DCM DK Shivakumar: ಸಂಡೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಅವರನ್ನು ಗೆಲ್ಲಿಸಿದ್ದ ಹಿನ್ನೆಲೆಯಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು.
Bandipur Tiger Reserve: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಕರ್ನಾಟಕ ಸರ್ಕಾರ ರಾತ್ರಿ ಸಂಚಾರವನ್ನು ನಿಷೇಧಿಸಿದೆ.
ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಗೆ ಅಡಳಿತ ಪಕ್ಷದಲ್ಲಿ ಅಪಸ್ವರ ಎದ್ದಿದೆ. ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಕೋಕ್ ಬೀಳುತ್ತಾ ಎಂಬ ಮಾತುಗಳು ಕೇಳಿ ಬಂದಿವೆ.. ಮೊನ್ನೆ ಡಿಸಿಎಂ ಡಿಕೆಶಿ ಶಕ್ತಿ ಯೋಜನೆ ಪರಿಷ್ಕರಣೆ ಮಾಡಬೇಕು ಎಂದು ಹೇಳಿ ಸಂಚಲನ ಸೃಷ್ಟಿಸಿದ್ರು . ವಿಪಕ್ಷ ಮತ್ತು ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಡಿಕೆಶಿ ಯೂಟರ್ನ ಹೊಡೆದಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ
ಯೋಗೇಶ್ವರ್ ದೊಡ್ಡವರು, ಅವರ ಬಗ್ಗೆ ಏನು ಚರ್ಚೆ ಮಾಡಲಿ
ಯೋಗೇಶ್ವರ್ ಡಿ.ಕೆ.ಶಿವಕುಮಾರ್ ಸಂಪರ್ಕದಲ್ಲಿದ್ದಾರೆ
ಪಕ್ಷೇತರ ಅಭ್ಯರ್ಥಿಯಾಗ್ತಾರೆ ಅನ್ನೋ ಸುದ್ದಿಯೂ ಇದೆ
ಅವರ ನಿರ್ಧಾರದ ಬಗ್ಗೆ ನನ್ನ ಬಳಿ ಚರ್ಚೆ ನಡೆಸಿಲ್ಲ
ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್‌ಡಿಕೆ ಹೇಳಿಕೆ
ಚನ್ನಪಟ್ಟಣದ ವಿಚಾರ ಯಾವುದೇ ಚರ್ಚೆ ಆಗಿಲ್ಲ
MUDA Scam: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಗಣಿ ಹಗರಣದ ವಿರುದ್ಧ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಸಂಸ್ಥೆ ರಾಜ್ಯಪಾಲರಿಗೆ ಅನುಮತಿ ಕೇಳಿ 10 ತಿಂಗಳಾದರೂ ರಾಜ್ಯಪಾಲರು ಆ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ ಎಂದು ಸಚಿವ ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ.
MUDA Scam: ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡುತ್ತಿದ್ದಾರೆ. ಪ್ರಹ್ಲಾದ್ ಜೋಶಿ, ಎಚ್.ಡಿ.ಕುಮಾರಸ್ವಾಮಿ ಈ ಸರ್ಕಾರ ಬೀಳಿಸುತ್ತೇವೆಂದು ಹೇಳಿಕೆ ನೀಡಿದ್ದಾರೆ. ಅದಕ್ಕೆ ಪೂರಕವಾಗಿ ಈ ಪೂರ್ವಾನುಮತಿ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Gruha Jyothi Scheme: ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ RR ಸಂಖ್ಯೆಯೊಂದಿಗೆ ನೋಂದಣಿ ಮಾಡಿಕೊಂಡು ಈ ಯೋಜನೆಯ ಲಾಭ ಪಡೆಯಬಹುದು.
