Marutha movie : ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ ಚಿತ್ರ "ಮಾರುತ" ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ.
'ಲ್ಯಾಂಡ್ ಲಾರ್ಡ್' ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗಿದೆ. ಇಂದು ರಿತನ್ಯಾ ವಿಜಯ್ ಜನ್ಮದಿನ ಹಿನ್ನೆಲೆ ಪೋಸ್ಟರ್ ಅನಾವರಣಗೊಳಿಸೋ ಮೂಲಕ ಚಿತ್ರತಂಡ ಶುಭ ಕೋರಿದೆ. ಈ ಕುರಿತ ಸ್ಮಾಲ್ ಸ್ಟೋರಿ ಇದೆ ಟೇಕ್ ಆ ಲುಕ್
Landlord Kannada Movie: ಲ್ಯಾಂಡ್ ಲಾರ್ಡ್ ಸ್ಯಾಂಡಲ್ ವುಡ್ ಸಲಗ ವಿಜಯ್ ಕುಮಾರ್ ಅಭಿನಯದ ಸಾರಥಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಹೇಮಂತ್ ಗೌಡ ಕೆ.ಎಸ್ ಹಾಗೂ ಕೆ.ವಿ ಸತ್ಯಪ್ರಕಾಶ್ ನಿರ್ಮಾಣದ ಜಡೇಶ ಕೆ ಹಂಪಿ ನಿರ್ದೇಶನದ ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ.
ಜಂಟಲ್ ಮ್ಯಾನ್, ಗುರುಶಿಷ್ಯರು ಮತ್ತು ಕಾಟೇರ ಚಿತ್ರಗಳ ರಚಯಿತೃ ಮತ್ತು ನಿರ್ದೇಶಕ ಜಡೇಶ್ ಕೆ ಹಂಪಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ದರ್ಶನ್ ಅಭಿನಯದ "ಸಾರಥಿ" ನಿರ್ಮಾಪಕರಾದ ಕೆ.ವಿ. ಸತ್ಯಪ್ರಕಾಶ್ ಮತ್ತು ಸೂರಜ್ ಗೌಡ ಅವರ "ಸಾರಥಿ ಫಿಲಂಸ್" ಬ್ಯಾನರ್‌ನಲ್ಲಿ ನಿರ್ಮಿತವಾಗುತ್ತಿರುವ "ಲ್ಯಾಂಡ್ ಲಾರ್ಡ್" ಚಿತ್ರತಂಡ ವಿಭಿನ್ನ ಪೋಸ್ಟರ್ ಮೂಲಕ ಶುಭಾಶಯ ತಿಳಿಸಿದೆ. ದುನಿಯಾ ವಿಜಯ್ ನಾಯಕನಾಗಿ, ರಚಿತಾ ರಾಮ್ ನಾಯಕಿಯಾಗಿ ಹಾಗೂ ರಿತನ್ಯ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಕೊನೆ ಹಂತದಲ್ಲಿದ್ದು, ಈ ವರ್ಷ ಬಿಡುಗಡೆಯಾಗುವ ನಿರೀಕ್ಷೆಯಿದೆ.
Actor Duniya Vijay: ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನದಿಂದ ಆಪ್ತರಿಗೆ ಮತ್ತು ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ತಂಗಿಯ ಮದುವೆ ಮಾಡುವುದು ಅವರ ದೊಡ್ಡ ಕನಸಾಗಿತ್ತು.. ಇದೀಗ ಆ ಕನಸನ್ನು ನನಸು ಮಾಡಲು ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ರೆಡಿಯಾಗಿದ್ದಾರೆ..
ಕನ್ನಡದ ಸೂಪರ್‌ಸ್ಟಾರ್ ಡಾ. ಶಿವರಾಜ್ ಕುಮಾರ್ ಭಾನುವಾರ ಸಂಜೆ ಬೆಂಗಳೂರಿನಲ್ಲಿ ನಡೆದ ಅದ್ದೂರಿ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ 2025 ರಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅವರಿಗೆ ಟ್ರೋಫಿ, ಹಂಸಲೇಖ ಅವರ ಐದನಿ ಸಂಸ್ಥೆಯಿಂದ ಚಿನ್ನದ ಪದಕ ಮತ್ತು ಸನ್ಮಾನ ಪತ್ರವನ್ನು ನೀಡಲಾಯಿತು. ಪ್ರಶಸ್ತಿಗಳ ಆರನೇ ಆವೃತ್ತಿಯಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಮೊದಲ ಬಾರಿಗೆ ಕೊಡಲಾಗಿದೆ.
