ಎಂ.ವಿ. ಗಾರ್ಡನ್ಗೆ ತೆರಳಿದ ಅವರು ಅಲ್ಲಿನ ಗ್ರಂಥಾಲಯ, ಜಿಮ್, ಅಂಗನವಾಡಿ ಸೇರಿದಂತೆ ಎಲ್ಲೆಡೆ ಪರಿಶೀಲನೆ ನಡೆಸಿದರು. ಜಿಮ್ ಇದ್ದರೂ ಹೆಚ್ಚಿನ ಉಪಕರಣವಿಲ್ಲದೇ ಇರುವುದನ್ನು ಗಮನಿಸಿದರು.
ಬಿಬಿಎಂಪಿ ಆಡಳಿತ ವೈಖರಿ ಸುಗಮವಾಗಿ ಸಾಗಬೇಕೆಂಬ ಉದ್ದೇಶದಿಂದ ಎಂಟು ವಲಯ ಮಾಡಿದ್ದು, ಪ್ರತಿ ವಲಯಕ್ಕೂ ಜಂಟಿ ಆಯುಕ್ತರನ್ನು ನೇಮಕ ಮಾಡಲಾಗಿದೆ. ಈ ವಲಯದ ಸಂಪೂರ್ಣ ಜವಾಬ್ದಾರಿ ಇವರ ಮೇಲಿದೆ. ಇಲ್ಲಿಯ ಯಾವುದೇ ಕಾಮಗಾರಿ ತಡವಾದರೆ, ಇತರೆ ಏನೇ ಕೆಲಸ ಪೂರ್ಣಗೊಳ್ಳದಿದ್ದರೆ ಆಯಾ ವಲಯದ ಜಂಟಿ ಆಯುಕ್ತರನ್ನೇ ನೇರ ಹೊಣೆ ಮಾಡಲಾಗುವುದು.
ರಾಜ್ಯ ಸಮ್ಮಿಶ್ರ ಸರಕಾರ ನೂರು ದಿನಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಯಾವುದೇ ಗೊಂದಲವಿಲ್ಲದೇ ಐದು ವರ್ಷವನ್ನೂ ಪೂರ್ಣಗೊಳಿಸಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಳೆದ 20 ವರ್ಷದಲ್ಲಿ ಬೆಂಗಳೂರು ಹೆಚ್ಚು ವೇಗವಾಗಿ ಬೆಳೆಯುತ್ತಿದೆ. ಐಟಿ-ಬಿಟಿ, ಕೈಗಾರಿಕೆ, ವಿಜ್ಞಾನ , ಸಂಶೋಧನೆ, ಏರೋ ಸ್ಪೇಸ್ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಬೆಂಗಳೂರು ಕೇಂದ್ರವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.