ಇಂದು ಸಿಂಗು ಗಡಿಯಲ್ಲಿ ರೈತ ಮುಖಂಡರು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ರೈತರಿಗೆ ಬೆಂಬಲ ನೀಡಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.
ಪ್ರತಿಪಕ್ಷಗಳು ರೈತರ ಹೋರಾಟದ ಮೂಲಕ ದೇಶವನ್ನು ಅಸ್ಥಿರಗೊಳಿಸುವ ಪಿತೂರಿ ನಡೆಸಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದರು ಮತ್ತು ಅಂತಹ ಅಂಶಗಳ ವಿರುದ್ಧ ರೈತರು ಎಚ್ಚರಿಕೆ ವಹಿಸುವಂತೆ ಹೇಳಿದ್ದಾರೆ.
ಪಂಜಾಬ್ ಡಿಐಜಿ ಲಖ್ಮಿಂದರ್ ಸಿಂಗ್ ಜಖರ್ ಅವರು ರಾಜೀನಾಮೆ ಪತ್ರವನ್ನು ಪಂಜಾಬ್ ಸರ್ಕಾರಕ್ಕೆ ಸಲ್ಲಿಸಿದ್ದು, 'ಕೃಷಿ ಕಾನೂನುಗಳ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ನನ್ನ ರೈತ ಸಹೋದರರೊಂದಿಗೆ ನಿಲ್ಲುವ ನನ್ನ ನಿರ್ಧಾರ'
ಇತ್ತೀಚೆಗೆ ಜಾರಿಗೆ ಬಂದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ಆಮ್ ಆದ್ಮಿ ಪಕ್ಷದ (ಎಎಪಿ ಕಾರ್ಯಕರ್ತರು ಸೋಮವಾರ ಉಪವಾಸ ಆಚರಿಸಲಿದ್ದಾರೆ ಎಂದು ದೆಹಲಿ ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಸಚಿವ ಗೋಪಾಲ್ ರೈ ಹೇಳಿದ್ದಾರೆ.
ಕೇಂದ್ರ ಸರ್ಕಾರವು ಭಾರತದ ರೈತರನ್ನು ಸಂಪೂರ್ಣವಾಗಿ ನಂಬುತ್ತದೆ ಮತ್ತು ಮಾವೋವಾದಿ ಮತ್ತು ನಕ್ಸಲ್ ಪಡೆಗಳಿಗೆ ದೇಶಾದ್ಯಂತ ಜನರ ಮೇಲೆ ಪ್ರಭಾವ ಬೀರಲು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಶನಿವಾರ ಹೇಳಿದ್ದಾರೆ.ರೈತರು ಮಾವೋವಾದಿಗಳು ಮತ್ತು ನಕ್ಸಲರ ಪ್ರಭಾವಕ್ಕೆ ಒಳಗಾಗುತ್ತಿದ್ದಾರೆ ಎಂದರು.
ದೆಹಲಿ-ಜೈಪುರ ಹೆದ್ದಾರಿಯನ್ನು ನಿರ್ಬಂಧಿಸಲು ರಾಜಸ್ಥಾನದ ಸಾವಿರಾರು ರೈತರು ಭಾನುವಾರ ಟ್ರ್ಯಾಕ್ಟರ್ ರ್ಯಾಲಿ ನಡೆಸಲಿದ್ದಾರೆ ಎಂದು ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ಪ್ರತಿಭಟಿಸುತ್ತಿರುವ ರೈತರು ಶನಿವಾರ ಹೇಳಿದ್ದಾರೆ.
ಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ ಎರಡು ವಾರಗಳಿಂದ ಆಂದೋಲನ ನಡೆಸುತ್ತಿರುವ ರೈತರು ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ರೈಲ್ವೆ ಟ್ರ್ಯಾಕ್ ಗಳನ್ನು ಬಂದ ಮಾಡುವುದಾಗಿ ಘೋಷಿಸಿದ್ದಾರೆ.ಗುರುವಾರ ಸಭೆ ನಡೆಸಿದ ರೈತ ಸಂಘಗಳು, ದೇಶಾದ್ಯಂತ ಹಳಿಗಳನ್ನು ನಿರ್ಬಂಧಿಸುವ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಹೇಳಿದರು.
ದೆಹಲಿ ಬಳಿಯ ಸಿಂಗು ಗಡಿಯಲ್ಲಿ ಬೀಡುಬಿಟ್ಟಿರುವ ಪ್ರತಿಭಟನಾಕಾರ ರೈತರಿಗೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಅವರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ದುರ್ಬಲಗೊಳಿಸುವುದಿಲ್ಲ ಎನ್ನುವ ಭರವಸೆ ನೀಡಿದರು.
ಅಮಿತ್ ಶಾ ರೈತ ಸಂಘಟನೆಗಳ 13 ಪ್ರತಿನಿಧಿಗಳ ಜೊತೆ ನಡೆಸಿದ ‘ಅನೌಪಚಾರಿಕ ಮಾತುಕತೆ’ ವಿಫಲವಾಗಿರುವ ಹಿನ್ನೆಲೆಯಲ್ಲಿ ಬುಧವಾರ ಕೇಂದ್ರ ಸರ್ಕಾರ ರೈತ ಪ್ರತಿನಿಧಿಗಳೊಂದಿಗೆ ಅಧಿಕೃತವಾಗಿ ಕರೆದಿದ್ದ 6ನೇ ಸಭೆಯನ್ನು ರೈತರು ಬಹಿಷ್ಕರಿಸಿದ್ದಾರೆ.
ಇಂದು ಭಾರತ ಬಂದ್ ಇರುವಂತಹ ಸಂದರ್ಭದಲ್ಲಿ ರೈತರ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಪದ್ಮವಿಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ್ದ ಪ್ರಕಾಶ್ ಬಾದಲ್ ಅವರಿಗೆ ಇಂದು ಪ್ರಧಾನಿ ಮೋದಿ ಕರೆ ಮಾಡಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಿನ್ನೆ ಪ್ರತಿಭಟನಾ ನಿರತ ರೈತರನ್ನು ಭೇಟಿಯಾದಾಗಿನಿಂದ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಮತ್ತು ಅವರ ಸಭೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಲಾಗಿದೆ ಎಂದು ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಬೆಳಿಗ್ಗೆ ಆರೋಪಿಸಿದೆ. ಆದರೆ ಇದನ್ನು ದೆಹಲಿ ಪೊಲೀಸರು ನಿರಾಕರಿಸಿದ್ದಾರೆ.