ಅಕ್ರಮ ಹಣಕಾಸು ಆರೋಪ ಪ್ರಕರಣ ಸಂಬಂಧ ಬಿಬಿಎಂಪಿ ಮಾಜಿ ಸದಸ್ಯೆ ಸಿ.ಜಿ.ಗೌರಮ್ಮ ದಂಪತಿಗೆ ಸೇರಿದ 3.35 ಕೋಟಿ ರೂ. ಮೌಲ್ಯ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಮುಂಬೈ ಮನೆಗೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂದು ವಿಚಾರಣೆ ನಡೆಸುತ್ತಿದ್ದಾರೆ. ಸಂಜಯ್ ರಾವತ್ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಲಾಗಿದೆ.
ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆ ನಟಿ ಅರ್ಪಿತಾ ಮುಖರ್ಜಿ ಅವರ ನಿವಾಸದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ಶೋಧ ನಡೆಸಿ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದೆ.
ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ಮತ್ತೆ ಸುಮಾರು 3 ಗಂಟೆಗಳ ಕಾಲ ವಿಚಾರಣೆ ಮಾಡಿದೆ.
ಹೆಡ್ಗೆವಾರ್ ಅವರಿಂದ 1925ರಲ್ಲಿ ಸ್ಥಾಪನೆಯಾದ ಆರ್ಎಸ್ಎಸ್ ಯಾವತ್ತಾದರೂ ಒಂದು ದಿನ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಉದಾಹರಣೆ ಇದೆಯಾ? ಸಾವರ್ಕರ್ ಒಬ್ಬ ಮಹಾನ್ ರಾಷ್ಟ್ರಭಕ್ತ ಎಂದು ಹೇಳುತ್ತಾರೆ, ಸಾವರ್ಕರ್ ಬ್ರಿಟೀಷರಿಗೆ ಮುಚ್ಚಳಿಕೆ ಪತ್ರ ಬರೆದುಕೊಟ್ಟು ನನ್ನನ್ನು ಜೈಲಿನಿಂದ ಬಿಡುಗಡೆ ಮಾಡಿ ಎಂದು ಪರಿಪರಿಯಾಗಿ ಮನವಿ ಮಾಡಿದ್ದರು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 21 ರಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ. ಈ ಹಿಂದೆ ಸೋನಿಯಾ ಅವರಿಗೆ ಜುಲೈ 22ಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿತ್ತು.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು 2004, 2009, 2014 2020 ರ ಚುನಾವಣೆ ಅವಧಿಯಲ್ಲಿ ಸಲ್ಲಿಸಿದ ಅಫಿಡವಿಟ್ಗಳಿಗೆ ಸಂಬಂಧಿಸಿದಂತೆ ಆದಾಯ ತೆರಿಗೆಯಿಂದ ನೋಟಿಸ್ ಸ್ವೀಕರಿಸಿರುವುದಾಗಿ ಹೇಳಿದ್ದಾರೆ.
Sanjay Raut to Appear Before ED: ಸಂಜಯ್ ರಾವತ್ ಇಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲಿದ್ದಾರೆ. ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ವಿಚಾರಣೆಗಾಗಿ ಇಡಿ ರಾವತ್ಗೆ ಸಮನ್ಸ್ ನೀಡಿದೆ.
ಕಾಂಗ್ರೆಸ್ನ ಪ್ರಬಲ ನಾಯಕರ ವಿರುದ್ಧ ಬಿಜೆಪಿ ತನಿಖೆ ಅಸ್ತ್ರ ಪ್ರಯೋಗ ಮಾಡ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪ ಮಾಡಿದ್ದಾರೆ. ಯಾರಿಂದ ಬಿಜೆಪಿಗೆ ತೊಂದರೆ ಆಗುತ್ತೋ ಅವರ ಮೇಲೆ ಈ ಪ್ರಯೋಗ ನಡೀತಿದೆ.. ನಾನು, ಚಿದಂಬರಂ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹೀಗೆ ಎಲ್ಲರ ಮೇಲೆ ತನಿಖೆ ಮಾಡಿದ್ದಾರೆ. ಇಡಿ ಬಳಸಿಕೊಂಡು ನನಗೆ ಕೊಡಬಾರದ ಕಿರುಕುಳ ಕೊಡುತ್ತಿದ್ದಾರೆ. ರಾಜಕೀಯ ಉದ್ದೇಶದಿಂದ ಕೇಸ್ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಾರಿ ನಿರ್ದೇಶನಾಲಯ (ಇಡಿ) ಮುಂದೆ ಹಾಜರಾಗಲು ಹೆಚ್ಚಿನ ಸಮಯ ಕೋರಿದ್ದಾರೆ.ಇದಕ್ಕೂ ಮೊದಲು ಅವರು ಜೂನ್ 23 ರಂದು ಇಡಿ ಮುಂದೆ ಹಾಜರಾಗಬೇಕಾಗಿತ್ತು,
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಮತ್ತು ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿಕೆ ಸಿಂಗ್, ಹಿಂಸಾಚಾರದ ಹಿಂದೆ ಪ್ರತಿಪಕ್ಷಗಳ ಕೈವಾಡವಿದೆ. ಇದರಿಂದ ರಾಹುಲ್ ಗಾಂಧಿಯನ್ನು ಉಳಿಸುವ ಪ್ರಯತ್ನ ಇದಾಗಿದೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಮೇಲಿನ ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ನಾಟಕ ಎಂದು ಸಚಿವ ಬೈರತಿ ಬಸವರಾಜ್ ಕಿಡಿಕಾರಿದ್ದಾರೆ.. ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಬೈರತಿ ಬಸವರಾಜ್, ಇಡಿ, ಸಿಬಿಐ, ಐಟಿ ಇವು ಸ್ವತಂತ್ರ ತನಿಖಾ ಸಂಸ್ಥೆಗಳು. ಅವರು ಯಾರ ಹಂಗಲ್ಲಿ ಕೆಲಸ ಮಾಡಲ್ಲ. ನಾಳೆ ತಪ್ಪಲ್ಲಿ ಸಿಕ್ಕಿಹಾಕಿಕೊಂಡು ಎಲ್ಲೋ ಪಕ್ಷ ಅಧೋಗತಿಗೆ ಹೋಗುತ್ತೆ ಅಂತ ಈ ರೀತಿ ಪ್ರತಿಭಟನೆ ಮಾಡ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.