ಅಡ್ವೋಕೇಟ್ ಜನರಲ್ ಅವರೇ ಈ ಪ್ರಕರಣದ ಸಿಬಿಐ ತನಿಖೆಗೆ ಅನುಮತಿ ನೀಡಲು ಬರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ ಈ ವಿಚಾರವನ್ನು ಸ್ಪೀಕರ್ ಬಳಿಯೂ ತೆಗೆದುಕೊಂಡು ಹೋಗದೆ ಯಡಿಯೂರಪ್ಪ ಅವರು ಸೀದಾ ಸಿಬಿಐ ತನಿಖೆಗೆ ಅನುಮತಿ ನೀಡಿದರು ಎಂದು ಉಪಮುಖ್ಯಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಬಿಜೆಪಿಯ ಕುತಂತ್ರದಿಂದ ಅಕ್ರಮ ಆಸ್ತಿ ಗಳಿಕೆಯ ಪ್ರಕರಣವನ್ನ ಬಲವಂತವಾಗಿ ನನ್ನ ಮೇಲೆ ಹಾಕಲಾಗಿದೆ. ಯಡಿಯೂರಪ್ಪ ಅವರ ಸರ್ಕಾರದಲ್ಲಿ ಇದ್ದ ಅಡ್ವೋಕೇಟ್ ಜನರಲ್ ಅವರೇ 'ಇದು ಸಿಬಿಐ'ಗೆ ನೀಡುವಂತಹ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿದ್ದರು. ಆದರೂ ಕಾನೂನು ಬಾಹಿರವಾಗಿ ಸಿಬಿಐಗೆ ಪ್ರಕರಣ ವಹಿಸಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಶೇ 90 ರಷ್ಟು ತನಿಖೆ ನಡೆಸಿದ್ದೇವೆ ಎಂದು ಸಿಬಿಐ ಹೇಳಿದೆ. ನಾನು, ನನ್ನ ಹೆಂಡತಿ ಹಾಗೂ ಕುಟುಂಬದವರು ನನ್ನ ಆಸ್ತಿ ಯಾವುದು, ನನ್ನ ಹೆಂಡತಿಯ ಆಸ್ತಿ ಯಾವುದು ಎಂದು ಹೇಳಬೇಕು. ನನ್ನನ್ನೇ ಕರೆಸದೆ, ಕೇಳದೆ ಅದು ಹೇಗೆ ಶೇಕಡಾ 90 ರಷ್ಟು ತನಿಖೆ ಮಾಡಿದರೋ ಗೊತ್ತಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.