ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದ್ದು 2027 ರ ಜನವರಿಯೊಳಗಾಗಿ ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಉದ್ದೇಶಿಸಲಾಗಿದೆ. ರೈಲ್ವೆ ಕಾಮಗಾರಿಯನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರದಿಂದ ಅಭಿವೃದ್ದಿ ಮಾಡಲಾಗುತ್ತದೆ. ಇದೇ ಆರ್ಥಿಕ ವರ್ಷದ ಕೊನೆಯಾಗುವ ವೇಳೆಗೆ ಕನಿಷ್ಠ 4 ರಿಂದ 5 ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದರು.
ವಿದ್ಯಾರ್ಥಿಗಳಿಂದ ಶೈಕ್ಷಣಿಕ ಉದ್ದೇಶಕ್ಕಾಗಿ ಸಲ್ಲಿಕೆಯಾಗುವ ಸಾಲದ ಅರ್ಜಿಗಳನ್ನು ಪರಿಶೀಲನೆಯ ನೆಪದಲ್ಲಿ ದೀರ್ಘ ಸಮಯ ಇಟ್ಟುಕೊಳ್ಳದೆ ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ʼಗಳು ಕೂಡ ರೈತರಿಗೆ ಬೆಳೆ ಸಾಲ ನೀಡಿಕೆ ಪ್ರಮಾಣವನ್ನು ಹೆಚ್ಚಿಸಬೇಕು.
Davanagere Lokasabha Election Result 2024: 2024ರ ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಗೆಲವು ಸಾಧದಿಸಿದ್ದಾರೆ.
police station vandalised: ಸಂಜೆ ಪೊಲೀಸರು ಆದಿಲ್ ನನ್ನು ಠಾಣೆಗೆ ಕರೆತಂದಾಗ ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಕುಸಿದು ಬಿದ್ದನಂತೆ. ಆದಿಲ್ನನ್ನು ಕೂಡಲೇ ಒಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಕಮಲ ಪಾಳದಲ್ಲಿ ಭಿನ್ನಮತದ ಹೊಗೆ. ಶಮನ ಮಾಡಲು ರಾಜ್ಯನಾಯಕರ ಯತ್ನ. ಕುಟುಂಬ ರಾಜಕಾರಣಕ್ಕೆ ಮಣೆ ಹಾಕದಂತೆ ಭಿನ್ನಮತಿಯರ ಒತ್ತಾಯ. ಮಾಜಿ ಸಚಿವರು, ಶಾಸಕರಿಂದ ಸಂಧಾನಸಭೆಯಲ್ಲಿ ಅಸಮಾಧಾನ ವ್ಯಕ್ತ. ಅಂತಮವಾಗಿ ಭಿನ್ನಮತ ಶಮನ ಮಾಡುವಲ್ಲಿ ಯಶಸ್ವಿಯಾದ ರಾಜಾಹುಲಿ. ಬೆಣ್ಣೆನಗರಿ ದಾವಣಗೆರೆಯಲ್ಲಿ ನಡೆದ ಭಿನ್ನಮತಿಯರ ಸಭೆಯ ಹೈಲೇಟ್ಸ್.
Harihareshwarswamy temple : ದಾವಣಗೆರೆ ಜಿಲ್ಲೆಯ ಹರಿಹರದ ಹರಿಹರೇಶ್ವರಸ್ವಾಮಿ ದೇವಸ್ಥಾನ ಇತಿಹಾಸಪ್ರಸಿದ್ದ ದೇವಸ್ಥಾನವಾಗಿದ್ದು, ಈ ದೇವಾಲಯದಲ್ಲಿ ಅರ್ಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿದುಕೊಳ್ಳಿ
ಇಂತಹ ಹೇಳಿಕೆ ನೀಡುವ ಮೂಲಕ ಬಡವರ ಮಕ್ಕಳನ್ನು ಯಾಕೆ ಬಾವಿಗೆ ತಳ್ಳುತ್ತೀರಿ. ಒಂದು ವಾರದಲ್ಲಿ ಯಾವಾಗ ಎಂದೂ ಸಹ ಹೇಳುತ್ತೇನೆ. ನಾನೇ ಈಶ್ವರಪ್ಪನವರ ಮನೆಗೆ ಹೋಗುತ್ತೇನೆ. ಅವರೇ ನನಗೆ ಗುಂಡು ಹೊಡೆಯಲಿ ಎಂದು ಡಿ.ಕೆ.ಸುರೇಶ್ ಸವಾಲು ಹಾಕಿದ್ದಾರೆ.
