ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ ತೆರೆದು ಮೋಸಮಾಡಿ ಹುಬ್ಬಳ್ಳಿ ತಾಲೂಕಿನ ಗುತ್ತಿಗೆದಾರನಿಂದ ಸುಮಾರು 15 ಲಕ್ಷಕ್ಕೂ ಹೆಚ್ಚು ಹಣ ಪಡೆದಿದ್ದ ಹಾಸನ ಮೂಲದ ವ್ಯಕ್ತಿಯನ್ನು ಪೊಲೀಸ್ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಮಾರ್ಗದರ್ಶನದಲ್ಲಿ ಧಾರವಾಡ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆಯ ಸಿಬ್ಬಂದಿಗಳು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ರಾಜ್ಯದ ಆರೋಗ್ಯ ಸೇವೆಯಲ್ಲಿ ಗುಣಾತ್ಮಕವಾಗಿ ಅಮೂಲಾಗ್ರ ಬದಲಾವಣೆಗೆ ಚಿಂತಸಲಾಗಿದ್ದು, ಉತ್ತರ ಕರ್ನಾಟಕದ ಡಿಮ್ಹಾನ್ಸ್ ಆಸ್ಪತ್ರೆಯನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯೊಂದಿಗೆ ಸಂಯೋಜಿಸಿ ಮೇಲ್ದರ್ಜೆಗೇರಿಸಲು ಕ್ರಮ ವಹಿಸಲಾಗುವುದು ಮತ್ತು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಶೀಘ್ರ ಮುಂಬಡ್ತಿ ಹಾಗೂ ಅವರ ವೇತನ ಹೆಚ್ಚಳ ಮಾಡಲು ಚಿಂತಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ. ಸುಧಾಕರ ಹೇಳಿದರು.
ಧಾರವಾಡ : ಹ್ಯುಮೇನ್ ಸೂಸೈಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆಯು ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸಮುದಾಯ ಪ್ರಾಣಿಗಳ ಆರೋಗ್ಯ ರಕ್ಷಣೆ ಲಸಿಕೆ ಮತ್ತು ಸಂತಾನೋತ್ಪತ್ತಿ ನಿಯಂತ್ರಣ ಮತ್ತಿತರ ತುರ್ತು ವೈದ್ಯಕೀಯ ಆರೈಕೆಯನ್ನು ಪ್ರಾಣಿಗಳಿಗೆ ಒದಗಿಸಲು ನೀಡಿರುವ ಉತ್ತರ ಕರ್ನಾಟಕದ ಪ್ರಥಮ ಸಂಚಾರಿ ಪ್ರಾಣಿ ಚಿಕಿತ್ಸಾಲಯವನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಲೋಕಾರ್ಪಣೆ ಮಾಡಿದರು.
ಧಾರವಾಡ ಜಿಲ್ಲೆಯ ರೈತರ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಧಾರವಾಡ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳ ಮೂಲಕ ಹೆಸರುಕಾಳು ಹಾಗೂ ಉದ್ದು ಖರೀದಿಯನ್ನು ಕೂಡಲೇ ಆರಂಭಿಸಲು ಅನುಮೋದನೆ ನೀಡಿ ಆದೇಶ ಹೊರಡಿಸಿದೆ.
ಧಾರವಾಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವುದರಿಂದ ಕೋವಿಡ್-19 ನಿಯಂತ್ರಣ ಮಾಡಲು ಮತ್ತು ಸಾರ್ವಜನಿಕರ ಹಾಗೂ ಕಛೇರಿ ಸಿಬ್ಬಂದಿಗಳ ಆರೋಗ್ಯ ಕಾಪಾಡಲು ಕಂದಾಯ ಇಲಾಖೆಯ ಕೆಲವು ಸೌಲಭ್ಯಗಳನ್ನು ಇ-ಮೇಲ್ ಮತ್ತು ವಾಟ್ಸ್‍ಪ್ ಮೂಲಕ ನೀಡಲು ಕ್ರಮ ಕೈಗೊಂಡಿದೆ.
ನಿನ್ನೆ ಜೂನ್ 29 ರಂದು ನಡೆದ ಎಸ್‍ಎಸ್‍ಎಲ್‍ಸಿ ವಿಜ್ಞಾನ ಪರೀಕ್ಷೆ ಸಮಯದಲ್ಲಿ ನವಲೂರ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯೊಬ್ಬ ನಿಶ್ಯಕ್ತಿಯಿಂದ ಬಳಲುತ್ತಿದ್ದುದನ್ನು ಕಂಡು ಅರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ತತ್‍ಕ್ಷಣ ಪ್ರಥಮ ಚಿಕಿತ್ಸೆ ನೀಡಿ ಪುನ: ಪರೀಕ್ಷೆಗೆ ಹಾಜರಾಗುವ ಭರವಸೆ ತುಂಬಿದ ಘಟನೆ ಜರುಗಿದೆ.
ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ವಿಳಂಬವಾದ ಕಾರಣ ಅಸಮಾಧಾನಗೊಂಡಿದ್ದ ವಿನಯ್ ಕುಲಕರ್ಣಿ ಬುಧವಾರ ಪಕ್ಷೇತರ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ್ದರು.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಹಾಗೂ ಚಿಕಿತ್ಸೆಗೆ ಅಗತ್ಯವಿರುವವರಿಗೆ 1 ಲಕ್ಷ ರೂ. ಪರಿಹಾರವನ್ನು ಜಿಲ್ಲಾಧಿಕಾರಿಗಳು ತಕ್ಷಣ ನೀಡಲಿದ್ದಾರೆ. ಹೆಚ್ಚಿನ ಪರಿಹಾರ ಘೋಷಿಸುವ ಅಧಿಕಾರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವಹಿಸಲಾಗಿದೆ.