ಬೆಂಗಳೂರು ಉತ್ತರ ತಾಲ್ಲೂಕಿನ ಡಿ.ಜೆ.ಹಳ್ಳಿಯ ಕುದುರೆಯೊಂದರಲ್ಲಿ ಗ್ಲಾಂಡರ್ಸ್ ರೋಗೋದ್ರೇಕ ದೃಢಪಟ್ಟಿರುವುದರಿಂದ ನಂಬರ್ 72, ಮೋದಿ ರಸ್ತೆ ಡಿ.ಜೆ.ಹಳ್ಳಿ ಕೇಂದ್ರ ಸ್ಥಾನದಿಂದ ಸುತ್ತಲಿನ 5 ಕಿ.ಮೀ.ವ್ಯಾಪ್ತಿ ಪ್ರದೇಶವನ್ನು ರೋಗಪೀಡಿತ ವಲಯ ಹಾಗೂ 5 ರಿಂದ 25 ಕಿ.ಮೀ.ಪ್ರದೇಶವನ್ನು ಜಾಗೃತ ವಲಯ ಎಂದು ಪಶುಸಂಗೋಪನೆ ಹಾಗೂ ಹೈನುಗಾರಿಕೆ ಇಲಾಖೆ ಘೋಷಿಸಿದೆ.
ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಅರೋಪಿ ಕರ್ನಾಟಕ ಟಿಪ್ಪು ಟೈಗರ್ ಅಲ್ಫತ್ ಟ್ರಸ್ಟ್ ಅಧ್ಯಕ್ಷ ಕೆ. ವಾಜಿದ್ ಪಾಷ ಅವರನ್ನು ಬಂಧಿಸಲಾಗಿದೆ.
ಈಗ ಪ್ರವಾದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಮತ್ತು ಆ ಮೂಲಕ ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಗಲಭೆಗೆ ಕಾರಣನಾಗಿದ್ದ ನವೀನ್ ವಿರುದ್ದ ದೂರು ನೀಡುವ ತಂಡದಲ್ಲೂ ವಾಜೀದ್ ಪಾಷಾ ಕಾಣಿಸಿಕೊಂಡಿದ್ದರು.
ಡಿ.ಜೆ. ಹಳ್ಳಿ ಘಟನೆಯ ಹಿಂದೆ ಬಹಳ ವ್ಯವಸ್ಥಿತವಾದ ಸಂಚು ಇದೆ ಎಂದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸಲಿದ್ದು, ಸರ್ಕಾರ ಯಾವುದೇ ರೀತಿಯ ಕಾನೂನು ಕ್ರಮ ಕೈಗೊಂಡರು ಯಾವುದೇ ಅಭ್ಯಂತರವಿಲ್ಲ. ನಾವು ಸಹಕಾರ ನೀಡುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಬಿ.ಎಲ್. ಸಂತೋಷ್ ಅವರಂತಹ ಹಿರಿಯ ರಾಜಕಾರಣಿಗಳು ಜಾತಿ-ಜಾತಿಗಳ ಮಧ್ಯೆ, ಧರ್ಮ- ಧರ್ಮಗಳ ಮಧ್ಯೆ ಬೆಂಕಿ ಹಚ್ಚುವ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಬಾಯಿಗೆ ಬಂದಾಗೆ ಮಾತನಾಡುತ್ತಿದ್ದಾರೆ. ಇದನ್ನು ನಿಲ್ಲಿಸುವಂತೆ ಸಿಎಂ ಯಡಿಯೂರಪ್ಪ ಸೂಚಿಸಬೇಕು.
-ದಿನೇಶ್ ಗುಂಡೂರಾವ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.