ಬೆಂಗಳೂರು : ಈ ಬಾರಿಯ ಚುನಾವಣೆಯಲ್ಲಿ ಆಡಳಿತದಲ್ಲಿರುವ ಬಿಜೆಪಿ, ವಿರೋಧ ಪಕ್ಷವಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ತೀವ್ರ ಪೈಪೋಟಿ ನಡೆಸಲಿವೆ. ಈ ನಾಲ್ಕು ಪಕ್ಷಗಳಲ್ಲದೇ ಹೊಸದೊಂದು ಪಕ್ಷವೀಗ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದೆ ಬಂದಿದೆ. ಮಾಜಿ ಸೈನಿಕರು ಸ್ಥಾಪಿಸಿದ ಹೊಸ ರಾಜಕೀಯ ಪಕ್ಷವಾದ 'ಸಾರ್ವಜನಿಕ ಆದರ್ಶ ಸೇನಾ' ಪಕ್ಷವು ಮುಂಬರುವ ಚುನಾವಣೆಯಲ್ಲಿ ಕಣಕ್ಕಿಳಿಯಲು ಮುಂದಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಬ್ರಿಗೇಡಿಯರ್ (ನಿವೃತ್ತ) ರವಿ ಮುನಿಸ್ವಾಮಿ, ಈ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.