ಪ್ರಸ್ತಕ ಶೈಕ್ಷಣಿಕ ಸಾಲಿನಿಂದ ಸ್ನಾತಕ, ಸ್ನಾತಕೋತ್ತರ ಪದವಿಗೆ ಪ್ರವೇಶಾತಿ ಬಯಸುವ ತೃತೀಯ ಲಿಂಗಿ ಮತ್ತು ದೇವದಾಸಿ ಮಕ್ಕಳ ವಿದ್ಯಾರ್ಥಿಗಳಿಗೆ (ದಾಖಲಾತಿಗಳನ್ನು ಸಲ್ಲಿಸಿದ್ದಲ್ಲಿ ಮಾತ್ರ) ಪ್ರವೇಶಾತಿಯ ಶುಲ್ಕದಿಂದ ವಿನಾಯಿತಿ ನೀಡಲಾಗುವುದು ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವ ಎಸ್.ಎನ್ರುದ್ರೇಶ್ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಬಾಲ್ಯವಿವಾಹ ತಡೆಗಟ್ಟಲು ಇರುವ ಕಠಿಣ ಕ್ರಮಗಳಂತೆಯೇ, ದೇವದಾಸಿ ಪದ್ದತಿಯ ಆಚರಣೆಯನ್ನು ತಡೆಗಟ್ಟಲು ಇರುವ ಕಾನೂನಿನ ಕಟ್ಟುನಿಟ್ಟಿನ ಅನುಷ್ಠಾನದ ಅಗತ್ಯತೆಯಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಹಾಲಪ್ಪ ಆಚಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
2020-21 ನೇ ಸಾಲಿನಲ್ಲಿ ಆದಾಯ ಉತ್ಪನ್ನಕರ ಚಟುವಟಿಕೆ ಅಡಿಯಲ್ಲಿ ಸಹಾಯಧನವನ್ನು ವಿತರಿಸಲು 1993-94 ರ ಸಮೀಕ್ಷಾ ಪಟ್ಟಿಯಲ್ಲಿರುವ ಹಾಗೂ 2007 ರ ಸಮೀಕ್ಷಾ ಪಟ್ಟಿಯಲ್ಲಿ ಮಾತ್ರ ಇರುವ ವಿಮುಕ್ತ ದೇವದಾಸಿ ಮಹಿಳೆಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.