Eshwar Khandre: ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಎಂದು ಈಶ್ವರ ಖಂಡ್ರೆ ಕಿಡಿ ಕಾರಿದ್ದಾರೆ.
Eshwar Khandre: ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
Eshwar Khandre Statement : ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳಲ್ಲಿ ಜಯ ಸಾಧಿಸಲಿದೆ ಎಂಬ ವಿಶ್ವಾಸವನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ವ್ಯಕ್ತಪಡಿಸಿದ್ದಾರೆ.
ಹುಲಿ ಉಗುರು, ಆನೆ ದಂತ, ಜಿಂಕೆಕೊಂಬು ಸೇರಿದಂತೆ ಅಕ್ರಮವಾಗಿಟ್ಟುಕೊಂಡಿರುವ ಯಾವುದೇ ವನ್ಯ ಜೀವಿಯ ಅಂಗಾಂಗ,ಟ್ರೋಫಿಯನ್ನು ಸರ್ಕಾರಕ್ಕೆ ಹಿಂತಿರುಗಿಸಲು ಒಂದು ಬಾರಿ ಕಾಲಾವಕಾಶ ನೀಡಲು ಇಂದು ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಪದೇ ಪದೇ ಚಿರತೆಗಳು ಪತ್ತೆ . ಪ್ರತ್ಯೇಕ ಚಿರತೆ ಕಾರ್ಯಪಡೆ ರಚಿಸಲು ಸಚಿವರ ಸೂಚನೆ . ವನ್ಯ ಮೃಗ ಕಂಡು ಬಂದರೆ ಕಾಡಿಗಟ್ಟಲು ಆದೇಶ. ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸಿ. ಅಣಕು ಕಾರ್ಯಾಚರಣೆ ನಡೆಸಲು ಈಶ್ವರ ಖಂಡ್ರೆ ಸೂಚನೆ.
Bengaluru News: ಈಗಾಗಲೇ ಹಾಲಿ ಇದ್ದ 5 ಆನೆ ಕ್ಷಿಪ್ರಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ ರಚಿಸಲಾಗಿದೆ.
Darshan tiger claw pendant : ವನ್ಯ ಜೀವಿ ಕಾಯ್ದೆ 72 ಪ್ರಕಾರ ಯಾವುದೇ ಜೀವಿಯ ಉಗುರು, ಚರ್ಮ, ದಂತ ಬಳಸುವಂತಿಲ್ಲ. ದರ್ಶನ, ಜಗ್ಗೇಶ್ ಅಂತ ನಾನು ವೈಯಕ್ತಿಕವಾಗಿ ಯಾರ ಹೆಸರು ತೆಗೆದುಕೊಳ್ಳಲ್ಲ, ಈ ನೆಲದ ಕಾನೂನು ಎಲ್ಲರಿಗೂ ಸರಿ ಸಮಾನ.
ಅರ್ಹ ಅರಣ್ಯವಾಸಿಗಳು ಸಲ್ಲಿಸಿರುವ ಸಾವಿರಾರು ಅರ್ಜಿ ಹಲವಾರು ವರ್ಷಗಳಿಂದ ಇತ್ಯರ್ಥವಾಗದೆ ಇರುವುದು ತಮ್ಮ ಗಮನಕ್ಕೆ ಬಂದಿದ್ದು, 3 ತಿಂಗಳ ಕಾಲಮಿತಿಯಲ್ಲಿ ಸಮರೋಪಾದಿಯಲ್ಲಿ ಈ ಎಲ್ಲ ಅರ್ಹರಿಗೆ ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಈಶ್ವರ ಖಂಡ್ರೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮನುಸ್ಮೃತಿಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿಗೆ ದಲಿತರ ರಾಜಕೀಯ ಏಳಿಗೆಯ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ’ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಬಿಜೆಪಿಗೆ ಉತ್ತರ ಕರ್ನಾಟಕದ ಜನರ ಬಗ್ಗೆ, ದಲಿತರ ಬಗ್ಗೆ, ಕಪ್ಪುವರ್ಣದವರ ಬಗ್ಗೆ ನಿಜಕ್ಕೂ ಗೌರವ ಇದ್ದಿದ್ದೇ ಆದರೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆಯವರನ್ನು, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರನ್ನು ಹಾಗೂ ಉತ್ತರ ಕರ್ನಾಟಕದ ಜನತೆಯನ್ನು ಅತ್ಯಂತ ಕೀಳು ಅಭಿರುಚಿಯ ಮಾತುಗಳಿಂದ ಅವಮಾನಿಸಿದ ಆರಗ ಜ್ಞಾನೇಂದ್ರ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
Kasthurirangan report: ಏಟ್ರಿಯಾ ವಿಶ್ವವಿದ್ಯಾಲಯ, ಸ್ವಿಸ್ನೆಕ್ಸ್ ಮತ್ತು ಎಫ್ಕೆಸಿಸಿಐಗಳ ಸಹಯೋಗದೊಂದಿಗೆ ಅರಣ್ಯ, ಪರಿಸರ ಮತ್ತು ಪರಿಸರ ವಿಜ್ಞಾನ ಖಾತೆ ಸಚಿವ ಈಶ್ವರ್ ಖಂಡ್ರೆ ಅಂತರಪ್ರಬೇಧಗಳ ಸಮಾವೇಶವನ್ನು ಉದ್ಘಾಟಿಸಿದರು.
ನಿವೃತ್ತ ಐ.ಎಫ್.ಎಸ್. ಅಧಿಕಾರಿ ಸಂಜಯ್ ಕುಮಾರ್ ನೇತೃತ್ವದ ಪಶ್ಚಿಮ ಘಟ್ಟಗಳ ಕುರಿತ ತಜ್ಞರ ಸಮಿತಿಯ ನಿಯೋಗದೊಂದಿಗೆ ಸಮಾಲೋಚಿಸಿದ ಸಚಿವ ಈಶ್ವರ ಖಂಡ್ರೆ ಅವರು, ಅರಣ್ಯಗಳ ಸಂರಕ್ಷಣೆಗೆ ಮತ್ತು ಪರಿಸರ ಉಳಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಉನ್ನತ ಹುದ್ದೆಯಲ್ಲಿರುವ ಇಬ್ಬರು ಪರಸ್ಪರ ವೈಯಕ್ತಿಕ ದೋಷಾರೋಪಣೆಯಲ್ಲಿ ತೊಡಗಿ, ಮಾಧ್ಯಮಗಳಲ್ಲಿ ಅದು ಜಗಜ್ಜಾಹೀರಾಗಿದೆ. ಇದರಿಂದ ಮಂಡಳಿಯ ಘನತೆಗೂ ಚ್ಯುತಿಯಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಅಡಿಯಲ್ಲಿ ಮಧ್ಯಪ್ರವೇಶಿಸುವುದು ಅನಿವಾರ್ಯವಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಅವರು ಹೇಳಿದರು.
Forest Department Mninister: ಈಶ್ವರ ಖಂಡ್ರೆ ಸಚಿವರಾದ ಬಳಿಕ ನಗರದ ಅಖಿಲ ಭಾರತ ವೀರಶೈವ ಮಹಾಸಭಾಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಆ ವೇಳೆ ವೀರಶೈವ ಲಿಂಗಾಯತರ ಬಗ್ಗೆ ಮಾತಾನಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.