ಲೋಕಸಭೆ ಗೆಲ್ಲಲ್ಲು ದೆಹಲಿಯಲ್ಲಿ ಕಾಂಗ್ರೆಸ್ ರಣತಂತ್ರ ನಡೆಸಿದೆ.. ನಿನ್ನೆ ಮೀಟಿಂಗ್ ಮಾಡಿ ಕಾಂಗ್ರೆಸ್ ನಾಯಕರಿಗೆ ಹೊಸ ಟಾರ್ಗೆಟ್ ನೀಡಿದೆ.. ಮುಂದಿನ ಲೋಕಸಭಾ ಚುನಾವಣೆ ಕಡೆ ಹೆಚ್ಚು ಗಮನವಿರಲಿ..
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ ಕರ್ನಾಟಕ ರಾಜ್ಯದಿಂದ 20 ಸೀಟುಗಳನ್ನು ಗೆಲ್ಲಿಸಿ ಕೊಡುವುದಾಗಿ ನಮ್ಮ ನಾಯಕರಿಗೆ ಭರವಸೆ ನೀಡಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಚಿವರ ವಿರುದ್ಧ ಶಾಸಕರು ಬರೆದಿದ್ದಾರೆ ಎನ್ನುವ ಪತ್ರ ಸುಳ್ಳು. ಈಗಾಗಲೇ ನಾವು ಶಾಸಕರ ಜೊತೆ ಮಾತನಾಡಿದ್ಧೇವೆ. ಈ ವರ್ಷ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡಲು ಆಗುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು.
CM Siddaramaiah : ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಹಾಗೂ 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ತಾಜ್ವೆಸ್ಟೆಂಡ್ ಹೊಟೇಲ್ಗೆ ಮಂತ್ರಿ, ಶಾಸಕರು ಮತ್ತು ಯಾರಿಗೂ ಅವಕಾಶವಿಲ್ಲ. ಕೆಲ ಸಚಿವರಿಗೆ ಮಾತ್ರ ನಾವು ಆಹ್ವಾನಿಸಿದ್ದೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Basavaraj Bommai: ಪ್ರಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡ್ರ ನಡುವೆ ಮಾತುಕತೆ ನಡೆದಿದೆ.
Basavaraj Bommaiah : ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಏಕೈಕ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ. ಪ್ರತಿಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
2023ರ ಚುನಾವಣೆ ವೇಳೆ ನಾವು ನೀಡಿದ್ದ ಐದು ಗ್ಯಾರಂಟಿಗಳನ್ನೂ ನಾವು ಈಡೇರಿಸಲು ಶುರು ಮಾಡಿದ್ದೇವೆ. ಕೋಟಿಗಟ್ಟಲೆ ಕನ್ನಡಿಗರು ಈಗಾಗಲೇ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ಬಿಜೆಪಿ ಕಾರ್ಯಕರ್ತರು, ಬೆಂಬಲಿಗರೂ ಅರ್ಜಿ ಸಲ್ಲಿಸಿ ಫಲಾನುಭವಿಗಳಾಗುತ್ತಿದ್ದಾರೆ. ಇದನ್ನು ನಾವು ಸ್ವಾಗತಿಸಬೇಕು. ಕಾಂಗ್ರೆಸ್ ಶಾಸಕರು, ಕಾರ್ಯಕರ್ತರು, ಅಭಿಮಾನಿಗಳು ಮತ್ತು ಮತದಾರರು ತಲೆ ಎತ್ತಿ ಹೆಮ್ಮೆ ಪಡುವ ಸಂದರ್ಭವನ್ನು ನಮ್ಮ ಸರ್ಕಾರ ಸೃಷ್ಟಿಸಿದೆ ಎಂದರು.
ವಿರೋಧ ಪಕ್ಷಗಳು ಇರೋದೆ ಆರೋಪ ಮಾಡೋದಕ್ಕೆ. ರಾಜಕಾರಣ ಮಾಡ್ಲಿ, ಬಾಂಬ್ ಹಾಕ್ಲಿ ಏನಾದ್ರೂ ಮಾಡ್ಲಿ - ನಾವು ಜನರ ಸೇವೆ ಮಾಡ್ತೀವಿ ಎಂದು ಬಿಜೆಪಿ ವಿರುದ್ಧ ಡಿಸಿಎಂ ಡಿ.ಕೆ. ಶೀವಕುಮಾರ್ ಗುಡುಗಿದ್ರು.
Bengaluru News: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿವಾರಣೆಗೆ ಸುರಂಗ ರಸ್ತೆಗಳ ನಿರ್ಮಾಣ ಸಂಬಂಧ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸುರಂಗ ರಸ್ತೆ ನಿರ್ಮಾಣ ಸಲಹಾ ಸಂಸ್ಥೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯಸಭೆ ಮಾಜಿ ಸದಸ್ಯ ರಾಜೀವ್ ಗೌಡ, ಬಿಬಿಎಂಪಿ ಸೇರಿದಂತೆ ನಾನಾ ಇಲಾಖೆಗಳ ನಿವೃತ್ತ ಮುಖ್ಯ ಎಂಜಿನಿಯರ್ ಗಳು ಉಪಸ್ಥಿತರಿದ್ದರು.
ಪೂಜೆ ಬಳಿಕ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಭಾಗಿ
ಉಸ್ತುವಾರಿ ಸಚಿವ ರಾಮಲಿಂಗ ರೆಡ್ಡಿ, ಸಂಸದ ಡಿ.ಕೆ ಸುರೇಶ್
ಶಾಸಕರಾದ ಹೆಚ್.ಸಿ ಬಾಲಕೃಷ್ಣ, ಇಕ್ಬಾಲ್ ಹುಸೇನ್ ಸಾಥ್
ಕೇಂದ್ರ ಸರ್ಕಾರ ಸಹಕಾರ ನೀಡದಿದ್ದರೆ ಮುಂದಿನ ಆಯ್ಕೆ ಏನು ಎಂದು ಜೀ ಕನ್ನಡ ನ್ಯೂಸ್ ಪ್ರಶ್ನೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮುಖ್ಯಮಂತ್ರಿಗಳು ಹಾಗೂ ಸಚಿವರು ಚರ್ಚೆ ಮಾಡುತ್ತಿದ್ದಾರೆ. ಸ್ವಲ್ಪ ತಡವಾದರೂ ನಾವು ಈ ಯೋಜನೆ ಜಾರಿ ಮಾಡಿಯೇ ಮಾಡುತ್ತೇವೆ', ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ಆಹಾರ ಪ್ರಾಧಿಕಾರ ಅವಕಾಶ ನಿರಾಕರಿಸಿದೆ. ಇದು ಬಿಜೆಪಿಯ ದ್ವೇಷ ರಾಜಕಾರಣ ಹಾಗೂ ಬಡವರ ವಿರೋಧಿ ನೀತಿಗೆ ಸಾಕ್ಷಿ. ಇದರ ವಿರುದ್ಧ ರಾಜ್ಯ ಕಾಂಗ್ರೆಸ್ ಇದೇ 20 ರಂದು ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.