ತಾವು ಕುಟುಂಬ ಸದಸ್ಯರ ಜತೆ ಕೈಗೊಳ್ಳುತ್ತಿರುವ ಒಂದು ವಾರದ ಅಮೆರಿಕ ಪ್ರವಾಸ ಖಾಸಗಿಯದ್ದಾಗಿದ್ದು, ತಾವು ಯಾವುದೇ ನಾಯಕರನ್ನು ಭೇಟಿ ಮಾಡುತ್ತಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು, ಸೆ.01 "ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಮಾಹಿತಿ ನೀಡಿದರು.
ರಾಜ್ಯಪಾಲರ ಹುದ್ದೆ ಸಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ ಅಭಿಲಾಷೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಹೊಸಪೇಟೆಯ ತುಂಗಭದ್ರಾ ಜಲಾಶಯದ 19ನೇ ಗೇಟ್ ಕೊಚ್ಚಿ ಹೋಗಿರುವ ಹಿನ್ನೆಲೆ ಇಂದು ಜಲಾಶಯಕ್ಕೆ ಡಿಸಿಎಂ ಡಿಕೆಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಗೇಟ್ ದುರಸ್ತಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
“ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Lok Sabha Election Result 2024: ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ರಾಜ್ಯ ಹಾಗೂ ದೇಶದಲ್ಲಿ ಜನರ ತೀರ್ಪನ್ನು ಗೌರವಿಸುತ್ತೇನೆ. ಅಧಿಕಾರ ರಾಜಕೀಯಕ್ಕಿಂತ ವಿಶ್ವಾಸ ರಾಜಕೀಯ ಗೆದ್ದಂತಾಗಿದೆ. ದೇಶದಲ್ಲಿ ಭಾವನೆ ಸೋತಿದ್ದು, ಬದುಕು ಗೆದ್ದಿದೆ. ಬಿಜೆಪಿಯವರು 400 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಅದು ಸಾಧ್ಯವಾಗಿಲ್ಲ. ಅಯೋದ್ಯೆಯಲ್ಲೇ ಬಿಜೆಪಿ ಸೋತಿದೆ.
"ಶುದ್ಧ ಕುಡಿಯುವ ನೀರು, ರಸ್ತೆಗುಂಡಿ ಸಮಸ್ಯೆ ಸೇರಿದಂತೆ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪಾದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.
D K Shivakumar : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಅಂಕಿತಾಗೆ ₹ 5 ಲಕ್ಷ ಮತ್ತು ಮೂರನೇ ಸ್ಥಾನ ಗಳಿಸಿರುವ ಮಂಡ್ಯದ ನವನೀತ್ಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಿ ಉಪ ಮುಖ್ಯಮಂತ್ರಿ ನೀಡಿ ಗೌರವಿಸಿದರು.
ಉತ್ತರ ಭಾರತದಲ್ಲಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ತೊಡಗಿರುವ ಕಾರಣ ಮೇ 15ರಂದು ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಾರ್ವಜನಿಕರಿಗೆ ಹಾಗೂ ಹಿತೈಷಿಗಳಿಗೆ ತಿಳಿಸಿದ್ದಾರೆ.
ಬಿಜೆಪಿಯವರು ದೇಶದಲ್ಲಿ ಧರ್ಮ, ದೇವರ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರ ಪರವಾಗಿ ಯಾವುದೇ ಅಲೆ ಇಲ್ಲ.ನಾವು ನಮ್ಮ ಊರುಗಳ ಬಡ ದೇವಾಲಯಗಳ ಅಭಿವೃದ್ಧಿಗೆ ಕಾನೂನು ತಂದರೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಒಟ್ಟಾಗಿ ಈ ಕಾನೂನನ್ನು ಪರಿಷತ್ ನಲ್ಲಿ ಮಣಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಾ ಪ್ರಹಾರ ನಡೆಸಿದ್ದಾರೆ.
ಬೆಂಗಳೂರಿನ ಎಲ್ಲ ಶಾಸಕರಿಗೂ 10 ಕೋಟಿ ರೂ. ಅನುದಾನ ನೀಡಿದ್ದು, ಇದನ್ನು ಕುಡಿಯುವ ನೀರಿಗಾಗಿ ಬಳಸಿಕೊಳ್ಳಬಹುದು. ಇತರೇ ಕಾಮಗಾರಿಗಳಿಗಿಂತ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಬಿಡಬ್ಲ್ಯೂಎಸ್ಎಸ್ ಬಿ ವ್ಯಾಪ್ತಿಯಲ್ಲಿ 11 ಸಾವಿರ ಕೊಳವೆ ಬಾವಿಗಳನ್ನು ಮತ್ತೆ ಕೊರೆಯಲು ಆದೇಶ ನೀಡಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಲು ಎಲ್ಲರಿಗೂ ಹಕ್ಕಿದೆ. ಆದರೆ ಅಂತಿಮತೀರ್ಮಾನ ನ್ಯಾಯಾಲಯದ್ದೇ ಆಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪೊಗರು ಮಾತುಗಳು, ಬ್ಲ್ಯಾಕ್ ಮೇಲ್ ಗಳಿಗೆ ನಾನು ಹೆದರುವುದಿಲ್ಲ. ಇದು ಅವರಿಗೂ ಗೊತ್ತಿದೆ. ಅವರು ಕೇಳಿರುವ ಎಲ್ಲಾ ಲೆಕ್ಕ ದಾಖಲೆಗಳನ್ನು ಕೊಡಲು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.
ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.