ಇಂದು ಕಾಶ್ಮೀರದಲ್ಲಿ ಭಾರತ ಜೋಡೋ ಯಾತ್ರೆ ಸಮಾರೋಪ ಸಮಾರಂಭ ನಡೆಯುತ್ತಿದ್ದು, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಕಣಿವೆ ರಾಜ್ಯಕ್ಕೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಕಾಶ್ಮೀರದ ಹಿಮಪಾತ ಹಾಗೂ ಪ್ರಕೃತಿ ಸೌಂದರ್ಯಕ್ಕೆ ಮನಸೋತಿರುವ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಮೂಲಕ ತಮ್ಮ ಅನುಭವ ಹಂಚಿಕೊಂಡಿದ್ದಾರೆ.
ಇಂದು ಹಳೇ ಮೈಸೂರಿನ ಹತ್ತಾರು ಪ್ರಮುಖರು ಬಿಜೆಪಿ ಸೇರಿದ್ದಾರೆ.ಪರಿವಾರವಾದ, ಕುಟುಂಬ ವಾದದಿಂದ ರಾಷ್ಟ್ರೀಯ ವಾದ ಪಕ್ಷಕ್ಕೆ ಇವರೆಲ್ಲ ಬಂದಿದ್ದಾರೆ.ದೇಶದಲ್ಲಿ ರಾಜಕೀಯ ತಿರುವು ಪಡೆದುಕೊಂಡಿದೆ.ಐದು ವರ್ಷದ ಹಿಂದೆ ಕಾಂಗ್ರೆಸ್, ಜೆಡಿಎಸ್ ನಿರಾಕರಿಸಿದ್ರು ಜನ , ಅನೈತಿಕ ಸಂಬಂಧದಿಂದ ಸರ್ಕಾರ ರಚಿಸಿದ್ರು ಕಾಂಗ್ರೆಸ್-ಜೆಡಿಎಸ್.ಈ ಅನೈತಿಕ ಸರ್ಕಾರ ಜನರಿಗೆ ಇಷ್ಟ ಆಗಲಿಲ್ಲ,ಮೊದಲ ಬಾರಿಗೆ ಆಡಳಿತ ಪಕ್ಷಗಳ 17 ಜನ ವಿರೋಧ ಪಕ್ಷ ಸೇರಿ ವಿರೋಧ ಪಕ್ಷವನ್ನು ಅಧಿಕಾರಕ್ಕೆ ತಂದ್ರು.ಕಾಂಗ್ರೆಸ್‌ನವರ ಬಸ್ ಹೊರಟಿದೆ, ಹೋಗ್ತಾಹೋಗ್ತಾ ಅದರ ಬ್ರೇಕ್ ಫೇಲ್ ಆಗುತ್ತೆ.
"ರಾಜ್ಯದ ಒಂದಿಂಚು ಜಾಗವನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡಲು ಅವರು ನಿಜಕ್ಕೂ ತಯಾರಿಲ್ಲದಿದ್ದರೆ ತಕ್ಷಣವೇ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗಲಿ ಹಾಗೆಯೇ ಕೇಂದ್ರ ಗೃಹ ಸಚಿವರು ಈ ವಿಷಯದ ಬಗ್ಗೆ ಸಾರ್ವಜನಿಕವಾಗಿ ಭರವಸೆ ನೀಡಲಿ" ಎಂದು ಡಿಕೆಶಿ ಸವಾಲೆಸೆದಿದ್ದಾರೆ.
ಕೋವಿಡ್ ನೆಪವೊಡ್ಡಿ ಚುನಾವಣೆಯನ್ನು ಮುಂಚಿತವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂಬ ಅನಧಿಕೃತ ಮಾಹಿತಿ ಬಂದಿದೆ. ಅವರು ಯಾವಾಗ ಚುನಾವಣೆ ಮಾಡಿದರೂ ನಮ್ಮ ಪಕ್ಷ ಸಿದ್ಧವಿದೆ ಎಂದು ಡಿಕೆಶಿ ಹೇಳಿದ್ದಾರೆ.
ಗಡಿ ವಿವಾದ ಈಗಾಗಲೇ ಇತ್ಯರ್ಥ ಆಗಿರುವ ವಿಚಾರ. ನಮ್ಮ ಗಡಿಯೊಳಗಿನ ಪ್ರದೇಶ ನಮ್ಮದು, ಅವರ ಗಡಿಯೊಳಗಿನ ಪ್ರದೇಶ ಅವರದ್ದು. ಇಲ್ಲಿರುವವರೆಲ್ಲರೂ ನಮ್ಮವರೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅರ್ಜಿ ಸಲ್ಲಿಸುವಾಗ ಆಕಾಂಕ್ಷಿಗಳಿಂದ ದೇಣಿಗೆ ಸಂಗ್ರಹ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಇದು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ ಈ ಬಾರಿ ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ.
ನನಗೆ ಯಾರೂ ಮಾಲೆ ಹಾಕಬೇಡಿ; ಚುನಾವಣೆಯಲ್ಲಿ ಜಿಲ್ಲೆಯ ನಾಲ್ವರು ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿ ಗೆಲುವಿನ ಮಾಲೆ ಹಾಕಿ- ಭಾರತ್ ಜೋಡೋ ಯಾತ್ರೆಯ ಫೂರ್ವಭಾವಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್
ಸಚಿವ ಅಶ್ವತ್ಥ್ ನಾರಾಯಣ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ್ ಅವನ್ನು ಭೇಟಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಈ ಕುರಿತಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ವಲಯದಲ್ಲೇ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಮಾಜಿ ಸಂಸದೆ ರಮ್ಯಾ ಬಹಿರಂಗವಾಗೇ ಅಸಮಾಧಾನ ಹೊರ ಹಾಕಿದ್ದಾರೆ.
