ಇಂದಿನ ಮಾನವ ಸರಪಳಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಸೇರಿ ಸುಮಾರು 95 ಸಾವಿರ ಜನರು ಪ್ರತ್ಯಕ್ಷವಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಅಭೂತ ಪೂರ್ವವಾಗಿ ಯಶಸ್ವಿಗೊಳ್ಳಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಅಡಿನೊ ವೈರಾಣುವಿನಿಂದ ಹರಡುವ ಮದ್ರಾಸ್ ಐ ರೋಗ ಬಾಧೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅಬಾಲವೃದ್ದರಾದಿಯಾಗಿ ಎಲ್ಲ ವಯಸ್ಸಿನ, ಎಲ್ಲ ರೋಗದ ಜನರು ಜಿಲ್ಲಾ ಆಸ್ಪತ್ರೆಗೆ ಆಗಮಿಸುವದರಿಂದ ಇದು ಪರಸ್ಪರ ಹರಡದಂತೆ ಮುನ್ನಚರಿಕೆಯಾಗಿ ಜಿಲ್ಲಾಸ್ಪತ್ರೆ ಮಾದರಿಯಾಗುವ ಕ್ರಮ ವಹಿಸಿದೆ.
ಇಂದು ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ನಾಡೋಜ ಡಾ.ಚನ್ನವೀರ ಕಣವಿ ಅವರ ಸ್ಮರಣಾರ್ಥವಾಗಿ ಅವರ ಕುಟುಂಬದವರು ಧಾರವಾಡ ಜಿಲ್ಲೆಯ ಗ್ರಾಮೀಣ ಪ್ರದೇಶದ ಗ್ರಾಮಪಂಚಾಯತ್ ಗ್ರಂಥಾಲಯಗಳಿಗೆ ಮೂರು ಸಾವಿರ ಪುಸ್ತಕಗಳನ್ನು ದೇಣಿಗೆಯಾಗಿ ನೀಡಿದರು.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಡಿ ಗ್ರಾಮದಲ್ಲಿ ಸುಮಾರು 4000 ದಿಂದ 4500 ಜನಸಂಖ್ಯೆ ಹೊಂದಿರುವ ಗ್ರಾಮ ಮತ್ತು ಅತ್ಯಂತ ಪುರಾತನ ಇತಿಹಾಸ ಸಹ ಇದೆ. ಇದು ಹುಬ್ಬಳ್ಳಿ ಹಾಗೂ ಕುಂದಗೋಳ ಮಧ್ಯಭಾಗದಲ್ಲಿರುವ ಗ್ರಾಮ. ಆದರೆ ಈ ಗ್ರಾಮದಲ್ಲಿ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವೂ ಇಲ್ಲ.
ಜನವರಿ 12 ರಂದು ಧಾರವಾಡ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲ್ಲೂಕಿನಾದಾದ್ಯಂತ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ದಿನಾಂಕ 13-01-2022 ರಿಂದ ಮುಂದಿನ ಆದೇಶವಾಗುವವರೆಗೆ ಶಾಲೆಗಳನ್ನು ತೆರೆಯದಂತೆ ಆದೇಶಿಸಿರುವದನ್ನು ಹಿಂಪಡೆಯಲಾಗಿದೆ. ಜನೆವರಿ 24 ರ ಸೋಮವಾರದಿಂದ ಶಾಲೆಗಳನ್ನು ಪುನರ್ ಆರಂಭಿಸಲು ಜಿಲ್ಲಾಧಿಕಾರಿಗಳು ನಿರ್ದೇಶಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.