ನಾನು ಕೋರ್ ಕಮಿಟಿಯಲ್ಲಿದ್ದೇನೆ, ನಿಮ್ಮ ಅಭಿಪ್ರಾಯಗಳನ್ನು ನಾಯಕರಿಗೆ ಮುಟ್ಟಿಸುತ್ತೇನೆ, ಮುಂದೆ ಈ ರೀತಿ ಆಗಬಾರದು ಎಂದು ಒತ್ತಾಯಿಸುತ್ತೇನೆ ಎಂದು ಡಿವಿಎಸ್ ಭರವಸೆ ಕೊಟ್ಟರು. ಕಾರ್ಯಕರ್ತರು ಅಭಿಪ್ರಾಯ ಸಂಗ್ರಹ ಸಮಯ ಮಾಧ್ಯಮದವರನ್ನು ಹೊರಗಿಡಲಾಯಿತು.
ವಿರೋಧ ಪಕ್ಷದ ನಾಯಕನ ಆಯ್ಕೆಯ ಬಗ್ಗೆಯೂ ಪ್ರತಿಕ್ರಿಯಿಸಿದ ಡಿವಿಎಸ್, ವಿಪಕ್ಷ ನಾಯಕನನ್ನು ನೇಮಕ ಮಾಡುವುದು ನಮ್ಮ ಧರ್ಮ. ಅಧಿವೇಶನ ಆರಂಭಗೊಳ್ಳುವ ಮುನ್ನ ವಿಪಕ್ಷ ನಾಯಕನನ್ನು ನೇಮಕ ಮಾಡಲಾಗುವುದು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜುಗಲ್ಬಂದಿಗೆ ಸವಾಲೊಡ್ಡುವ ನಾಯಕನನ್ನು ನೇಮಕ ಮಾಡಲಾಗುವುದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದರು.
ದೇಶದಲ್ಲಿ ಆಧುನಿಕ ಮತ್ತು ಅಧಿಕ ಇಳುವರಿ ಹೆಸರಿನಲ್ಲಿ ರಾಸಾಯನಿಕ ಮತ್ತು ರಸಗೊಬ್ಬರಗಳ ಅಧಿಕ ಬಳಕೆ ಆಗುತ್ತಿದ್ದು ಅದು ಇಂದಿನ ಮಾನವನ ಜೀವನ ಶೈಲಿಯಲ್ಲಿ ವ್ಯತಿರಿಕ್ತ ಪರಿಣಾಮ ಬೀರುತ್ತಿದ್ದು, ಮಾನವನ ಆರೋಗ್ಯದ ಏರುಪೇರಾಗಿ ಕ್ಯಾನ್ಸರ್, ಬಿಪಿ, ಸಕ್ಕರೆ ಕಾಯಿಲೆ ಅಂತಹ ಕಾಯಿಲೆಗಳಿಗೆ ತುತ್ತಾಗುತ್ತಿರುವವರ ಸಂಖ್ಯೆ ಅಧಿಕವಾಗಿದೆ.
ಜೇನುನೊಣಗಳಿಂದಲೂ ಪರಿಸರಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ. ಶೇಕಡಾ 85ರಷ್ಟು ಪರಾಗಸ್ಪರ್ಶವಾಗುವುದರಿಂದ ಇತರ ಬೆಳೆಗಳಿಗೂ ಅನುಕೂಲವಾಗುತ್ತಿದೆ. ಆತ್ಮನಿರ್ಭರ ಭಾರತ್ ಯೋಜನೆಯಡಿ ಜೇನು ಕೃಷಿಯೂ ಸೇರಿದೆ.
ಕೊರೊನಾ ಮಹಾಮಾರಿ ಸ್ವಾವಲಂಬನೆಯ ಮಹತ್ವವನ್ನು ತಿಳಿಸಿಕೊಟ್ಟಿದೆ. ಉದಾಹರಣೆಗೆ ಕರೋನಾ ಆರಂಭಕ್ಕೆ ಮುನ್ನ ಭಾರತವು ಸೋಂಕು ನಿರೋಧಕ ಪಿಪಿಇ ಕಿಟ್ಟುಗಳನ್ನು ತಯಾರಿಸುತ್ತಿರಲಿಲ್ಲ. ಆದರೆ ಈಗ ಸ್ವದೇಶಿ ಉದ್ಯಮಗಳು ಪ್ರತಿದಿನ 2 ಲಕ್ಷಕ್ಕೂ ಅಧಿಕ ಪಿಪಿಇ ಕಿಟ್ಟುಗಳನ್ನು ತಯಾರಿಸುತ್ತಿದ್ದಾರೆ.
ಸದ್ಯ ಕರ್ನಾಟಕದ ಮೂಲದ 1904 ಮಂದಿ ಯುಎಇಯಲ್ಲಿದ್ದು, ಈ ಪೈಕಿ 121 ಗರ್ಭಿಣಿಯರಿದ್ದಾರೆ. ವೀಸಾ ಅವಧಿ ಮುಗಿದ 522 ನಿರೋದ್ಯೋಗಿಗಳು, 157 ರೋಗಿಗಳು ಇತರ 95 ಮಂದಿ ಇತರೆ ಕಾರಣಗಳಿಂದ ವಾಪಸ್ ಬರಲಾರದೆ ಸಂಕಷ್ಟಕ್ಕೆ ಸಿಲುಕಿ ತಾಯ್ನಾಡಿಗೆ ವಾಪಸಾಗಲು ಸರ್ಕಾರದ ನೆರವನ್ನು ಕೋರಿರುತ್ತಾರೆ.
ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಅವರು ಪ್ರತಿನಿಧಿಸುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಬಹುತೇಕ ಎಲ್ಲಾ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳ ವೈದ್ಯರು, ಆರೋಗ್ಯ ಸಿಬ್ಬಂದಿಗೆ ಹಾಗೂ ಬಹುತೇಕ ಪೊಲೀಸ್ ಸಿಬ್ಬಂದಿಗೆ N95 ಮಾದರಿಯ ಮಾಸ್ಕ್ಗಳನ್ನು ವಿತರಿಸಲಾಗಿದೆ.
ತೀವ್ರ ಸಾಂಕ್ರಾಮಿಕ ಕೊರೋನಾ ವಿರುದ್ಧ ಗೆಲುವು ಸಾಧಿಸಬೇಕಾದರೆ ಲಾಕ್ಡೌನ್ ನಿಯಮ ಕಟ್ಟುನಿಟ್ಟಾಗಿ ಪಾಲಿಸುವುದು ಅನಿವಾರ್ಯ. ಇದಕ್ಕಾಗಿ ನರೇಂದ್ರ ಮೋದಿ ಹಾಕಿಕೊಟ್ಟ ಸಪ್ತಸೂತ್ರಗಳನ್ನು ಪಾಲಿಸೋಣ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಕರೆ ನೀಡಿದರು.
ಉತ್ತರ ಕನ್ನಡದಲ್ಲಿ 5 ಅಣೆಕಟ್ಟುಗಳ ಗೇಟ್ ತೆಗೆದು ನೀರನ್ನು ಬಿಟ್ಟಿರುವ ಕಾರಣ ಹೆಚ್ಚಿನ ಪ್ರವಾಹ ಪರಿಸ್ಥಿತಿ ಉಂಟಾಗಿದೆಯೆಂದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೆ ಕೊಡಗು, ಉತ್ತರ ಕನ್ನಡ , ದಕ್ಷಿಣ ಕನ್ನಡ ಮತ್ತು ಉಡುಪಿಯ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.