ಸಂಕಷ್ಟ ಸೂತ್ರ ಆಗ್ರಹ ಮಾಡುವ ಮೊದಲು ನಮಗೆ ಅದರ ಬಗ್ಗೆ ಸ್ಪಷ್ಟತೆ ಇರಬೇಕು. ಅದಕ್ಕೆ ನಾವು ಮೊದಲು ಒಂದು ಸೂತ್ರದ ಬಗ್ಗೆ ಚರ್ಚೆ ಮಾಡುತ್ತೇವೆ. ಆದಕ್ಕಾಗಿ ಇಂದು ಸಂಜೆ ಸಭೆ ಕರೆಯಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಅಕ್ರಮ ಆಸ್ತಿ ಸಂಬಂಧ ಚಾರ್ಜ್ಶೀಟ್ ಸಲ್ಲಿಕೆ ವಿಚಾರ ಪ್ರತಿಕ್ರಿಯೆ ನೀಡಿದ ಡಿಕೆಶಿ, ಏನ್ ಮಾಡ್ಲಿ ನಾನು, ಈ ಸಂದರ್ಭದಲ್ಲಿ ಎಲ್ಲ ನಡೆಯುತ್ತಿದೆ. ನನ್ನ ಮಗಳಿಗೆ ಸಿಬಿಐಯವರು ನೋಟಿಸ್ ಕಳಿಸಿದ್ದಾರೆ. ಫೆಬ್ರವರಿ 24ಕ್ಕೆ ನನಗೆ ಇಡಿಯವರು ವಿಚಾರಣೆಗೆ ಕರೆದಿದ್ದಾರೆ ಎಂದು ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.