Karnataka Assembly Elections: ಕೆಪಿಸಿಸಿ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ಒಟ್ಟು 1311 ಮಂದಿ ಆಕಾಂಕ್ಷೆಗಳು ಟಿಕೆಟ್ ಗಾಗಿ ಅರ್ಜಿ ಪಡೆದಿದ್ದರು. ಆ ಪೈಕಿ 1230 ಅರ್ಜಿಗಳು ಸ್ವೀಕಾರವಾಗಿವೆ. ಇದರಲ್ಲಿ ಸಾಮಾನ್ಯ ವರ್ಗದ 889 ಅರ್ಜಿಗಳು, ಎಸ್ ಟಿ, ಎಸ್ ಸಿ ವರ್ಗದಿಂದ 341 ಅರ್ಜಿಗಳನ್ನು ಭರ್ತಿ ಮಾಡಿ, ಡಿಡಿ ಪಡೆದು ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
ಜೋಡೋ ಭಾರತ್ ಜೋಡೋ ಯಾತ್ರೆಯಲ್ಲಿ ಸಿದ್ದರಾಮಯ್ಯ ಹೆಜ್ಜೆ ಹಾಕಿದ್ದಾರೆ.. ಚಿತ್ರದುರ್ಗ ಜಿಲ್ಲೆಯ ಮೊಳಕಾಲೂರು ತಾಲೂಕಿನ ಕಣಕುಪ್ಪೆ ಗ್ರಾಮದಲ್ಲಿ ಸಿದ್ದರಾಮಯ್ಯ ವ್ಯಾಸ್ತವ್ಯ ಹೂಡಿದ್ದರು. ಇದಕ್ಕೂ ಮುನ್ನ ಸಿದ್ದರಾಮಯ್ಯಗೆ ಗೊರವರ ನೃತ್ಯದ ಮೂಲಕ ಸ್ಥಳೀಯರು ಸ್ವಾಗತ ಕೋರಿದರು. ನೃತ್ಯಕ್ಕೆ ಮನಸೋತ ಸಿದ್ದರಾಮಯ್ಯ ತಾವೂ ಹೆಜ್ಜೆ ಹಾಕುವ ಮೂಲಕ ಸಂಭ್ರಮಿಸಿದರು.
ಸಮನ್ಸ್ ಮುಂದೂಡುವಂತೆ ಜಾರಿ ನಿರ್ದೇಶನಾಲಕ್ಕೆ ವಿನಂತಿಸಿದ್ದೆ. ಭಾರತ್ ಜೋಡೋ ಯಾತ್ರೆ ದೃಷ್ಟಿಯಿಂದ ಇಡಿಗೆ ಮನವಿ ಮಾಡಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದಾರೆ. ಅದನ್ನು ತಿರಸ್ಕರಿಸಿರುವುದು ರಾಜಕೀಯ ಕಿರುಕುಳದ ಸ್ಪಷ್ಟ ಸಂಕೇತ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.
ನಂಜನಗೂಡು ರಸ್ತೆ ಮತ್ತು ಬದನವಾಳು ಖಾದಿ ಕೇಂದ್ರಕ್ಕೆ ಕೈಪಡೆ ನಾಯಕರುಗಳು ಭೇಟಿಯಿತ್ತು ಭಾರತ್ ಜೋಡೋ ಯಾತ್ರೆಗಾಗಿ ಸಜ್ಜುಗೊಳ್ಳುತ್ತಿದ್ದಾರೆ. ಈ ನಡುವೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ವಾಲಿಬಾಲ್ ಆಡುತ್ತಿದ್ದ ಚಿಣ್ಣರತ್ತ ತೆರಳಿದ ಡಿಕೆಶಿ ವಾಲಿಬಾಲ್ ಆಡಿ ಖುಷಿಗೊಂಡಿದ್ದಾರೆ.
'ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆಗೆ ಪಕ್ಷಾತೀತವಾಗಿ ನಾಮನಿರ್ದೇಶನ ಮಾಡಿರುವುದು ನನಗೆ ಹೃದಯ ತುಂಬಿದ ಸಂತೋಷ ತಂದಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಬಿಜೆಪಿಯಿಂದ ಹೊಸಕೋಟೆ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಎಂಟಿಬಿ ನಾಗರಾಜ್ ವಿರುದ್ಧ ಗೆಲುವನ್ನು ಸಾಧಿಸಿದ್ದಂತ ಶರತ್ ಬಚ್ಚೇಗೌಡ, ಕಾಂಗ್ರೆಸ್ ಸೇರ್ಪಡೆ
ಸಿದ್ದರಾಮಯ್ಯ ಈಗ ತಾನು ಜಾತ್ಯತೀತ ತತ್ವಕ್ಕೆ ಬದ್ದ, ನನ್ನದು ಅಂಬೇಡ್ಕರ್, ಬುದ್ದ, ಬಸವ, ಕುವೆಂಪು ಅವರ ಸಿದ್ದಾಂತ. ಅವರ ಯೋಚನೆಯನ್ನು ನನ್ನ ಅಧಿಕಾರದ ಅವಧಿಯಲ್ಲಿ ಯೋಜನೆಗಳನ್ನಾಗಿ ರೂಪಿಸಿದ್ದೇನೆ ಎಂದು ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಮಾಡಲು ಸಿದ್ದ ಎಂಬ ಸವಾಲೆಸೆದಿದ್ದಾರೆ. ಆ ಮೂಲಕ ಕುಮಾರಸ್ವಾಮಿ ಅವರಿಗೆ ಯಾವ ಸಿದ್ದಾಂತವೂ ಇಲ್ಲ. ಅವರ ಅಧಿಕಾರವಧಿಯಲ್ಲಿ ಯಾವ ಘನಂದಾರಿ ಕೆಲಸ ಮಾಡಿಲ್ಲ ಎಂದು ಚುಚ್ಚಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.