'ಬಿಜೆಪಿ ಸರ್ಕಾರವು ಪೊಲೀಸರು ತಮ್ಮ ಅಣತಿಯಂತೆ ನಡೆಯಬೇಕು ಎಂದು ಬಯಸುತ್ತಿದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಈ ಕುರಿತಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು 'ಪೊಲೀಸರನ್ನು ಪಕ್ಷದ ಕಾರ್ಯಕರ್ತರಂತೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ. ಉಡುಪಿಯಲ್ಲಿ ಪೊಲೀಸರ ಸಮವಸ್ತ್ರ ಬದಲು ಕೇಸರಿ ಬಟ್ಟೆ ತೊಡಿಸಿದ್ದರು.ಮುಖ್ಯಮಂತ್ರಿಗಳು ನೈತಿಕ ಪೊಲೀಸ್ ಗಿರಿಗೆ ಬೆಂಬಲ ಸೂಚಿಸಿದ್ದಾರೆ. ಒಟ್ಟಿನಲ್ಲಿ ಪೊಲೀಸರನ್ನೂ ಅವರ ಪಕ್ಷದ ಕಾರ್ಯಕರ್ತರಂತೆ ಬಳಸಿಕೊಳ್ಳುತ್ತಿದ್ದಾರೆ’ಎಂದು ಆರೋಪಿಸಿದರು.
'ಸಿಎಂ ಆದವರು ನಾನೇ ಇನ್ನು 2 ವರ್ಷ ಅಧಿಕಾರದಲ್ಲಿರುತ್ತೇನೆ ಎಂದು ಹೇಳುವ ಅಗತ್ಯವೇನಿದೆ. ಅವರ ಅಧಿಕಾರದ ಬಗ್ಗೆ ನಾವು ಪ್ರಶ್ನಿಸಿದ್ದೇವಾ? ಹಾಗಿದ್ದರೂ ಈ ಬಗ್ಗೆ ಸ್ಪಷ್ಟತೆ ನೀಡುವ ಅಗತ್ಯ ಏನಿದೆ?' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಮ್ಮ ಸದಾಶಿವನಗರ ನಿವಾಸದಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.