ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರವು ಹಿಂಪಡೆಯುವುದಾಗಿ ಘೋಷಿಸಿದ ಬೆನ್ನಲ್ಲೇ ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರೈತರ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ಬಣ್ಣಿಸಿದ್ದಾರೆ, ಇನ್ನೂ ಮುಂದುವರೆದು ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು ಎಂದು ಹೇಳಿದ್ದಾರೆ.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ ಇನ್ನೊಂದು ಕ್ಷೇತ್ರದ ಬಗ್ಗೆ ಮಾತನಾಡುವ ಮುನ್ನ ಎಚ್ಚರಿಕೆ ವಹಿಸಿ ಎಂದು ಸಲಹೆ ನೀಡಿದ್ದಾರೆ.
ಶುಕ್ರವಾರ (ಫೆಬ್ರವರಿ 5) ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಕಿಸಾನ್ ಮಹಾಪಂಚಾಯತ್ ನಡೆಸಲು ಆರ್ಎಲ್ಡಿ ಸಜ್ಜಾಗುತ್ತಿರುವುದರಿಂದ, ಜಿಲ್ಲೆಯಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ಎರಡು ತಿಂಗಳ ಕಾಲ ನಿಷೇಧಾಜ್ಞೆ ವಿಧಿಸಲು ಆಡಳಿತ ನಿರ್ಧರಿಸಿದೆ.
ಪಾಪ್ ಗಾಯಕಿ ರಿಹಾನ್ನಾ ಅವರು ಭಾರತದಲ್ಲಿ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸಿದ ಪ್ರತಿಭಟನೆಯ ಬಗ್ಗೆ ಮಾಡಿದ ಟ್ವೀಟಗಳ ಬಗ್ಗೆ ಒಂದು ವಲಯ ತೀವ್ರ ಮೆಚ್ಚುಗೆ ವ್ಯಕ್ತಪಡಿಸಿದೆ.ಈಗ ಇಂತಹ ಟ್ವೀಟ್ ಗಳನ್ನು ಈಗ ಟ್ವಿಟರ್ ಮುಖ್ಯ ಕಾರ್ಯನಿರ್ವಾಹಕ ಜ್ಯಾಕ್ ಡಾರ್ಸೆ ಲೈಕ್ ಮಾಡಿದ್ದಾರೆ.
ಭಾರತೀಯ ಕ್ರಿಕೆಟ್ ನಾಯಕ ವಿರಾಟ್ ಕೊಹ್ಲಿ ಗುರುವಾರ ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ವಿಚಾರವು ತಮ್ಮ ತಂಡದ ಸಭೆಯಲ್ಲಿ ಚರ್ಚೆಗೆ ಬಂದಿದ್ದು, ಅಲ್ಲಿ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.
ರೈತರ ಟ್ರಾಕ್ಟರ್ ರ್ಯಾಲಿಯಿಂದಾಗಿ ರೈಲು ಟಿಕೆಟ್ ಕಾಯ್ದಿರಿಸಿದ ಆದರೆ ಸಮಯಕ್ಕೆ ಸರಿಯಾಗಿ ದೆಹಲಿಯ ರೈಲ್ವೆ ನಿಲ್ದಾಣಗಳನ್ನು ತಲುಪಲು ಸಾಧ್ಯವಾಗದ ಪ್ರಯಾಣಿಕರು ಪೂರ್ಣ ಮರುಪಾವತಿಗೆ ಅರ್ಜಿ ಸಲ್ಲಿಸಬಹುದು ಎಂದು ಉತ್ತರ ರೈಲ್ವೆ ಪ್ರಕಟಿಸಿದೆ.
ಈಗಾಗಲೇ ತಿರಸ್ಕರಿಸಲ್ಪಟ್ಟ ಹೊಸ ಕೃಷಿ ಕಾನೂನುಗಳಿಗೆ ತಿದ್ದುಪಡಿ ಮಾಡುವ ಭರವಸೆಯನ್ನು ಪುನರಾವರ್ತಿಸಬಾರದು ಆದರೆ ಇನ್ನೂ ಹೆಚ್ಚಿನ ಸುತ್ತಿನ ಮಾತುಕತೆಗಳನ್ನು ಬರೆಯುವಲ್ಲಿ ದೃಢವಾದ ಪ್ರಸ್ತಾವನೆಯನ್ನು ತರಬೇಕು ಎಂದು ಪ್ರತಿಭಟಿಸುವ ರೈತ ಸಂಘಗಳು ದೆಹಲಿ-ಸಿಂಗು ಗಡಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿವೆ."ಪ್ರತಿಭಟನಾ ನಿರತ ರೈತರು ತಿದ್ದುಪಡಿಗಳನ್ನು ಸ್ವೀಕರಿಸುವುದಿಲ್ಲ ಎಂದು ನಾವು ಈಗಾಗಲೇ ಗೃಹ ಸಚಿವ ಅಮಿತ್ ಷಾ ಅವರಿಗೆ ತಿಳಿಸಿದ್ದೇವೆ" ಎಂದು ರಾಷ್ಟ್ರೀಯ ಕಿಸಾನ್ ಮಜ್ದೂರ್ ಮಹಾಸಂಘದ ರಾಷ್ಟ್ರೀಯ ಅಧ್ಯಕ್ಷ ಶಿವ ಕುಮಾರ್ ಕಕ್ಕಾ ಹೇಳಿದ್ದಾರೆ.
ಆದಾಯ ತೆರಿಗೆ ಮತ್ತು ನೋಟಿಸ್ಗಳ ಮೂಲಕ ಪಂಜಾಬ್ನ ಫಾರ್ಮ್ ಏಜೆಂಟರನ್ನು ಗುರಿಯಾಗಿಸಿಕೊಂಡು ಕೇಂದ್ರ ಸರ್ಕಾರ ದಾಳಿ ನಡೆಸುತ್ತಿರುವ ವಿಚಾರವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿ ಕಾರಿದ್ದಾರೆ.
ದೆಹಲಿ ಬಳಿ ಪ್ರತಿಭಟನೆ ನಡೆಸುತ್ತಿರುವ ರೈತರು ನಗರವನ್ನು ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ದೆಹಲಿ ಗಡಿ ಪ್ರದೇಶಗಳಿಂದ ಪ್ರತಿಭಟನಾ ನಿರತ ರೈತರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಕೋರ್ಟ್ ಈ ರೀತಿ ಹೇಳಿದೆ.
ಇತ್ತೀಚೆಗೆ ಜಾರಿಗೆ ಬಂದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ಆಮ್ ಆದ್ಮಿ ಪಕ್ಷದ (ಎಎಪಿ ಕಾರ್ಯಕರ್ತರು ಸೋಮವಾರ ಉಪವಾಸ ಆಚರಿಸಲಿದ್ದಾರೆ ಎಂದು ದೆಹಲಿ ನೀರಾವರಿ ಮತ್ತು ಪ್ರವಾಹ ನಿಯಂತ್ರಣ ಸಚಿವ ಗೋಪಾಲ್ ರೈ ಹೇಳಿದ್ದಾರೆ.
ಕೇಂದ್ರ ಸರ್ಕಾರವು ಭಾರತದ ರೈತರನ್ನು ಸಂಪೂರ್ಣವಾಗಿ ನಂಬುತ್ತದೆ ಮತ್ತು ಮಾವೋವಾದಿ ಮತ್ತು ನಕ್ಸಲ್ ಪಡೆಗಳಿಗೆ ದೇಶಾದ್ಯಂತ ಜನರ ಮೇಲೆ ಪ್ರಭಾವ ಬೀರಲು ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಶನಿವಾರ ಹೇಳಿದ್ದಾರೆ.ರೈತರು ಮಾವೋವಾದಿಗಳು ಮತ್ತು ನಕ್ಸಲರ ಪ್ರಭಾವಕ್ಕೆ ಒಳಗಾಗುತ್ತಿದ್ದಾರೆ ಎಂದರು.
ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ಪ್ರತಿಭಟಿಸುವತ್ತಿರುವ ರೈತರು ಮುಂದಿನ 24 ರಿಂದ 48 ಗಂಟೆಗಳಲ್ಲಿ ಅವರ ಸಮಸ್ಯೆ ಇತ್ಯರ್ಥಗೊಳ್ಳಲಿದೆ ಎಂದು ಹರಿಯಾಣ ಉಪಮುಖ್ಯಮಂತ್ರಿ ದುಶ್ಯಂತ್ ಚೌತಾಲಾ ಹೇಳಿದ್ದಾರೆ.
ಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ ಎರಡು ವಾರಗಳಿಂದ ಆಂದೋಲನ ನಡೆಸುತ್ತಿರುವ ರೈತರು ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ರೈಲ್ವೆ ಟ್ರ್ಯಾಕ್ ಗಳನ್ನು ಬಂದ ಮಾಡುವುದಾಗಿ ಘೋಷಿಸಿದ್ದಾರೆ.ಗುರುವಾರ ಸಭೆ ನಡೆಸಿದ ರೈತ ಸಂಘಗಳು, ದೇಶಾದ್ಯಂತ ಹಳಿಗಳನ್ನು ನಿರ್ಬಂಧಿಸುವ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಹೇಳಿದರು.
ಇತ್ತೀಚೆಗೆ ಸಂಸತ್ತು ಅಂಗೀಕರಿಸಿದ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಎನ್ಸಿಪಿ (ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ) ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ವಿರೋಧ ಪಕ್ಷಗಳ ನಿಯೋಗ ಬುಧವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.