ಮುಂದಿನ ಮಾತುಕತೆಯಲ್ಲಿ ರೈತ ಸಂಘಟನೆಯ ಪ್ರತಿನಿಧಿಗಳು ಪರ್ಯಾಯ ಮಾರ್ಗ ಹುಡುಕಬಹುದು, ಅದರಿಂದ ಪರಿಹಾರ ಸಿಗಬಹುದು ಎಂಬ ಭಾವನೆ ಇದೆ ಎಂದು ನರೇಂದ್ರ ಸಿಂಗ್ ಥೋಮರ್ ಹೇಳಿದರು. ಈ ಮುಖಾಂತರ ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಹಠಮಾರಿತನ ಮುಂದುವರೆಸುತ್ತದೆ ಎಂಬುದನ್ನು ಒಪ್ಪಿಕೊಂಡರು.
ಕೇಂದ್ರ ಸರ್ಕಾರ ಹಾಗೂ ರೈತರ ನಡುವೆ 7ನೇ ಸುತ್ತಿನ ಸಭೆ ನಡೆಯುವ ಮೊದಲೇ ರೈತರು 'ಮಾತುಕತೆ ಫಲಪ್ರದವಾಗದಿದ್ದರೆ, ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು' ಎಂಬ ಎಚ್ಚರಿಕೆ ನೀಡಿದ್ದರು. ಈಗ ಪ್ರತಿಭಟನೆ ತೀವ್ರಗೊಳಿಸುವ ಹಿನ್ನೆಲೆಯಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
7ನೇ ಸುತ್ತಿನ ಮಾತುಕತೆ ವಿಫಲವಾದರೆ ಹರಿಯಾಣದ ಎಲ್ಲಾ ಶಾಪಿಂಗ್ ಮಾಲ್ ಹಾಗೂ ಟೋಲ್ ಫ್ಲಾಜಾಗಳನ್ನು ಮುಚ್ಚಿಸುವುದಾಗಿ ಮತ್ತು ಗಣರಾಜ್ಯೋತ್ಸವದ ದಿನ ದೆಹಲಿಯಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ಮಾಡುವುದಾಗಿ ಪ್ರತಿಭಟನಾನಿರತ ರೈತರು ಬೆದರಿಕೆ ಹಾಕಿದ್ದಾರೆ.
ಕೆನಡಾ ಪ್ರಧಾನಿ ಕಳವಳದ ನಡುವೆಯೇ ಈಗ ಅಮೆರಿಕ, ಬ್ರಿಟನ್ ಸಂಸದರೂ ಕಳವಳ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಏನೋ ಸಮಸ್ಯೆ ಸೃಷ್ಟಿಯಾಗಿದೆ ಎಂಬರ್ಥವನ್ನು ರೈತರ ಈ ಹೋರಾಟ ಹೊಮ್ಮಿಸುತ್ತಿದೆ- ಎಚ್.ಡಿ. ಕುಮಾರಸ್ವಾಮಿ
'ಮನ್ ಕಿ ಬಾತ್' ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡುವ ಸಮಯದಲ್ಲಿ ದೇಶದ ಜನರು ತಟ್ಟೆ ಬಾರಿಸಿ, ಚಪ್ಪಾಳೆ ತಟ್ಟಿ ರೈತರ ಪ್ರತಿಭಟನೆಯನ್ನು ಬೆಂಬಲಿಸಬೇಕು. ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು' ಎಂದು ಮನವಿ ಮಾಡಲಾಗಿದೆ
ಪ್ರತಿಭಟನಾ ನಿರತ ರೈತರು ಹೊಸ ಕಾನೂನುಗಳು ಕನಿಷ್ಟ ಬೆಂಬಲ ಬೆಲೆಯ ವ್ಯವಸ್ಥೆಗೆ ಮಾರಕವಾಗಿವೆ. ಈಗಿರುವ ಮಂಡಿ ವ್ಯವಸ್ಥೆಯನ್ನು ತೆಗೆದುಹಾಕಲಾಗುತ್ತದೆ. ದೊಡ್ಡ ದೊಡ್ಡ ಕಾರ್ಪೊರೇಟ್ ಕಂಪನಿಗಳು ಕೃಷಿ ಕ್ಷೇತ್ರವನ್ನು ಆವರಿಸಿಕೊಂಡು ರೈತರು ಬೀದಿಗೆ ಬೀಳಬೇಕಾಗುತ್ತದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.