ಇಲ್ಲಿನ ವಿನೋಬನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇಲ್ಲಿ ಸುಮಾರು 10 ರಿಂದ 15 ನಾಯಿಗಳಿದ್ದು, ರಸ್ತೆಯಲ್ಲಿ ಬರುತ್ತಿದ್ದಂತೆ ಜನರ ಮೇಲೆ ಎರಗುತ್ತಿವೆ. ಕೆಲವರನ್ನು ಈಗಾಗಲೇ ಕಚ್ಚಿ ಗಾಯಗೊಳಿಸಿದ್ದು, ಮಕ್ಕಳನ್ನು ಮನೆಯಿಂದ ಹೊರಗೆ ಬಿಡಲು ಪೋಷಕರು ಹೆದರುತ್ತಿದ್ದಾರೆ.
Valmiki Peeth : ಅದು ಸಮಾಜದ ಜನರು ಭಕ್ತಿ ಭಾವದಿಂದ ಪೂಜಿಸುವ ಜಾಗ. ಅಲ್ಲಿನ ಶ್ರೀಗಳೇ ಭಕ್ತರಿಗೆ ಆರಾಧ್ಯ ದೈವ. ಆದರೆ ಅಂತಹ ಪವಿತ್ರ ಸ್ಥಳದಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವುದು ಸಮಾಜದ ಮುಖಂಡರ ಕಣ್ಣಿಗೆ ಬಿದ್ದಿದೆ. ವ್ಯಕ್ತಿಯೊಬ್ಬ ಅಲ್ಲಿ ನಡೆಸುತ್ತಿರುವ ಚೆಲ್ಲಾಟ ನೋಡಿ ಇದೀಗ ಮುಖಂಡರೆ ಕೆಂಡಾಮಂಡಲರಾಗಿದ್ದು, ಇದೀಗ ಸ್ವಾಮೀಜಿಯನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ. ಅದು ಯಾವ ಮಠ, ಸ್ವಾಮೀಜಿ ಯಾರು ಅಂತೀರಾ ಈ ಸ್ಟೋರಿ ಓದಿ..
ನಗರದ ವಿದ್ಯಾನಗರವೊಂದರಲ್ಲಿ ಮನೆ ಬಾಗಿಲು ಮುರಿದು 31.34 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ 6 ಜನ ಕಳ್ಳರ ಬಂಧಿಸುವಲ್ಲಿ ದಾವಣಗೆರೆ ಪೊಲೀಸರು ಯಶಸ್ವಿಯಾಗಿದ್ದಾರೆ.ಕಳ್ಳರಿಂದ 23.35 ಲಕ್ಷ ಚಿನ್ನಾಭರಣ, 60 ಸಾವಿರ ಮೌಲ್ಯದ ಬೆಳ್ಳಿ ಆಭರಣ, ಎರಡು ಬೈಕ್ ಗಳ ಜಪ್ತಿ ಮಾಡಿದ್ದಾರೆ.
ಮಹಿಳೆಯರು ಕೆಎಸ್ಆರ್ಟಿಸಿ ಬಸ್ ಗಳತ್ತ ಹೆಚ್ಚಾಗಿ ಮುಖ ಮಾಡುತ್ತಿದ್ದು, ಅವರೊಂದಿಗೆ ಪುರಷರು ಕೂಡ ಹೋಗುತ್ತಿದ್ದಾರೆ. ಹೀಗಾಗಿ, ಖಾಸಗಿ ಬಸ್ ಗಳ ಮೇಲೆ ಭಾರಿ ಹೊಡೆತ ಬಿದ್ದಂತಾಗಿದೆ. ಇನ್ನು, ದಾವಣಗೆರೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸಂಖ್ಯೆ ಕೂಡ ತೀರಾ ಕಡಿಮೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.