ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ ಹಾಗಲ್ಲ ಇದು ಗ್ಯಾರಂಟಿ ವಿಚಾರವಾಗಿ ಸಿಎಂ ಸಿದ್ದರಾಮಯ್ಯಗೆ ಮಾತಿನ ಮೂಲಕ ತಿವಿದ ಹೆಚ್ಡಿ ಕುಮಾರಸ್ವಾಮಿ.
ಕುಮಾರಸ್ವಾಮಿ ಮನೆಗೆ ವಿದ್ಯುತ್ ಕಳವು ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅವರ ನೆರೆಹೊರೆಯವರೇ ಅಕ್ರಮ ವಿದ್ಯುತ್ ಸಂಪರ್ಕದ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ. ವಿದ್ಯುತ್ ಕಳ್ಳತನ ಮಾಡಬಾರದು, ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ನಮ್ಮಂತವವರೇ ಹೀಗೆ ಕಳವು ಮಾಡಿದರೆ ತಪ್ಪಲ್ಲವೇ? ಸಂಬಂಧಿಸಿದ ಇಲಾಖೆಯವರು ಏನು ಕ್ರಮ ತೆಗೆದುಕೊಳ್ಳುತ್ತಾರೋ ನೋಡೋಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ವಿದ್ಯುತ್ ಕಂಬದಿಂದ ನೇರವಾಗಿ ಮನೆಗೆ ಸಂಪರ್ಕ ಪಡೆದಿರುವುದು, ಬೈಪಾಸ್ ಸಂಪರ್ಕ ಮಾಡಿಕೊಂಡಿರುವುದು, ಮಿಟರ್ ಟ್ಯಾಂಪರಿಂಗ್ ಮಾಡಿಕೊಂಡಿರುವದು, ವಿದ್ಯುತ್ ಶುಲ್ಕ ಪಾವತಿಸದೆ ಸಂಪರ್ಕ ಕಡಿತವಾಗಿದ್ದರೂ ಸಹ ಅಕ್ರಮವಾಗಿ ಸಂಪರ್ಕ ಪಡೆದಿರುವುದು ಹೀಗೆ ಹಲವಾರು ರೀತಿಯಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಸರ್ಕಾರಕ್ಕೆ ವಂಚಿಸುತ್ತಿರುವ ಪ್ರಕರಣಗಳು ಪತ್ತೆಯಾಗಿವೆ.
ಅದೇ ರೀತಿ ಬಾಕಿ ವಿದ್ಯುತ್ ಬಿಲ್ ವಸೂಲಿಗೆ ಬೆಸ್ಕಾಂ ಕ್ರಮಗೊಂಡಿದ್ದು, ಕಳೆದ 3 ತಿಂಗಳಲ್ಲಿ ಬಾಕಿ ಇದ್ದ 1417.45 ಕೋಟಿ ರೂ. ನಲ್ಲಿ 358.3 ಕೋಟಿ ರೂ. ಬಿಲ್ ಮೊತ್ತವನ್ನು ಸಂಗ್ರಹಿಸಿದೆ. ಬಿಲ್ ಪಾವತಿಸದ ಸುಮಾರು 23 ಲಕ್ಷ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿದೆ ಎಂದು ಬೆಸ್ಕಾಂ ಎಂ.ಡಿ ವಿವರಿಸಿದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.