Lok Sabha Election 2024:ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಖಚಿತ ಮಾಹಿತಿ ಮೇರೆಗೆ ಎಫ್ಎಸ್ಟಿ ಮತ್ತು ಎಸ್ಎಸ್ಟಿ ತಂಡಗಳು ದಾಳಿ ನಡೆಸಿ, ಜಪ್ತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ
ನರೇಂದ್ರ ಮೋದಿ ಅವರು ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ.ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು.ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಬಿಜೆಪಿ ಸರ್ಕಾರವನ್ನು ಪ್ರಶ್ನಿಸದ, ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ್ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಕರ್ನಾಟಕ ರಾಜ್ಯಕ್ಕೆ ಹಾಗೂ 6 ಕೋಟಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟು ಅವಮಾನಿಸಿದೆ. ಇದಕ್ಕೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ತಮ್ಮ ಸ್ವಾಭಿಮಾನ ಮೆರೆಯಬೇಕೆಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕರೆ ನೀಡಿದ್ದಾರೆ.
Lok Sabha Election 2024: ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ 983 ಮತಗಟ್ಟೆಗಳಲ್ಲಿ 197 ಮತಗಟ್ಟೆಗಳನ್ನು ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಲಾಗಿದೆ.ಮೊಬೈಲ್ ನೆಟ್ ವರ್ಕ್ ಲಭ್ಯವಿಲ್ಲದ ಒಟ್ಟು 17 ಮತಗಟ್ಟೆಗಳು ಗುರುತಿಸಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ವ ಸಿದ್ದತೆ ಇಲ್ಲದ ಗ್ಯಾರೆಂಟಿ ಹೆಸರಿನಲ್ಲಿ ರಾಜ್ಯವನ್ನು ದಿವಾಳಿ ಮಾಡಿದ್ದು, ಆರ್ಥಿಕ ವಿಚಾರದಲ್ಲಿ ಹತಾಶರಾಗಿ ತೀರ ಕೆಳಮಟ್ಟಕ್ಕೆ ಇಳಿದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Lok Sabha Election 2024:ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ.ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.
Lok Sabha Election 2024: ಶುಕ್ರವಾರದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಅತ್ಯಂತ ಶ್ರೀಮಂತ ಮತ್ತು ಬಡ ಅಭ್ಯರ್ಥಿಗಳ ಪಟ್ಟಿಯನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವಿಶ್ಲೇಷಿಸಿದೆ.
Lok Sabha Election 2024: ಗುರುವಾರ ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು. ಇಲ್ಲವಾದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
Lok Sabha Election 2024: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ.
Lok Sabha election 2024: ಬಿಜೆಪಿ ಅವರ ಬಳಿ ಇರುವ ಅಸ್ತ್ರ ಅದೊಂದೆ. ಅವರಿಗೆ ಸೋಲಿನ ಭೀತಿ ಕಾಡುತ್ತಿದ್ದು, ಐಟಿ, ಇಡಿ, ಸಿಬಿಐ ಬಿಟ್ಟು ಅವರಿಗೆ ಬೇರೆ ಗೊತ್ತಿಲ್ಲ. ಪ್ರಧಾನಮಂತ್ರಿಗಳಿಗೆ, ಬಿಜೆಪಿ ನಾಯಕರಿಗೆ ಬೆಲೆ ಏರಿಕೆ ಬಗ್ಗೆ ಮಾತನಾಡಲು ಹೇಳಿ. ಪ್ರಧಾನಮಂತ್ರಿಗಳು 10 ವರ್ಷಗಳ ಹಿಂದೆ ಹೇಳಿರುವ ಹೇಳಿಕೆ, ಕೊಟ್ಟಿರುವ ವಚನಗಳ ಬಗ್ಗೆ ಇಂದು ಅವರು ಏನು ಹೇಳುತ್ತಾರೆ ಕೇಳಿ. ಅವರಿಂದ ಶ್ರೀರಾಮನವಮಿ ದಿನ ಈ ವಿಚಾರವಾಗಿ ಸತ್ಯ ಹೇಳಿಸಿ” ಎಂದರು.
CM Siddaramaiah: ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ Bharatiya Janata Party (BJP) ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು.
ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಭರಾಟೆ ಆರಂಭವಾಗಿದೆ. ಏಳು ಹಂತಗಳ ಉಮೇದುವಾರಿಕೆಯಲ್ಲಿ ಹಲವು ಏರಿಳಿತ ಕಾಣುತ್ತಿದ್ದು ಮತಬೇಟೆ ಕೂಡ ಬಿರುಸಾಗಿ ಸಾಗಿದೆ. ಈ ಹಂತದಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಮತದಾರರ ಜಾಗೃತಿ ಕೂಡ ಜೀ ಕನ್ನಡ ನ್ಯೂಸ್ ನಡೆಸುತ್ತಿದ್ದು ಜೊತೆಗೆ ಕ್ಷೇತ್ರ ಪರಿಚಯ ಕೂಡ ಆರಂಭವಾಗಿದೆ. ಸಂಸತ್ ಕ್ಷೇತ್ರದಲ್ಲಿ ಕಾಡುತ್ತಿರುವ ಸಮಸ್ಯೆಗಳು, ಹಿಂದೆ ಗೆದ್ದಿರೋ ಪಕ್ಷ ಮತ್ತು ನಾಯಕರ ಸಾಧನೆ, ಜಾತಿವಾರು ಶಕ್ತಿ ಹೇಗೆ ಪ್ರಭಾವ ಬೀರಲಿದೆ..? ನಿರ್ಣಾಯಕ ಸಾಮಾಜಿಕ ಅಂಶ ಹಾಗೂ ಕ್ಷೇತ್ರದ ಭೌಗೋಳಿಕ ಹಿನ್ನೆಲೆ ಹೇಗಿದೆ..? ಅಭ್ಯರ್ಥಿಗಳ ಗೆಲುವಿಗೆ ಮತದಾರನ ಮೇಲೆ ಪ್ರಭಾವ ಬೀರುವ ಅಂಶಗಳನ್ನು ನಿಮ್ಮ ಮುಂದಿಡುವ ಕಾರ್ಯಕ್ರಮವೇ ಕ್ಷೇತ್ರ ಪರಿಚಯ
lok sabha election 2024: ದೇಶಾದ್ಯಂತ ಕಾಂಗ್ರೆಸ್ 40 ಕ್ಷೇತ್ರಗಳನ್ನು ಗೆಲ್ಲುವುದೂ ಕಷ್ಟವಿದೆ. ಹಾಗಿರುವಾಗ ಕರ್ನಾಟಕದಲ್ಲಿ ಹೇಗೆ 20 ಕ್ಷೇತ್ರಗಳನ್ನು ಗೆಲ್ಲುತ್ತದೆ? ಎಂದು ಪ್ರಶ್ನಿಸಿದರು.
BJP Candidate Kissing Woman Voter During Campaign Election 2024: ಪಶ್ಚಿಮ ಬಂಗಾಳದ ಮಾಲ್ಡಾ ಉತ್ತರ ಕ್ಷೇತ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಖಗೆನ್ ಮುರ್ಮು ಅವರು ಪ್ರಚಾರದ ವೇಳೆ ಮಹಿಳೆಯ ಕೆನ್ನೆಗೆ ಮುತ್ತಿಟ್ಟಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.
Basavaraj Bommai: ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಕಣ ಸಿದ್ದವಾಗಿದೆ. ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ.ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದರು.
Liquor and money seized during elections: ದೇಶದಲ್ಲಿ ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ಸಿದ್ಧತೆಯಲ್ಲಿ ತೊಡಗಿದೆ. ಇದೇ ವೇಳೆ ಚುನಾವಣಾ ಪ್ರಚಾರದ ಸಮಯದಲ್ಲಿ ಪೊಲೀಸರು ವಶಪಡಿಸಿಕೊಂಡ ಮದ್ಯ ಮತ್ತು ನಗದು ಏನಾಗುತ್ತದೆ ಎನ್ನುವುದರ ಬಗ್ಗೆ ತಿಳಿಯೋಣ..
Lok Sabha Election : 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭಿಸಿದೆ. 160 ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಇಂದು ಬೆಳಗ್ಗೆ ಸಭೆ ನಡೆಸಿದ್ದು, ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.