ಪ್ರಭಾವಿ ಸಚಿವರು 50-60 ಶಾಸಕರ ಸಮೇತ ಬಿಜೆಪಿ ಸೇರುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಹುಟ್ಟುತ್ತಲೇ ಕಾಂಗ್ರೆಸಿಗ. ಬೇರೆ ಪಕ್ಷಕ್ಕೆ ಹೋಗಲು ನಾನು ಹುಚ್ಚನಲ್ಲ ಎಂದು ತಿರುಗೇಟು ನೀಡಿದ್ದಾರೆ.
ಬೆಂಗಳೂರಿನ ಆಸ್ತಿಗಳನ್ನು ಹೊಸ ತಂತ್ರಜ್ಞಾನದ ಮೂಲಕ ಮ್ಯಾಪಿಂಗ್ ಕೆಲಸ ಮಾಡುತ್ತಿದೆ. ಒಂದಷ್ಟು ಆಸ್ತಿ ವ್ಯಾಜ್ಯಗಳು ನ್ಯಾಯಾಲಯದಲ್ಲಿವೆ. ಒತ್ತುವರಿಯ ಬಗ್ಗೆ ನಿಮ್ಮ ಬಳಿ ನಿರ್ದಿಷ್ಟ ದಾಖಲೆಗಳು ಇದ್ದರೆ ಈಗಲೇ ಕೊಡಿ, ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಅನುದಾನ ವರ್ಗಾವಣೆ ಕುರಿತು ಚರ್ಚೆಗೆ ಸ್ಪೀಕರ್ ಅವಕಾಶ. RR ನಗರಕ್ಕೆ ಬಿಡುಗಡೆ ಆಗಿದ್ದ ಹಣ ಬೇರೆ ಕ್ಷೇತ್ರಕ್ಕೆ ವರ್ಗಾವಣೆ. ಡಿಸಿಎಂ ಡಿಕೆಶಿ ನಡೆ ವಿರುದ್ಧ ಸದನದಲ್ಲಿ ಹೋರಾಟಕ್ಕೆ ಪ್ಲಾನ್ .ಮುನಿರತ್ನ ಜೊತೆ ಬೆಂಗಳೂರು ಬಿಜೆಪಿ ಶಾಸಕರಿಂದ ಹೋರಾಟ.
ಪ್ರತಿಭಟನಾ ನಿರತರ ಸಮಸ್ಯೆಗಳನ್ನು ಆಲಿಸುವ ಬದಲು ಕಾಂಗ್ರೆಸ್ ಸರ್ಕಾರ ಪ್ರತಿಭಟನಾ ನಿರತರನ್ನು ಹತ್ತಿಕ್ಕುತ್ತಿದೆ. ಬೆಳಗಾವಿಯ ಸುವರ್ಣ ಸೌಧದ ಬಳಿ ಪೋಲಿಸಪ್ಪ ದರ್ಪದಿಂದ ಪ್ರತಿಭಟನಾಕಾರರ ವಿರುದ್ದ ತೊಡೆ ತಟ್ಟಿದ್ದೆ ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ʼಕರ್ನಾಟಕದ ಲೂಟಿಯ ಮಾಡೆಲ್ನ್ನು ಕಾಂಗ್ರೆಸ್ ದೇಶದಾದ್ಯಂತ ವಿಸ್ತರಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಗುತ್ತಿಗೆದಾರರ ಮಂಚದ ಅಡಿ ಸಿಕ್ಕಂತೆಯೇ ಜಾರ್ಖಂಡ್ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯರ ಮನೆಯಲ್ಲಿ ₹200 ಕೋಟಿ ಅಕ್ರಮ ಹಣ ಪತ್ತೆಯಾಗಿದೆ! ಭ್ರಷ್ಟಾಚಾರದ ನವ ಇತಿಹಾಸ ಬರೆಯುತ್ತಿರುವ ಕಾಂಗ್ರೆಸ್ ಶಾಸಕರ ಮನೆಯಲ್ಲಿ ಹುಡುಕಿದರೆ ಅದಕ್ಕಿಂತಲೂ ಹೆಚ್ಚು ಹಣ ಸಿಗಬಹುದು ಎಂದು ಬಿಜೆಪಿ ಟೀಕಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.