆಯ ಅಪ್ರೋಚ್ ರಸ್ತೆ ಕುಸಿದಿದೆ. ಅದೇ ಸಮಯದಲ್ಲಿ, ವೈಶಾಲಿಯ ರಾಘೋಪುರದಲ್ಲಿ ಭಾರಿ ಮಳೆಯಿಂದಾಗಿ ರುಸ್ತಾಂಪುರ್ ಪೀಪಾಪುಲ್ ಹಾನಿಗೊಳಗಾಗಿದೆ ಎಂದು ವರದಿಯಾಗಿದೆ.
ಯಾಸ್ ಚಂಡಮಾರುತ ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳನ್ನು ಪ್ರವೇಶಿಸಿದೆ. ಕರಾವಳಿ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರಗಳಲ್ಲಿ ರಕ್ಕಸ ಗಾತ್ರದ ಅಲೆಗಳು ಏಳಲಾರಂಭಿಸಿವೆ.
ಯಾಸ್ ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾ ಮತ್ತು ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಬಾರೀ ಬಿರುಗಾಳಿ ಸಹಿತ ಮಳೆಯಾಗುತ್ತಿದೆ. ಇನ್ನು ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪೋರ್ ಜಿಲ್ಲೆಯ ನ್ಯೂ ದಿಘಾ ಸೀ ಬಿಚ್ ಬಳಿಯ ವಸತಿ ಪ್ರದೇಶಗಳಿಗೆ ಸಮುದ್ರದ ನೀರು ನುಗ್ಗಿರುವ ಬಗ್ಗೆಯೂ ವರದಿಯಾಗಿದೆ.
ಬುಧವಾರ ಬೆಳಿಗ್ಗೆ ಯಾಸ್ ವೇಗವು ಗಂಟೆಗೆ 90 ರಿಂದ 100 ಕಿ.ಮೀ ವೇಗದೊಂದಿಗೆ ಒಡಿಶಾ ಕರಾವಳಿಯನ್ನು ತಲುಪುತ್ತದೆ. ನಂತರ ಪೂರ್ವ ಮಿಡ್ನಾಪೋರ್ ಜಿಲ್ಲೆಗಳನ್ನು ತಲುಪಿದಾಗ 155 ರಿಂದ 165 ರವರೆಗೆ ವೇಗವನ್ನು ಪಡೆಯಲಿದೆ. ಇದು ಗಂಟೆಗೆ 185 ಕಿಲೋಮೀಟರ್ ವರೆಗೆ ತಲುಪುವ ಸಾಧ್ಯತೆ ಇದೆ ಎಂದು, ಕೋಲ್ಕತಾ ಮೂಲದ ಪ್ರಾದೇಶಿಕ ಹವಾಮಾನ ವಿಭಾಗದ ಉಪನಿರ್ದೇಶಕ ಸಂಜೀಬ್ ಬಂದೋಪಾಧ್ಯಾಯ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA), ದೂರಸಂಪರ್ಕ, ವಿದ್ಯುತ್, ನಾಗರಿಕ ವಿಮಾನಯಾನ, ಭೂ ವಿಜ್ಞಾನ ಸಚಿವಾಲಯಗಳ ಕಾರ್ಯದರ್ಶಿಗಳೊಂದಿಗೆ ಸಭೆ
Cyclone Yaas 2021 - ಬಂಗಾಳ ಕೊಲ್ಲಿಯಲ್ಲಿ ನಿರ್ಮಾಣಗೊಂಡ 'ಯಾಸ್' ಚಂಡಮಾರುತದ ಅಪಾಯವನ್ನು ಪರಿಗಣಿಸಿರುವ ಓಡಿಷಾ ಸರ್ಕಾರ ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಅದರ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಿದೆ. ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುರೇಶ ಚಂದ್ರ ಮಹಾಪಾತ್ರಾ, ರಾಜ್ಯದ ಆಡಳಿತ ಪರಿಸ್ಥಿತಿಯನ್ನು ಸಂಪೂರ್ಣವಾಗಿ ನಿರ್ವಹಿಸಲು ಸನ್ನದ್ಧವಾಗಿದೆ. ಜೊತೆಗೆ ಈ ಕುರಿತು ನೌಕಾಪಡೆ ಹಾಗೂ ಕೋಸ್ಟ್ ಗಾರ್ಡ್ ಗಳಿಗೆ ಮನವಿ ಮಾಡಿರುವ ರಾಜ್ಯ ಸರ್ಕಾರ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಲು ಹೇಳಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮೇ 26ರಂದು ಬೆಳಗ್ಗೆ ಒಡಿಷಾ-ಬಂಗಾಳ ಕರಾವಳಿ ತಲುಪುವ ನಿರೀಕ್ಷೆ ಇದೆ ಎಂದು ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.