Maruta: ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ, ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಹಾಗೂ ಕೆ.ಮಂಜು - ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಚಿತ್ರ "ಮಾರುತ".
Duniya Vijay Daughter: ಸ್ಯಾಂಡಲ್ ವುಡ್ನ ಬ್ಲಾಕ್ ಕೋಬ್ರ ದುನಿಯಾ ವಿಜಯ್ ನಟನೆ, ನಿರ್ದೇಶನ, ನಿರ್ಮಾಣ ಎಲ್ಲಾ ಕ್ಷೇತ್ರಗಳಲ್ಲೂ ಸಕ್ಸಸ್ ಕಂಡ ಹೀರೋ...ಇದೀಗ ವಿಜಿ ತನ್ನ ಇಬ್ಬರು ಮುದ್ದಾದ ಮಕ್ಕಳನ್ನು ಸಿನಿಮಾರಂಗಕ್ಕೆ ಕರೆತಂದಿದ್ದಾರೆ.
Sidlingu 2: ಕನ್ನಡ ಚಿತ್ರರಂಗದ ನಿರೀಕ್ಷೆಯ ಚಿತ್ರಗಳಲ್ಲೊಂದಾದ ಯೋಗಿ ಅಭಿನಯದ ಮತ್ತು ವಿಜಯಪ್ರಸಾದ್ ನಿರ್ದೇಶನದ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದೆ.
Marutha Movie: ಖ್ಯಾತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದಲ್ಲಿ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಚಿತ್ರ " ಮಾರುತ". ಇತ್ತೀಚೆಗಷ್ಟೇ ಚಿತ್ರೀಕರಣ ಮುಗಿಸಿದ ಈ ಚಿತ್ರದ ಡಬ್ಬಿಂಗ್ ಕೂಡ ಮುಕ್ತಾಯವಾಗಿದೆ. ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ "ಮಾರುತ" ಚಿತ್ರದ ಡಬ್ಬಿಂಗ್ ನಡೆದಿದೆ.
Marutha Movie: ಕನ್ನಡದಲ್ಲಿ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ದುನಿಯಾ ವಿಜಯ್ ಮತ್ತು ಶ್ರೇಯಸ್ ಕೆ ಮಂಜು ಅಭಿನಯಿಸಿರುವ ಚಿತ್ರ "ಮಾರುತ".
Duniya Vijay: ದುನಿಯಾ ವಿಜಿ ಅವರು ಸ್ಟಂಟ್ ಮ್ಯಾನ್ ಆಗಿ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು, 200 ಸಂಭಾವನೆಯ ಮೂಲಕ ತಮ್ಮ ಜೀವನವನ್ನು ರೂಪಿಸಿಕೊಂಡವರು. ಸದ್ಯ ಇನ್ನೂ ಯಂಗ್ ಅಂಡ್ ಎನರ್ಜಿಟಿಕ್ ಆಗಿ ಕಾಣುವ ಇವರಿಗೆ ಇಬ್ಬರು ಮದುವೆ ವಯಸ್ಸಿನ ಹೆಣ್ಣು ಮಕ್ಕಳಿದ್ದಾರೆ ಎನ್ನುವುದು ಹಲವರಿಗೆ ಗೊತ್ತಿಲ್ಲ. ಇದೀಗ ವಿಜಿ ಅವರ ಆ ಇಬ್ಬರು ಹೆಣ್ಣು ಮಕ್ಕಳು ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ.
Duniya Vijay: ಒಂದು ಕಾಲದಲ್ಲಿ ತುತ್ತು ಅನ್ನಕ್ಕೂ ಪರದಾಡುತ್ತಿದ್ದ ದುನಿಯಾ ವಿಜಯ್ ಅವರು ಕೂಡ ಸಿನಿಮಾಗೆ ಎಂಟ್ರಿ ಕೊಟ್ಟ ಕಥೆ ರೋಚಕ, ಹಸಿವು, ಜೀವನದಲ್ಲಿನ ಅನಿವಾರ್ಯತೆ ಅವರಲ್ಲಿ ಸಿನಿಮಾದಲ್ಲಿ ನಟಿಸುವ ಆಸೆಯನ್ನು ಹುಟ್ಟುಹಾಕಿತ್ತು, ಅಲ್ಲಿ ಶುರುವಾದ ಛಲ ಇಂದು ಅವರನ್ನು ದೊಡ್ಡ ಸ್ಟಾರ್ ಹೀರೋ ಪಟ್ಟಕ್ಕೇರಿಸಿ ನಿಲ್ಲಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.