"ಚನ್ನಪಟ್ಟಣದಲ್ಲಿ ಶಾಸಕರು ಇದ್ದಿದ್ದರೆ ನಾನೇಕೆ ಬರುತ್ತಿದ್ದೆ? ಕುರ್ಚಿ ಖಾಲಿ ಇರುವುದಕ್ಕೆ ಬಂದು ಕುಳಿತಿದ್ದೇನೆ. ಬೇರೆಯವರು ಕುರ್ಚಿಯಲ್ಲಿ ಕುಳಿತಿದ್ದರೆ ಬರುತ್ತಿದ್ದೇನೆಯೇ?" ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಪ್ರಶ್ನಿಸಿದರು.
“ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದ್ದು, ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂದು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಇಂದು ಕಾಂಗ್ರೆಸ್ಗೆ ಘರ್ ವಾಪ್ಸಿ ಆಗಲಿರುವ ಹೆಚ್.ವಿಶ್ವನಾಥ್. ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿರುವ ಹೆಚ್.ವಿಶ್ವನಾಥ್. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸೇರ್ಪಡೆಯಾಗಲಿರುವ ಹೆಚ್.ವಿಶ್ವನಾಥ್. ಸಿದ್ದು, ಡಿಕೆಶಿ ಸಮ್ಮುಖದಲ್ಲಿ ಸೇರ್ಪಡೆಯಾಗಲಿರುವ ಪರಿಷತ್ ಸದಸ್ಯ. ಆಪರೇಷನ್ ಕಮಲದ ವೇಳೆ JDS ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಹಳ್ಳಿಹಕ್ಕಿ. ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸಗೊಂಡಿದ್ದ H.ವಿಶ್ವನಾಥ್.
ಬಿಜೆಪಿ ಶಾಸಕರಿಗೆ ಡಿಕೆಶಿ ಕರೆ ಮಾಡಿ ಆಹ್ವಾನ ನೀಡಿರೋ ವಿಚಾರ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಿಜೆಪಿಯ 18 ಶಾಸಕರನ್ನು ಕರೆದುಕೊಂಡು ಹೋದರಲ್ಲಾ ಆಗ ಅವರ ನೈತಿಕತೆ ಎಲ್ಲಿಗೆ ಹೋಗಿತ್ತು? ಎಂದು ಪ್ರಶ್ನೆ ಮಾಡಿದ್ದಾರೆ.
'2021 ನಮ್ಮ ಕಾರ್ಯಕರ್ತರ ಪಾಲಿಗೆ ಹೋರಾಟದ ವರ್ಷ. ಪ್ರತಿ ಕ್ಷೇತ್ರದ ಸಮಸ್ಯೆ ಚರ್ಚಿಸಿ ಹೋರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.