ಸಭೆ ಬಳಿಕ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಮ್ಮ ಪಕ್ಷ ಮೊದಲಿನಿಂದಲೂ ಅಲ್ಪಸಂಖ್ಯಾತ ಪರವಾಗಿಯೇ ಇದೆ. ಸಂವಿಧಾನಕ್ಕೆ, ಅಲ್ಪಸಂಖ್ಯಾತರಿಗೆ ಗೌರವ ನೀಡುತ್ತಾ ಬಂದಿದ್ದೇವೆ. ಜಾತ್ಯತೀತದ ಬಗ್ಗೆ ಸಂವಿಧಾನದ ಆಶಯಗಳನ್ನು ಪಾಲಿಸುವುದು ಪಕ್ಷದ ಕರ್ತವ್ಯ.
ಕರೋನಾ ನಿಯಮಾವಳಿಗಳನ್ನು ಗಾಳಿಗೆ ತೂರಿ ಮೇಕೆದಾಟು ಪಾದಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್ (FIR) ದಾಖಲಿಸಲಾಗಿದೆ. ಈಗ ಎಫ್ ಐ ಆರ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (A1) ಮೊದಲ ಆರೋಪಿಯನ್ನಾಗಿ ಮಾಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ (A2), ಸಂಸದ ಡಿ ಕೆ ಸುರೇಶ್ (A3) ಸೇರಿದಂತೆ 31 ನಾಯಕರ ವಿರುದ್ಧ ಎಫ್ಐಆರ್ (FIR)ದಾಖಲಿಸಲಾಗಿದೆ.
Mekedatu Padayatre: ಏನ್ ಟೆಸ್ಟ್ ಮಾಡದು? ಏನನ್ನ ಟೆಸ್ಟ್ ಮಾಡದು? ಬೇಕಾದರೆ ಅವನು ಟೆಸ್ಟ್ ಮಾಡಿಸಿಕೊಳ್ಳಲಿ ಎಂದು ಏಕವಚನದಲ್ಲಿ ಮಾತನಾಡಿದರು. ನೀವು ನನ್ನ ಆರೋಗ್ಯ ಕಾಳಜಿಯ ಮೆರೆಗೆ ಬಂದ್ದಿದೀರ, ಆದರೆ ನಾನು ಯಾವುದೇ ಪರೀಕ್ಷೆ ಕೊಡಲ್ಲ.
ಜನರು ಈಗಾಗಲೇ ತಮಗೆ ಹೇಗೆ ಬೇಕೋ ಹಾಗೆ ಮಾತನಾಡಿಕೊಂಡಿದ್ದಾರೆ. ಈ ಬಗ್ಗೆ ನಾನು ಬಿಜೆಪಿ ಅಥವಾ ಮಾಧ್ಯಮವನ್ನು ದೂಷಿಸುವುದಿಲ್ಲ. ಇತರರಿಗೆ ನಮ್ಮನ್ನು ಬಳಸಿಕೊಳ್ಳುವ ಅವಕಾಶವನ್ನು ನಾವೇ ನೀಡಿದ್ದೇವೆ" ಎಂದು ಶಿವಕುಮಾರ್ ಹೇಳಿದ್ದಾರೆ.
ಉಡುಪಿ ನಗರದಲ್ಲಿ ನಡೆದ ಕಾಂಗ್ರೆಸ್ ಜನಧ್ವನಿ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡ, ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಬಿಜೆಪಿ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದರು.
ಪದಗ್ರಹಣ ಸಮಾರಂಭವನ್ನು ಅದ್ಧೂರಿಯಾಗಿ ಮಾಡಬೇಕು, ರಾಷ್ಟ್ರೀಯ ನಾಯಕರನ್ನು ಕರೆಸಬೇಕು, ರಾಜ್ಯದ ನಾಯಕರನ್ನೆಲ್ಲಾ ಸೇರಿಸಿ ಒಗ್ಗಟ್ಟು ಪ್ರದರ್ಶಿಸಬೇಕು, ಅಪಾರ ಸಂಖ್ಯೆಯ ಜನ ಸೇರಿಸಿ ಶಕ್ತಿ ಪ್ರದರ್ಶನ ಮಾಡಬೇಕು ಎಂದುಕೊಂಡಿದ್ದ ಡಿ.ಕೆ. ಶಿವಕುಮಾರ್ ಕನಸು COVID -19 ಕಾರಣಕ್ಕೆ ನನಸಾಗಿಲ್ಲ.
ಕಳೆದ ಒಂದು ತಿಂಗಳಿಂದ ಸಂಕಷ್ಟದ ಸಮಯದಲ್ಲಿ ನಾವು ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿದ್ದೇವೆ. ರಾಜಕಾರಣ ಮಾಡಬಾರದು ಹಾಗೂ ಮಾನವೀಯತೆ ದೃಷ್ಟಿಯಿಂದ ನಾವು ಸರ್ಕಾರದ ಜತೆ ಕೈ ಜೋಡಿಸಿದ್ದೇವೆ- ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್