Lok Sabha Elections 2024: ಬಡತನ ಮತ್ತು ಭ್ರಷ್ಟಾಚಾರದ ವಿರುದ್ಧದ ಯುದ್ಧವು ಇನ್ನೂ ಹೆಚ್ಚಿನ ವೇಗದಲ್ಲಿ ಮುಂದುವರಿಯಲಿದೆ. ಭಾರತವನ್ನು ಮೂರನೇ ಅತಿದೊಡ್ಡ ಜಾಗತಿಕ ಆರ್ಥಿಕತೆಯನ್ನಾಗಿ ಮಾಡುವ ನಿಟ್ಟಿನಲ್ಲಿ ನಾವು ಕೆಲಸ ಮಾಡಲಿದ್ದೇವೆ. ಯುವಕರ ಕನಸುಗಳನ್ನು ನನಸು ಮಾಡುವ ನಮ್ಮ ಪ್ರಯತ್ನವನ್ನು ಮತ್ತಷ್ಟು ಗಟ್ಟಿಗೊಳಿಸುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
Lok Sabha Elections 2024: ದೇಶದ ಪ್ರತಿಯೊಂದು ರೈಲು ನಿಲ್ದಾಣ ಮತ್ತು ಏರ್ಪೋರ್ಟ್ಗಳಲ್ಲಿ ತಪಾಸಣೆ ನಡೆಯಲಿದೆ. ಹೆಲಿಕಾಪ್ಟರ್, ಖಾಸಗಿ ವಿಮಾನಗಳಲ್ಲೂ ಸಹ ತಪಾಸಣೆ ನಡೆಸಲಾಗುವುದು. ಎಲ್ಲಾ ವಾಹನಗಳನ್ನು ಕೂಡ ತಪಾಸಣೆ ನಡೆಸಲಾಗುವುದು ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.
Lok Sabha Elections 2024: ಚುನಾವಣೆಯ ವೇಳೆ ಹಿಂಸೆಗೆ ಯಾವುದೇ ರೀತಿ ಅವಕಾಶ ನೀಡಲ್ಲ. ಎಲ್ಲಾ ಕಡೆ ಚೆಕ್ಪೋಸ್ಟ್ ಇರಲಿವೆ, ಡ್ರೋನ್ ಮೂಲಕ ಕಣ್ಗಾವಲು ಇರಿಸಲಾಗುವುದು. 24 ಗಂಟೆಗಳ ಕಂಟ್ರೋಲ್ ರೂಂಗಳು ಕರ್ತವ್ಯ ನಿರ್ವಹಿಸಲಿವೆ.
Lok Sabha Elections 2024: ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಡುವ ಫೇಕ್ ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲಾಗುವುದು. ಅಭ್ಯರ್ಥಿಗಳ ಬಗ್ಗೆ ಮಾತನಾಡಲು ಜನರಿಗೆ ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಯಾವುದೇ ರೀತಿ ಅವಕಾಶವಿಲ್ಲವೆಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
Lok Sabha Elections 2024: ದೇಶದಲ್ಲಿ 1.8 ಕೋಟಿ ಮತದಾರರು ಮೊದಲ ಬಾರಿಗೆ ಮತಚಲಾವಣೆ ಮಾಡಲಿದ್ದಾರೆ. 49.7 ಕೋಟಿ ಪುರುಷರು, 47.1 ಕೋಟಿ ಮಹಿಳಾ ಮತದಾರರಿದ್ದಾರೆ. 48 ಸಾವಿರ ತೃತೀಯ ಲಿಂಗಿ ಮತದಾರರು ಮತಚಲಾಯಿಸಲಿದ್ದಾರೆ.
Lok Sabha Elections 2024: ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ರಾಜಕೀಯ ಪಕ್ಷಕ್ಕೆ ಲಾಭವಾಗುವಂತೆ ಸರ್ಕಾರದ ಹಣ ಬಳಸುವಂತಿಲ್ಲ. ಸರ್ಕಾರದ ಘೋಷಣೆಗಳು, ಉದ್ಘಾಟನೆಗಳು, ಶಂಕುಸ್ಥಾಪನೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಅಥವಾ ಯಾವುದೇ ಧಾರ್ಮಿಕ ಸ್ಥಳವನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.