2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ, ಟ್ರಸ್ಟ್ಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
2020-21ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ, ಮೆಡಿಕಲ್ ಮತ್ತು ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಮೇ.13: 2022-23ನೇ ಸಾಲಿನಲ್ಲಿ ಪದವಿ ಪೂರ್ವ ಕಾಲೇಜುಗಳಿಗೆ ದಾಖಲಾತಿ ಮಾಡಿಕೊಳ್ಳುವ ಮುನ್ನ ವಿದ್ಯಾರ್ಥಿಗಳು, ಪೋಷಕರು ಆಯಾ ಕಾಲೇಜುಗಳು ಅಸ್ತಿತ್ವದಲ್ಲಿರುತ್ತದೆಯೇ ಅಥವಾ ಮಾನ್ಯತೆ ಪಡೆದಿದೆಯೇ ಎಂಬುದನ್ನು ಖಚಿತ ಪಡಿಸಿಕೊಂಡ ನಂತರವೇ ದಾಖಲಾತಿ ಮಾಡಿಕೊಳ್ಳ್ಳಬೇಕು.
ಬೆಂಗಳೂರು: ಏ.06: 2022-23ನೇ ಶೈಕ್ಷಣಿಕ ಸಾಲಿನಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತರು www.pue.karnataka.gov.in ವೆಬ್ಸೈಟ್ನಿಂದ ನಿಗದಿತ ನಮೂನೆಯಲ್ಲಿ ಏಪ್ರೀಲ್ 12 ರೊಳಗಾಗಿ ಅರ್ಜಿಯನ್ನು ಸಲ್ಲಿಬಹುದಾಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ (Scholarship) ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.