ಮೇ ತಿಂಗಳಲ್ಲಿ ಮಣಿಪುರದಲ್ಲಿ ಗುಂಪೊಂದು ಇಬ್ಬರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ವಹಿಸಿಕೊಂಡಿದೆ.ಸಿಬಿಐ ಕೂಡ ಈ ಪ್ರಕರಣದಲ್ಲಿ ಹೊಸದಾಗಿ ಎಫ್ಐಆರ್ ದಾಖಲಿಸಿದ್ದು,ಇಂದು ತನಿಖೆ ಆರಂಭಿಸಿದೆ.ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ ಎಂದು ಕೇಂದ್ರ ಸರ್ಕಾರ ಈ ಹಿಂದೆ ಸುಪ್ರೀಂ ಕೋರ್ಟ್ಗೆ ತಿಳಿಸಿತ್ತು.ಕೇಂದ್ರ ಗೃಹ ಸಚಿವಾಲಯದ ಉಲ್ಲೇಖದ ಮೇರೆಗೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ.
Kadugollas Superstition Case: ಕಾಡುಗೊಲ್ಲರ ಮೂಢನಂಬಿಕೆಯಿಂದ ನವಜಾತ ಶಿಶು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇದಲ್ಲದೆ ಈಗಾಗಲೇ ಮನೆಯೊಳಗೆ ಬಾಣಂತಿ ಸೇರಿಸುವಲ್ಲಿ ಆರೋಗ್ಯ ಇಲಾಖೆ ಯಶಸ್ವಿಯಾಗಿದ್ದು, ಬಾಣಂತಿ ಆರೋಗ್ಯ ನಿಗಾಕ್ಕೆ ಪ್ರಾಥಮಿಕ ಕೇಂದ್ರಕ್ಕೆ ದಾಖಲು ಮಾಡಲಾಗಿದೆ.
ದಾವಣಗೇರಿ ಸಂಸದ ಜಿಎಂ ಸಿದ್ದೇಶ್ವರ್ ಅವರಿಗೆ ಅಪರಿಚಿತ ಮಹಿಳೆಯೊಬ್ಬಳು ಮೊದಲು ಮೆಸೇಜ್ ಮಾಡಿ ಆಮೇಲೆ ಬೆತ್ತಲೆ ವಿಡಿಯೋ ಕಾಲ್ ಮಾಡಿ ಬೆದರಿಕೆ ನೀಡಿದ್ದಾಳೆ ಎನ್ನಲಾಗಿದೆ.ಈ ಕುರಿತಾಗಿ ಸಂಸದ ಜಿ.ಎಂ.ಸಿದ್ದೇಶ್ವರ್ ಅವರು ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
FIR Against Amit Malviya: ತಪ್ಪು ಮಾಹಿತಿ ಹರಡುವ ಮೂಲಕ ಮಾಳವಿಯಾ ಅವರು ಮತದಾರರಲ್ಲಿ ದ್ವೇಷವನ್ನು ಹುಟ್ಟುಹಾಕಲು ಪಿತೂರಿ ನಡೆಸುತ್ತಿದ್ದಾರೆ ಎಂದು ರಮೇಶ್ ಬಾಬು ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ. ಜೂನ್ 17 ರಂದು ಅಮಿತ್ ಮಾಳವಿಯಾ ಮಾಡಿದ ಟ್ವೀಟ್ ಅನ್ನು ಆಧರಿಸಿ ಈ ದೂರನ್ನು ದಾಖಲಿಸಲಾಗಿದೆ
FIR against Producer Asit Modi: ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಮತ್ತು 509 ಅಡಿಯಲ್ಲಿ ಖ್ಯಾತ ಧಾರಾವಾಹಿ ನಿರ್ಮಾಪಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅಖಿಲ ಭಾರತೀಯ ಹಿಂದೂ ಮಹಾಸಭಾದ ರಾಷ್ಟ್ರೀಯ ವಕ್ತಾರ ಶಿಶಿರ್ ಚತುರ್ವೇದಿ ಅವರು 'ಆದಿಪುರುಷ' ಚಿತ್ರದ ನಿರ್ಮಾಪಕರು ಮತ್ತು ತಾರಾ ಬಳಗದ ವಿರುದ್ಧ ಹಜರತ್ಗಂಜ್ ಪೊಲೀಸರಿಗೆ ಎಫ್ಐಆರ್ ದಾಖಲಿಸಿದ್ದಾರೆ.
ಮಳೆಯ ರೌದ್ರಾವತಾರಕ್ಕೆ ಟೆಕ್ಕಿ ಯುವತಿ ಸಾವು. ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್ ಪಾಸ್ನಲ್ಲಿ ನೀರು ಆರೋಪ. ಮಳೆ ನೀರು ಸರಾಗ ಹೋಗಲು ಕ್ರಮ ಕೈಗೊಳ್ಳದ ಆರೋಪ. ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಬಿಬಿಎಂಪಿ ವಿರುದ್ಧ ಎಫ್ಐಆರ್. ಹಲಸೂರು ಗೇಟ್ ಠಾಣೆಗೆ ದೂರು ನೀಡಿದ ಮೃತಳ ಸಹೋದರ.
ActressTara ನಟಿ ತಾರಾ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು ಸ್ಯಾಂಡಲ್ವುಡ್ನಲ್ಲಿ ಹೆಚ್ಚಾಗಿ ಪೋಷಕ ಪಾತ್ರಗಳ ಮೂಲಕ ಅವರು ಗಮನ ಸೆಳೆದಿದ್ದಾರೆ. ಇದೀಗ ನಟಿಯ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
ಪ್ರಜಾಧ್ವನಿ ಯಾತ್ರೆಯಲ್ಲಿ ದುಡ್ಡು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ದ ಎಫ್ಐಆರ್ ದಾಖಲಾಗಿದೆ.. ಚುನಾವಣಾಧಿಕಾರಿಗಳ ದೂರು ಆಧರಿಸಿ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Karnataka Assembly Election: ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಕೃಷ್ಣಯ್ಯ ಶೆಟ್ಟಿ ಮತ್ತು ಗಾಂಧಿನಗರ ಕ್ಷೇತ್ರದ ಹೆಸರನ್ನೊಳಗೊಂಡ ಸುಮಾರು ಏಳೆಂಟು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನ ವಶಪಡಿಸಿಕೊಂಡಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳ ತನಿಖೆಗೆ ಸಹಕಾರ ಕೊಡ್ತೀನಿ. ಯಾವಾಗ ಅಧಿಕಾರಿಗಳು ಕರೆದ್ರೂ ವಿಚಾರಣೆಗೆ ಹಾಜರಾಗ್ತೀನಿ ಎಂದು ವಿಚಾರಣೆ ಬಳಿಕ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿಕೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.