DK Shivakumar: ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು ಮಾ.7 ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದರು.
DK Shivakumar: "ನಿನ್ನೆಯ ಸ್ಫೋಟದ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ದುರ್ಘಟನೆಗೆ ಕಾರಣರಾಗಿರುವವರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
Congress guarantee schemes: 1.56 ಕೋಟಿ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್ ನೀಡುವುದರ ಜೊತೆಗೆ 1.50 ರೂ. ವಿದ್ಯುತ್ ದರ ಇಳಿಸಿದ್ದೇವೆ. ಇದಕ್ಕೆ ವಿರೋಧ ಪಕ್ಷಗಳು ಏನು ಹೇಳುತ್ತವೆ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಇದಕ್ಕೆ ಉತ್ತರಿಸಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
Rameshwaram Cafe Blast: ಬೆಂಗಳೂರಿನ ವೈಟ್ಫೀಲ್ಡ್ ಬಳಿಯ ಬ್ರೂಕ್ಫೀಲ್ಡ್ನ ರಾಮೇಶ್ವರಂ ಕೆಫೆಯಲ್ಲಿ ಶನಿವಾರ ಭಾರೀ ಸ್ಫೋಟ ಸಂಭವಿಸಿದ್ದು, ಮೂವರು ಸಿಬ್ಬಂದಿ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ.
ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದಾರೆ ಎಂಬ ಬಿಜೆಪಿ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ, ಪೊಲೀಸರು ಕಾನೂನು ರೀತಿಯ ಕ್ರಮ ಕೈಗೊಳ್ಳಲಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಿಜೆಪಿಯವರು ಇದನ್ನು ತಿರುಚುತ್ತಿದ್ದಾರೆ ಎಂದರು.
DK Shivakumar Response On pakistan zindabad slogan: ವಿಧಾನಸೌಧದಲ್ಲಿ ಯಾರೂ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿಲ್ಲ. ಒಂದು ವೇಳೆ ಕೂಗಿದ್ದರೆ ಪೊಲೀಸರು ಅವರನ್ನು ಒದ್ದು ಒಳಗೆ ಹಾಕುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. NPS ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.
DK Shivakumar: “ಬಿಜೆಪಿ ಹಾಗೂ ಜೆಡಿಎಸ್ ನವರು ಆತ್ಮಸಾಕ್ಷಿ ಮತಗಳನ್ನು ಕೇಳುತ್ತಿದ್ದರು. ಬಿಜೆಪಿಯವರೇ ಆತ್ಮಸಾಕ್ಷಿ ಮತ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಈಗಾಗಲೇ ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ಕಾವೇರಿ ನೀರನ್ನ ಬೇಕಾಬಿಟ್ಟಿ ತಮಿಳುನಾಡಿಗೆ ಹರಿಸಿದ ನಾಡದ್ರೋಹಿ ಸರ್ಕಾರ ಈಗ ಬೆಂಗಳೂರಿನ ಜನತೆ ಖಾಸಗಿ ಟ್ಯಾಂಕರ್ ಗಳಿಗೆ ಸಾವಿರಾರು ರೂ. ತೆತ್ತುವ ಪರಿಸ್ಥಿತಿ ತಂದಿಟ್ಟಿದೆ ಎಂದು ವಿಪಕ್ಷ ನಾಯಕ ಆರ್. ಆಶೋಕ್ ಹೇಳಿದರು.
“ನಮ್ಮ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗಿರುವ ಅನ್ಯಾಯದ ವಿರುದ್ದ ನಿರ್ಣಯ ಮಂಡಿಸಿದ್ದೇವೆ. ಬಿಜೆಪಿಯವರು ರಾಜ್ಯದ ಬೆಂಬಲಕ್ಕೆ ನಿಲ್ಲಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು.
ಜಮಖಂಡಿ ಮತ್ತು ಅಥಣಿ ನಡುವೆ ಕೃಷ್ಣಾ ನದಿಯ ಸೇತುವೆಯನ್ನು 480 ಮೀಟರ್ ನಷ್ಟು ಉದ್ದ, 533 ಮೀ ಎತ್ತರ ಮಾಡಲು ತೀರ್ಮಾನಿಸಲಾಗಿತ್ತು. ಈಗ ಸೇತುವೆ ಗಾತ್ರವನ್ನು ಪರಿಷ್ಕರಿಸಿ ಇದನ್ನು ಕ್ರಮವಾಗಿ 680 ಹಾಗೂ 534 ಮೀ.ಗೆ ಏರಿಕೆ ಮಾಡಲಾಗಿದೆ. ಇದರ ಅಂದಾಜು ವೆಚ್ಚವನ್ನು 60 ಕೋಟಿಯಿಂದ 99 ಕೋಟಿಗೆ ಏರಿಸಲಾಗಿದೆ.