Gruha Lakshmi Schem: ಈ ಯೋಜನೆಯ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಮಹಿಳೆಯರಿಗೆ ಭರವಸೆ ನೀಡಿದ್ದಾರೆ. ಕೊಡಗಿನಲ್ಲಿ ಆಗುತ್ತಿರುವ ಮಳೆಯಿಂದ ಉಂಟಾಗಿರುವ ಹಾನಿ ಪರಿಶೀಲನೆ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಅವರು ಮಾತನಾಡಿದ್ದಾರೆ. ತಾಂತ್ರಿ ಕದೋಷ ಉಂಟಾಗಿರುವ ಕಾರಣ ಜೂನ್ & ಜುಲೈ ತಿಂಗಳ ಹಣ ಬಿಡುಗಡೆಯಾಗುವುದಕ್ಕೆ ತಡವಾಗುತ್ತಿದೆ. ಶೀಘ್ರವೇ ಇದನ್ನು ಸರಿಪಡಿಸಲಿದ್ದು, ಯಾವುದೇ ಮಹಿಳೆಗೂ ಸಹ ಸಮಸ್ಯೆಯಾಗುವುದಿಲ್ಲವೆಂದು ತಿಳಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಅವರ ಪಾದಯಾತ್ರೆ ಅವರು ಮಾಡಿದ ಹಗರಣಗಳ ಪಾಪದ ವಿಮೋಚನೆಯ ಯಾತ್ರೆಯೇ ಹೊರತು, ಇದರಿಂದ ಯಾವ ಪ್ರಯೋಜನವೂ ಇಲ್ಲವೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.
ಬಿಜೆಪಿಯಿಂದ ವಚನಭ್ರಷ್ಟ ಎನಿಸಿಕೊಂಡು, ಬಿಜೆಪಿಯೊಂದಿಗೆ ಇನ್ನೆಂದಿಗೂ ಮೈತ್ರಿ ಇಲ್ಲ ಎಂದು ಜನರ ಕಿವಿ ಮೇಲೆ ಲಾಲ್ ಬಾಗ್ ಇಟ್ಟು, ಬಿಜೆಪಿಯ ಹಗರಣಗಳ ಬಗ್ಗೆ ಪುಂಖಾನುಪುಂಖವಾಗಿ ಮಾತಾಡಿ ಈಗ ನಾಚಿಕೆ ಬಿಟ್ಟು ಅದೇ ಬಿಜೆಪಿಯ ಶಾಲನ್ನು ಹೆಗಲೇರಿಸಿ, ಅದೇ ಬಿಜೆಪಿಯೊಂದಿಗೆ ಹೆಜ್ಜೆ ಹಾಕುತ್ತಿರುವುದು ಅಸಹ್ಯದ ಪರಮಾವಧಿಯಲ್ಲವೇ? ಎಂದು ಎಚ್‌ಡಿಕೆಗೆ ಕಾಂಗ್ರೆಸ್ ಪ್ರಶ್ನಿಸಿದೆ.
ಕುಮಾರಸ್ವಾಮಿಯವರು ನಾನು ಪೆನ್‌ಡ್ರೈವ್ ಬಿಡುಗಡೆ ಮಾಡಿದೆ ಎಂದು ಸುಳ್ಳು ಆರೋಪ ಮಾಡಿದ್ದರು. ಈ ಶಿವಕುಮಾರ್ ಅಂತಹ ನೀಚ ರಾಜಕಾರಣ ಮಾಡುವುದಿಲ್ಲ ಎಂದು ರಾಜ್ಯದ ಜನತೆಗೆ ಗೊತ್ತಿದೆ. ಈಗ ಕುಮಾರಸ್ವಾಮಿಯವರೇ ಈ ಪೆನ್‌ಡ್ರೈವ್‌ಗಳನ್ನು ಬಿಟ್ಟಿರುವುದು ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಎಂದು ಹೇಳಿದ್ದಾರೆ. ಪ್ರೀತಂಗೌಡನನ್ನು ವೇದಿಕೆಯಲ್ಲಿಟ್ಟುಕೊಂಡು ನನ್ನನ್ನು ಪಾದಯಾತ್ರೆ, ಸಭೆಗೆ ಕರೆಯುತ್ತಾರೆ. ಹೀಗಾಗಿ ನಾನು ಭಾಗವಹಿಸುವುದಿಲ್ಲವೆಂದು ಕುಮಾರಸ್ವಾಮಿ ಹೇಳಿದ್ದರು, ಈಗ ಹೋಗಿದ್ದಾರೆ. ಅವರ ಮಾತಿಗೂ ಕೃತಿಗೂ ಸಂಬಂಧವೇ ಇರುವುದಿಲ್ಲವೆಂದು ಕುಟುಕಿದರು.
