Kichcha Sudeepa clarification: “ಸ್ನೇಹಿತರಿಗೆ ನಲ್ಮೆಯ ನಮಸ್ಕಾರ. ದಾವಣಗೆರೆಯ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು. ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ. ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ. ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ. ಆದರೂ ಇಂದು ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ. ನಿಮ್ಮ ಜೊತೆ ಬೆರೆಯಲು ನನಗೂ ಸದಾ ಆತೀವ ಆಸೆ.. ಮುಂದೆ ಖಂಡಿತ ಬರುವೆ. ಪ್ರೀತಿ ಇರಲಿ. ಶಾಂತ ರೀತಿಯಿಂದ ವರ್ತಿಸಿ, ಪ್ರೀತಿಯೊಂದಿಗೆ ನಿಮ್ಮ ಕಿಚ್ಚ” ಎಂದು ಟ್ವೀಟ್ ಮೂಲಕ ಸ್ಪಷ್ಟ ಸಂದೇಶ ನೀಡಿದ್ದಾರೆ.
ದಾವಣಗೆರೆ ಜಿಲ್ಲೆ ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಇಂದು ಸಂಜೆ 5.30ಕ್ಕೆ ನಟ ಸುದೀಪ್ ಕಾರ್ಯಕ್ರಮ ನಿಗದಿಯಾಗಿತ್ತು. ಹೀಗಾಗಿ ಸುದೀಪ್ ಆಗಮನ ಹಿನ್ನಲೆ ಅಭಿಮಾನಿಗಳು ಮತ್ತು ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಆದರೆ ಕಾರಣಾಂತರಗಳಿಂದ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಹಾಜರಾಗಲಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.