ಸೇಂದಿ ಬದಲಾಗಿ ನೀರಾ ಬಂದಿದ್ದು ನೀರಾ ಮಳಿಗೆಗಳ ಸ್ಥಾಪನೆಗೆ ಅನುಮತಿ ನೀಡಬೇಕು. ಈ ಸಮುದಾಯದವರಿಗೆ ಎಂಎಸ್ಐಎಲ್ ನಲ್ಲಿ ಅವಕಾಶ ನೀಡಬೇಕು” ಎಂದು ಕೋಟಾ ಶ್ರೀನಿವಾಸ ಪೂಜಾರಿ ಸರ್ಕಾರಕ್ಕೆ ಸಲಹೆ ನೀಡಿದರು.
ಕಾಂಗ್ರೆಸ್ ಸರ್ಕಾರ ಕೇವಲ 17 ಕೋಟಿ ರೂ. ಮೀಸಲಿಟ್ಟಿದ್ದು, ಸುಮಾರು 90% ಅನುದಾನ ಕಡಿತವಾಗಿದೆ. ಇದೇ ಕಾಂಗ್ರೆಸ್ ನಾಯಕರು ತೋರುವ ಪ್ರೀತಿ. ಅದೇ ವಕ್ಫ್ ಮಂಡಳಿಗೆ 100 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
D.K. Shivakumar: “ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
Congress guarantee schemes: ʼನಮ್ಮವರೇ ನಮಗೆ ಮೂಲ' ಎಂಬಂತೆ ರಾಜ್ಯದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಉಂಡ ಮನೆಗೆ ದ್ರೋಹ ಬಗೆಯುವ ಕೆಲಸ ಮಾಡುತ್ತಿದ್ದಾರೆ. ನಮ್ಮ ರಾಜ್ಯಕ್ಕೆ ಕೇಂದ್ರದಿಂದ ತೆರಿಗೆಯಲ್ಲಿ, ಅನುದಾನದಲ್ಲಿ, ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ, ಅಕ್ಕಿ ಕೊಡುವ ವಿಚಾರದಲ್ಲಿ, ಮಹದಾಯಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳಲ್ಲಿ ಅನ್ಯಾಯವಾಗುತ್ತಿರುವುದು ಆ ಸೂರ್ಯ ಚಂದ್ರರಷ್ಟೇ ಸತ್ಯ.
ಅಲ್ಲಿ ಸಾಲು ಸಾಲು ಸಮಸ್ಯೆಗಳನ್ನ ಹೊತ್ತುಬಂದವರು ಒಂದೆಡೆ ಕಾದು ಕುಳಿತಿದ್ರೆ, ಅತ್ತ ಉಭಯ ಪಕ್ಷಗಳ ನಾಯಕರು ಒಂದೇ ವೇದಿಕೆಯಲ್ಲಿ ಕುಳಿತು ಎಲ್ಲರ ಗಮನಸೆಳೆದ್ರು. ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಡಿಕೆಶಿಯನ್ನ ಹಾಡಿ ಹೊಗಳಿದ್ರೆ, ಆರ್.ಆರ್.ನಗರ ಶಾಸಕ ಮುನಿರತ್ನ ನಗು ನಗುತ್ತಲೇ ಮುನಿಸು ಹೊರಹಾಕಿದ್ರು. ಜ್ಞಾನ ಭಾರತಿ ಆವರಣದಲ್ಲಿ ನಡೆದ ಬಾಗಿಲಿಗೆ ಬಂತು ಸರ್ಕಾರ-ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮ ಹೇಗಿತ್ತು ಅನ್ನೋದರ ಝಲಕ್ ಇಲ್ಲಿದೆ ನೋಡಿ
ನಮ್ಮ ಬಜೆಟ್ ನ ಅಂಕಿ-ಅಂಶಗಳನ್ನು ನೋಡಿ ವಿರೋಧ ಪಕ್ಷಗಳ ನಾಯಕರಿಗೆ ಸಂಕಟದಿಂದ ಕೂರಲು ಆಗಲಿಲ್ಲ. ಎಲ್ಲಾ ಗ್ಯಾರಂಟಿಗಳಿಗೆ ಹಣ ಕೊಟ್ಟು ಇಷ್ಟು ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರಲ್ಲ ಎಂದು ಅಸೂಯೆಯಿಂದ ಬಜೆಟ್ ಧಿಕ್ಕರಿಸಿ ಎದ್ದು ಹೋದರು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.