ಪಶ್ಚಿಮ ಬಂಗಾಳದ ಬಿಸಿರ್ಹಾಟ್ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ನುಸ್ರತ್ 350369 ಮತಗಳ ಅಂತರದಲ್ಲಿ ಜಯ ಸಾಧಿಸುವಲ್ಲಿ ಯಶಸ್ವಿಯಾದರು. ಚುನಾವಣೆಗಳಲ್ಲಿ ಜಯಗಳಿಸಿದ ನಂತರ, ಅವರ ಛಾಯಾಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ವರ್ಷದ ಹಿಂದೆ ವಿಧಾನಸಭೆಯಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದ್ದ ಕಿವಿಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆ ಮತ್ತು ಲೋಕಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಮುಖ್ಯಸ್ಥ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಅಮೋಘ ವಿಜಯಕ್ಕಾಗಿ ರಾಮಗೋಪಾಲ್ ವರ್ಮಾ ಅಭಿನಂದಿಸಿದರು.
ಬೆಳಿಗ್ಗೆ 10 ಗಂಟೆಗೆ ಆರಂಭವಾದ ಚುನಾವಣಾ ಫಲಿತಾಂಶದ ಪ್ರವೃತ್ತಿಗಳಲ್ಲಿ 542 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಮತ್ತದರ ಮಿತ್ರ ಪಕ್ಷಗಳು 300ಕ್ಕೂ ಅಧಿಕ ಸ್ಥಾನಗಳನ್ನು ಮುನ್ನಡೆ ಸಾಧಿಸಿವೆ. ಉಳಿದಂತೆ ಕಾಂಗ್ರೆಸ್ 109 ಮತ್ತು ಇತರೆ ಪಕ್ಷಗಳು 90 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.
ತಮಿಳುನಾಡಿನಲ್ಲಿ ಎಐಎಡಿಎಂಕೆ-ಬಿಜೆಪಿ ಮತ್ತು ಡಿಎಂಕೆ-ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ. ಪುದುಚೇರಿ ಏಕೈಕ ಸ್ಥಾನದಲ್ಲಿ, ಆಲ್ ಇಂಡಿಯಾ ಎನ್ಆರ್ ಕಾಂಗ್ರೆಸ್ (ಎಐಆರ್ಆರ್ಸಿ) ಮತ್ತು ಕಾಂಗ್ರೆಸ್ ಎರಡು ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.
ಈ ಬಾರಿ ಲೋಕಸಭಾ ಚುನಾವಣೆಯ ಫಲಿತಾಂಶಗಳು (ಲೋಕಸಭಾ ಚುನಾವಣಾ ಫಲಿತಾಂಶಗಳು 2019) ಈ ಮುಖಂಡರ ಮಕ್ಕಳು ನಿಜಕ್ಕೂ ಪಕ್ಷದ 'ಯಂಗ್ ಟರ್ಕ್' ಆಗಲಿದ್ದಾರೆಯೇ ಅಥವಾ ಇಲ್ಲವೋ ಎಂದು ನಿರ್ಧರಿಸುತ್ತದೆ.
ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5 VVPAT ಯಂತ್ರಗಳನ್ನು ಅಳವಡಿಸಲಾಗಿದೆ. ಒಂದು ಮಿಷನ್ ನಲ್ಲಿ ಸುಮಾರು 1400 ಸ್ಲಿಪ್ ಗಳಿವೆ. ಒಂದು VVPAT ಯಂತ್ರದ ಎಣಿಕೆಗೆ ಸುಮಾರು 1 ಗಂಟೆ ತೆಗೆದುಕೊಳ್ಳುತ್ತದೆ.
ಇದೇ ಮೊದಲ ಬಾರಿಗೆ ಲೋಕಸಭಾ ಕ್ಷೇತ್ರದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ 5 ಇವಿಎಂಗಳ ಮತಗಳನ್ನು ವಿವಿಪ್ಯಾಟ್ ನೊಂದಿಗೆ ತಾಳೆ ನೋಡಲಿದ್ದು, ಫಲಿತಾಂಶ 4 ಗಂಟೆ ತಡವಾಗಲಿದೆ ಎಂದು ಆಯೋಗ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.