ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ವಿಜಯದಶಮಿಯಂದು ಅಂದ್ರೆ ಇಂದು ನಡೆಯಲಿದೆ. ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯು ಸೇರಿದಂತೆ, ನಾಡಹಬ್ಬ ದಸರಾವನ್ನು ಸಂಭ್ರಮದಿಂದ ಆಚರಿಸಲು ನಾಡು ಸಜ್ಜಾಗಿದೆ. ಕೋವಿಡ್ನಿಂದಾಗಿ ಎರಡು ವರ್ಷ ಕಳೆಗುಂದಿದ್ದ ಆಚರಣೆಗೆ ಈ ಬಾರಿ ಅದ್ಧೂರಿತನ ಮೇಳೈಸಿದೆ.
ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯು ಸೇರಿದಂತೆ, ನಾಡಹಬ್ಬ ದಸರಾವನ್ನು ಸಂಭ್ರಮದಿಂದ ಆಚರಿಸಲು ನಾಡು ಸಜ್ಜಾಗಿದೆ. ಕೋವಿಡ್ನಿಂದಾಗಿ ಎರಡು ವರ್ಷ ಕಳೆಗುಂದಿದ್ದ ಆಚರಣೆಗೆ ಈ ಬಾರಿ ಅದ್ಧೂರಿತನ ಮೇಳೈಸಿದೆ.
ಬೆಂಗಳೂರಿನ ಪೊಲೀಸ್ ಠಾಣೆಗಳಲ್ಲಿ ವಿಜಯ ದಶಮಿ ಸಂಭ್ರಮ ಮನೆ ಮಾಡಿದೆ. ವಿವಿಧ ಠಾಣೆಗಳಲ್ಲಿ ಆಯುಧ ಪೂಜೆ ಬಲು ಜೋರಾಗಿ ಆಚರಸಲಾಗ್ತಿದೆ. ಪೊಲೀಸ್ ಠಾಣೆಗಳು ಮಧುವಣಗಿತ್ತಿಯಂತೆ ಸಿಂಗಾರಗೊಂಡಿವೆ..
ಸಾಂಸ್ಕೃತಿಕ ನಗರಿ ಮೈಸೂರು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತ್ತು. ವಿಶ್ವವಿಖ್ಯಾತವಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ ಬೆಳಗುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.