DK Sivakumar: ಕಬಿನಿ, ಕೆಆರ್‌ಎಸ್, ಹೇಮಾವತಿ ವಿಭಾಗದಲ್ಲಿ ೩ ಜನ ರೈತರು ಹಾಗೂ ಒಬ್ಬ ಪ್ರಗತಿಪರ ರೈತ ಮತ್ತು ಕಿರಿಯ ಎಂಜಿನಿಯರ್ ಅವರಿಗೆ ಕಾವೇರಿ ನೀರಾವರಿ ನಿಗಮದಿಂದ ಪ್ರಶಸ್ತಿ ನೀಡಲಾಗುವುದು ಎಂದು ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ತಾಯಿ ಚಾಮುಂಡೇಶ್ವರಿಯಲ್ಲಿ ಈ ವರ್ಷ ಉತ್ತಮ ಮಳೆಯಾಗಲಿ ಎಂದು ಬೇಡಿಕೊಂಡಿದ್ದೆವು. ನಮ್ಮ ಬದುಕು ಉಳಿಸು ಎಂದು ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದ್ದೆವು, ಮನುಷ್ಯ ಪ್ರಯತ್ನಕ್ಕೆ ಸೋಲಾಗಬಹುದು ಆದರೆ ಪ್ರಾರ್ಥನೆಗೆ ಎಂದೂ ಸೋಲಾಗುವುದಿಲ್ಲ ಎನ್ನುವುದಕ್ಕೆ ಕಾವೇರಿ ತಾಯಿ ತುಂಬಿ ಹರಿಯುತ್ತಿರುವುದೇ ಸಾಕ್ಷಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಹಾಸನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆವತ್ತು ನಾನಾಗಲಿ ಅಥವಾ ದೇವೇಗೌಡರಾಗಲಿ ಕಾಂಗ್ರೆಸ್ʼನವರ ಮನೆ ಬಾಗಲಿಗೆ ಬಂದಿದ್ದವಾ? ದೇವೇಗೌಡರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಿದ್ದು ಕಮ್ಯುನಿಸ್ಟ್ ಪಕ್ಷಗಳು ಹಾಗೂ ಸಂಯುಕ್ತ ರಂಗದ ಅಂಗಪಕ್ಷಗಳು. ಒಬ್ಬ ಕನ್ನಡಿಗನನ್ನು ಪ್ರಧಾನಿ ಸ್ಥಾನದಿಂದ ತೆಗೆದವರು ಯಾರು? ನಾನು ಏನು ತಪ್ಪು ಮಾಡಿದ್ದೆ ಎಂದು ನನ್ನ ಸರಕಾರ ತೆಗೆದರು? ಇದರ ಬಗ್ಗೆಯೂ ಉಪ ಮುಖ್ಯಮಂತ್ರಿ ಹೇಳಬೇಕಲ್ಲವೇ ಎಂದು ಚಾಟಿ ಬೀಸಿದರು.
ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ.
ಎಂ.ಎಸ್.ಕೃಷ್ಣ ಮತ್ತು ಎಸ್.ಬಂಗಾರಪ್ಪನವರ ಸಂಪುಟದಲ್ಲಿ ನಾನು ಮಂತ್ರಿ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದಾಗ ಆಗಿರುವ ಸಂತೋಷಕ್ಕಿಂತ ಮೈಸೂರಿನಲ್ಲಿ ಪದವೀಧರ ಸರ್ಟಿಫಿಕೇಟ್ ತೆಗೆದುಕೊಂಡಾಗ ಆಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು: ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಆಡಿಯೋ ಸಂಭಾಷಣೆಯಲ್ಲಿ ಡಿಕೆ ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
Minister Cheluvarayaswamy: ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಚೆಲುವರಾಯಸ್ವಾಮಿ, "ಈ ಹಗರಣದಲ್ಲಿ ಯಾವುದೇ ಕಾರಣಕ್ಕೂ ಡಿಕೆ ಶಿವಕುಮಾರ್ ಅವರು ಮಧ್ಯಪ್ರವೇಶ ಮಾಡಿಲ್ಲ. ನೂರಕ್ಕೆ ನೂರರಷ್ಟು ಈ ವಿಚಾರಕ್ಕೂ ಅವರಿಗೂ ಸಂಬಂಧವಿಲ್ಲ.
ಪೆನ್ ಡ್ರೈವ್ ಹಾಗೂ ಮಹಿಳೆಯರ ವಿಡಿಯೋ ಬಹಿರಂಗ ಮಾಡಿದ ಎರಡೂ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು. ತಪ್ಪಿದರೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಬೇಕು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.