Ello Jogappa Ninnaramane: ಸ್ಯಾಂಡಲ್ ವುಡ್ ಅಂಗಳದಲ್ಲೀಗ ಜೋಗಪ್ಪನ ಸದ್ದು ಜೋರಾಗಿದೆ. ಅನೇಕ ಹಿಟ್ ಧಾರಾವಾಹಿಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ನಿರ್ದೇಶಕ ಹಯದವನ ಚೊಚ್ಚಲ ಪ್ರಯತ್ನದ ಎಲ್ಲೋ ಜೋಗಪ್ಪ ನಿನ್ನರಮನೆ ಪ್ರೇಕ್ಷಕರ ಎದುರು ಬರಲು ಕೆಲ ದಿನಗಳಷ್ಟೇ ಬಾಕಿ ಇದೆ. ಬಿಡುಗಡೆಗೆ ಸಜ್ಜಾಗಿರುವ ಚಿತ್ರತಂಡ ಭರದಿಂದ ಪ್ರಚಾರ ಕೂಡ ನಡೆಸುತ್ತಿದೆ.
Ello Jogappa Ninnaramane: ಬಿಡುಗಡೆ ಹೊಸ್ತಿಲಿನಲ್ಲಿರುವ ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಚೊಚ್ಚಲ ನಿರ್ದೇಶನದಲ್ಲಿ ನಿರ್ದೇಶಕ ಹಯವದನ ಹೊಸತನದ ಕಥೆಯನ್ನು ಪ್ರೇಕ್ಷಕರ ಮುಂದೆ ಹರವಿಡೋದಿಕ್ಕೆ ಹೊರಟ್ಟಿದ್ದಾರೆ. ಎರಡು ನಿಮಿಷ 49 ಸೆಕೆಂಡ್ ಇರುವ ಎಲ್ಲೋ ಜೋಗಪ್ಪ ನಿನ್ನರಮನೆ ಟ್ರೇಲರ್ ಪ್ರಾಮಿಸಿಂಗ್ ಆಗಿದೆ. ಸುಂದರ ಪಯಣದ ಕಥೆ ಜೊತೆಗೆ ಆಕ್ಷನ್, ಎಮೋಷನ್, ಲವ್, ಕಾಮಿಡಿ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೇಲರ್ ಕಟ್ಟಿಕೊಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.