ದೆಹಲಿ ವಿಧಾನಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಕೈಜೋಡಿಸುವ ಜೆಡಿ(ಯು) ನಿರ್ಧಾರ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ(CAA)ಯ ಬಗ್ಗೆ ಪಕ್ಷದ ನಿಲುವಿನ ಕುರಿತು ಪ್ರಶ್ನೆ ಎತ್ತಿದ್ದಕ್ಕಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ತಮ್ಮ ಪಕ್ಷದ ಸಹೋದ್ಯೋಗಿ ಪವನ್ ವರ್ಮಾ ಅವರಿಗೆ ದಿಟ್ಟ ಪ್ರತಿಕ್ರಿಯೆ ನೀಡಿದ್ದಾರೆ.
ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ 54 ಸ್ಥಾನಗಳಿಗೆ ಕಾಂಗ್ರೆಸ್ ಶನಿವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿತು. ಪಾಟ್ಪರ್ಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಹಿರಿಯ ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಲಕ್ಷ್ಮಣ್ ರಾವತ್ ಎದುರಿಸಲಿದ್ದಾರೆ.
ಮುಂಬರುವ ಚುನಾವಣೆಯ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 70 ಸ್ಥಾನಗಳಲ್ಲಿ ಜನರು ಆಮ್ ಆದ್ಮಿ ಪಕ್ಷಕ್ಕೆ(AAP) ಮತ ನೀಡುತ್ತಾರೆ ಎಂದು ತಾವು ನಂಬಿರುವುದಾಗಿ ಹೇಳಿದರು.
ಕಳೆದ ಐದು ವರ್ಷಗಳಲ್ಲಿ ಆಮ್ ಆದ್ಮಿ ಪಕ್ಷ (AAP) ಮಾಡಿದ ಕಾರ್ಯಗಳ ಮೇಲೆ ದೆಹಲಿಯಲ್ಲಿ ಮುಂಬರುವ ಚುನಾವಣೆ ನಡೆಯಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ (ಜನವರಿ 6) ಹೇಳಿದ್ದಾರೆ.
ಪ್ರಶಾಂತ್ ಕಿಶೋರ್ ಬಿಹಾರದ ನಿತೀಶ್ ಕುಮಾರ್ ಅವರ ಜನತಾದಳದ (ಯುನೈಟೆಡ್) ಉಪಾಧ್ಯಕ್ಷರಾಗಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ನಂತರ ಅವರು 2015 ರಲ್ಲಿ ಜೆಡಿಯುಗೆ ಸೇರಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.