Telangana Assembly Election Results : ಡಿ.ಕೆ ಶಿವಕುಮಾರ್ ಮಾಸ್ಟರ್ ಪ್ಲಾನ್ಸ್ ತೆಲಂಗಾಣ ಚುನಾವಣೆಯ ದಿಕ್ಕನ್ನೇ ಬದಾಲಾಯಿಸಿದೆ.. ಕರ್ನಾಟಕದಲ್ಲಿ ಕೈ ಅಧಿಕಾರಕ್ಕೆ ತಂದಂತೆ ಗ್ಯಾರಂಟಿ ಯೋಜನೆಗಳ ಮೂಲಕ ಡಿಕೆಶಿ ತೆಲಂಗಾಣ ಮತದಾರರ ಗಮನಸೆಳೆಯುವಲ್ಲಿ ಯಶಸ್ವಿಯಾದಂತಿದೆ.
Five states Election Results 2023 Live : ಮಧ್ಯ ಪ್ರದೇಶ, ರಾಜಸ್ಥಾನ, ಛತ್ತಿಸ್ಗಡದಲ್ಲಿ ಬಿಜೆಪಿ ಭರ್ಜರಿ ಮುನ್ನೆಡೆ ಸಾಧಿಸುತ್ತಿದೆ. ಪ್ರಾರಂಭದಲ್ಲಿ ಮುನ್ನೆಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಸಧ್ಯ ಹಿನ್ನೆಡೆಯಾಗಿದೆ. ತೆಲಂಗಾಣದಲ್ಲಿ ಮಾತ್ರ ಕೈ ಉತ್ತಮ ಸ್ಥಾನದಲ್ಲಿದೆ.
Assembly Election 2023: ಈ ವರ್ಷಾಂತ್ಯದಲ್ಲಿ ನಡೆಯಬೇಕಿರುವ ಪಂಚ ರಾಜ್ಯಗಳ ಚುನಾವಣೆಗೆ ಚುನಾವಣಾ ಆಯೋಗ ಸಜ್ಜಾಗಿದ್ದು ಇಂದು ಮಧ್ಯಾಹ್ನ ಚುನಾವಣಾ ದಿನಾಂಕಗಳನ್ನು ಘೋಷಿಸುವ ಸಾಧ್ಯತೆ ಇದೆ.
Karnataka Assembly Election 2023: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಟೆಂಡರ್ಗಾಗಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಮಾಡಾಳ್ ವಿರೂಪಾಕ್ಷಪ್ಪಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಲಕ್ಷ್ಮಣ್ ಸವದಿ ಪಕ್ಷಾಂತರ ಕುರಿತು ಎಂ. ಪಿ. ರೇಣುಕಾಚಾರ್ಯ ಗುಡುಗಿದ್ದಾರೆ. ಪಕ್ಷ ತೊರೆದಿರುವ ಲಕ್ಷ್ಮಣ್ ಸವದಿ ಒಬ್ಬ ವಿಶ್ವಾಸಘಾತುಕ, ಬೆನ್ನಿಗೆ ಚೂರಿ ಹಾಕುವವನು, ಅಥಣಿಯಲ್ಲಿ ಲಕ್ಷ್ಮಣ ಸವದಿ ಗೆಲ್ಲಲಿಲ್ಲ, ಸೋತು ಸುಣ್ಣವಾದರು ಸಹ ಪಕ್ಷ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿತ್ತು ಎಂದು ಹೇಳಿದರು.
ಟಿಕೆಟ್ ಆಕಾಂಕ್ಷಿಗಳಲ್ಲೇ ರುದ್ರೇಶ್ ಹೆಚ್ಚು ಪ್ರಬಲವಾಗಿ ಗುರುತಿಸಿಕೊಂಡಿದ್ದರು, ಬಳಿಕ ಬಂಡಾಯ ಬಾವುಟ ಹಾರಿಸಿದ್ದರು. ಸೋಮಣ್ಣ ವಿರುದ್ದ ಸಾಲುಸಾಲು ಆರೋಪ ಮಾಡಿದ್ದರಿಂದ ಗರಂಗೊಂಡ ಅರುಣ್ ಸೋಮಣ್ಣ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರಿದ್ದರು. ರುದ್ರೇಶ್ಗೆ ಬಿಎಸ್ವೈ ಫೋನಾಯಿಸಿ ಪಕ್ಷ ಸಂಘಟನೆಗೆ ಒಡಕು ಮೂಡಿಸಬಾರದು, ಅಭ್ಯರ್ಥಿ ವಿರುದ್ಧ ಮಾತನಾಡಬಾರದು ಎಂದು ಬುದ್ಧಿ ಹೇಳಿದ್ದಾರೆ ಎನ್ನಲಾಗಿದೆ.
