ಹುಬ್ಬಳ್ಳಿಯ ಭೈರಿದೇವರಕೊಪ್ಪದ ದರ್ಗಾಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಾಗರಿಕತೆ ಬೆಳೆಯುತ್ತಿದ್ದು, ಅವಶ್ಯಕತೆಯು ಹೆಚ್ಚಿದೆ. ಅಲ್ಲದೇ ರಸ್ತೆಗಳ ವಿಸ್ತೀರ್ಣವು ಹೆಚ್ಚಾಗುತ್ತಿರುವ ಕಾರಣ ಧಾರ್ಮಿಕ ಸ್ಥಳಗಳನ್ನು ತೆರವು ಮಾಡುವುದು ಅನಿವಾರ್ಯ ಎಂದಿದ್ದಾರೆ.
ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಹುಬ್ಬಳ್ಳಿಯ ಭೈರಿದೇವರಕೊಪ್ಪದಲ್ಲಿರುವ ಹಜರತ್ ಸೈಯದ್ ಮೆಹಮೂದ್ ಶಾ ಖಾದ್ರಿ ದರ್ಗಾ ತೆರವಿಗೆ ಹೈಕೋರ್ಟ್ ಆದೇಶ ಹಿನ್ನೆಲೆ ಕಾರ್ಯಾಚರಣೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಿಂದ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ನವೆಂಬರ್ 13ರಂದು ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ ಮಾಡಲಿದ್ದಾರೆ. ದೇಗುಲ, ದರ್ಗಾ ಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸ್ಪರ್ಧೆ ನಿರ್ಧಾರ ಮಾಡೋಕೆ ನಾನು ಎಐಸಿಸಿ ಅಧ್ಯಕ್ಷ್ಯನಲ್ಲ. ಶ್ರೀನಿವಾಸಪುರಕ್ಕೆ ಬಂದು ಸ್ಪರ್ಧೆ ಮಾಡಲಿ ಎಂಬುದು ನನ್ನ ಬಯಕೆ ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.