ಕನ್ನಡ ಸಾಹಿತ್ಯ ಪರಿಷತ್ತು ೨೦೧೮, ೨೦೧೯, ೨೦೨೦, ೨೦೨೧, ೨೦೨೨ ಹಾಗೂ ೨೦೨೩ ನೇ ಸಾಲಿನ ʻಡಾ.ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ*ʼ ಯನ್ನು ಪ್ರಕಟಿಸಲಾಗಿದೆ. ದಲಿತ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿದ ಸಾಹಿತ್ಯ ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಕಳೆದ ೬ ವರ್ಷಗಳಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡದೇ ಇರುವುದರಿಂದ ಈ ಬಾರಿ ೬ ಜನ ಸಾಧಕರಿಗೆ ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿಯನ್ನೂ ಪ್ರಕಟಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.