ರಾಜ್ಯ ಬಿಜೆಪಿ ಇಂದು ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಮಾಜಿ ಸಿಎಂ ಮತ್ತು ಲಿಂಗಾಯತ ಸಮುದಾಯದ ನಾಯಕ ಜಗದೀಶ್ ಶೆಟ್ಟರ್ ಅವರು ತಮ್ಮ ಹಾಲಿ ಕ್ಷೇತ್ರವಾದ ಹುಬ್ಬಳ್ಳಿ-ಧಾರವಾಡ (ಕೇಂದ್ರ) ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದಾರೆ.
Karnataka Elections 2023: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ರಾಜಕೀಯ ತಂತ್ರಗಾರಿಕೆ ನಡೆಯುತ್ತಿದೆ. ಚುನಾವಣಾ ಸಭೆಗಳಲ್ಲಿ ಮತದಾರರನ್ನು ಓಲೈಸಲು ಮುಖಂಡರು ತರಹೇವಾರಿ ಭರವಸೆಯನ್ನೂ ನೀಡುತ್ತಿದ್ದಾರೆ. ಈ ಅನುಕ್ರಮದಲ್ಲಿ ಇದೀಗ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ರೈತರ ಪುತ್ರರನ್ನು ಮದುವೆಯಾಗುವ ವಧುವಿಗೆ ಎರಡು ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ.
Karnataka Election Date 2023: ದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ‘2023ರೊಳಗೆ ಹೊಸ ಸರ್ಕಾರ ರಚನೆಯಾಗಬೇಕು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಆಯೋಗ ಸಿದ್ಧವಿದೆ' ಎಂದು ಹೇಳಿದ್ದಾರೆ.
Karnataka Assembly Elections 2023: 224 ಸದಸ್ಯ ಬಲ ಹೊಂದಿರುವ ಕರ್ನಾಟಕ ವಿಧಾನಸಭೆಯ ಅವಧಿ ಮೇ ತಿಂಗಳಲ್ಲಿ ಕೊನೆಗೊಳ್ಳಲಿದೆ. ಇದಕ್ಕೂ ಮುನ್ನವೇ ಸಾರ್ವತ್ರಿಕ ಚುನಾವಣೆ ನಡೆದು ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಬೇಕಿದೆ.
ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಅಪಾರ ಜನ ಬೆಂಬಲ ಸಿಗುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 135-140 ಸ್ಥಾನಗಳನ್ನು ಗೆದ್ದು ನಾವೇ ಸರ್ಕಾರ ರಚನೆ ಮಾಡುತ್ತೇವೆ ಎಂದು ಬಿಎಸ್ವೈ ಹೇಳಿದರು.
Meghalaya : ಮೇಘಾಲಯ ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಗೆ ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದೆ. ಇಂದು ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಗಿ ಭದ್ರತೆಯ ನಡುವೆ ಮತದಾನ ನಡೆಯಲಿದೆ.
General Elections 2024 : ಗುಜರಾತ್ನಲ್ಲಿ ಐತಿಹಾಸಿಕ ಗೆಲುವಿನೊಂದಿಗೆ ಬಿಜೆಪಿ 2024ರ ಲೋಕಸಭೆ ಚುನಾವಣೆಯನ್ನು ಗೆಲ್ಲುವುದಾಗಿ ಹೇಳಿಕೊಳ್ಳಲಾರಂಭಿಸಿದೆ. ಇದರೊಂದಿಗೆ 2023ರಲ್ಲಿ ನಡೆಯಲಿರುವ ಚುನಾವಣಾ ರಣಕಹಳೆ ಮೊಳಗಿಸಲು ಪಕ್ಷ ಸಿದ್ಧತೆ ಆರಂಭಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.