ಥೋಮರ್ ಪತ್ರ ಬರೆದ ಬಳಿಕ ಟ್ವೀಟ್ ಮಾಡಿರುವ ಮೋದಿ, 'ಕೃಷಿ ಸಚಿವ @nstomar ಜೀ ರೈತ ಸಹೋದರ ಸಹೋದರಿಯರಿಗೆ ಪತ್ರ ಬರೆದು ಒಳ್ಳೆಯ ಸಂವಾದ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಎಲ್ಲಾ ರೈತರು ಪತ್ರವನ್ನು ಓದುವಂತೆ ವಿನಂತಿಸುತ್ತೇನೆ' ಎಂದಿದ್ದಾರೆ.
ಇಂದು ಸಿಂಗು ಗಡಿಯಲ್ಲಿ ರೈತ ಮುಖಂಡರು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ರೈತರಿಗೆ ಬೆಂಬಲ ನೀಡಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.
ಅಮಿತ್ ಶಾ ರೈತ ಸಂಘಟನೆಗಳ 13 ಪ್ರತಿನಿಧಿಗಳ ಜೊತೆ ನಡೆಸಿದ ‘ಅನೌಪಚಾರಿಕ ಮಾತುಕತೆ’ ವಿಫಲವಾಗಿರುವ ಹಿನ್ನೆಲೆಯಲ್ಲಿ ಬುಧವಾರ ಕೇಂದ್ರ ಸರ್ಕಾರ ರೈತ ಪ್ರತಿನಿಧಿಗಳೊಂದಿಗೆ ಅಧಿಕೃತವಾಗಿ ಕರೆದಿದ್ದ 6ನೇ ಸಭೆಯನ್ನು ರೈತರು ಬಹಿಷ್ಕರಿಸಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ ಕರೆ ಕೊಟ್ಟಿರುವ ‘ಭಾರತ ಬಂದ್’ಗೆ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್, ಅಕಾಲಿ ದಳ, ಡಿಎಂಕೆ, ಆರ್ ಜೆಡಿ, ಆಮ್ ಆದ್ಮಿ ಪಾರ್ಟಿ, ತೃಣಮೂಲ ಕಾಂಗ್ರೆಸ್, ಟಿಆರ್ ಎಸ್, ಬಿಎಸ್ ಪಿ, ಎಸ್ ಪಿ, ಎನ್ ಸಿಪಿ, ಶಿವಸೇನಾ ಹಾಗೂ ಎಡ ಪಕ್ಷಗಳು ಬೆಂಬಲ ಘೋಷಿಸಿವೆ.
Bharat Bandh: ನಾಳೆ ರೈತರು ಕರೆ ನೀಡಿರುವ ಭಾರತ್ ಬಂದ್‌ಗೆ ಹಲವು ಸಾರಿಗೆ ಸಂಸ್ಥೆಗಳು, ಬ್ಯಾಂಕಿಂಗ್ ಯೂನಿಯನ್, ಹೋಟೆಲ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ಸಹ ಸಹಕಾರ ನೀಡಲು ಮುಂದಾಗಿವೆ.
ರೈತರು ದೆಹಲಿ ಗಡಿಯಲ್ಲಿ ಕೊರೆಯುವ ಚಳಿಯಲ್ಲಿ 12 ದಿನಗಳಿಂದ ಪ್ರತಿಭಟಿಸುತ್ತಿದ್ದರೂ, ಶೀತಗಾಳಿಗೆ ಈಗಾಗಲೇ ಪ್ರಾಣಹಾನಿ ಸಂಭವಿಸಿದ್ದರೂ ಲೆಕ್ಕಿಸದ ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದೆ 'ಮಾತುಕತೆ ನಡೆಸುವ' ನೆಪವನ್ನೇ ಮುಂದುವರೆಸಿದೆ.
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಹಾಗೂ ರೈತ ಸಂಘಟನೆಗಳ 35 ಮಂದಿ ಪ್ರತಿನಿಧಿಗಳ ನಡುವೆ ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಭೆಗಳಲ್ಲಿ ಮಾತುಕತೆ ಯಶಸ್ವಿಯಾಗಿರಲಿಲ್ಲ.