ಮೋದಿಯವರಾದಿಯಾಗಿ ಬಿಜೆಪಿ ನಾಯಕರು ಕರ್ನಾಟಕವನ್ನು ನಂಬರ್ ಒನ್ ಮಾಡುತ್ತೇವೆ ಎನ್ನುತ್ತಾರೆ. ಮೋದಿಯವರು ಹೋದ ಎಲ್ಲ ರಾಜ್ಯಗಳಲ್ಲೂ ಹೀಗೆ ಹೇಳುತ್ತಾರೆ. ಇಷ್ಟಕ್ಕೂ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿದ್ದಿದ್ದರೆ ಕರ್ನಾಟಕವು ಅನೇಕ ವಿಚಾರಗಳಲ್ಲಿ ನಂಬರ್ ಒನ್ ಆಗಿತ್ತು. ಕೈಗಾರಿಕೆ, ಸೇವಾ ವಲಯಗಳಲ್ಲಿ ನಾವು ಮುಂದೆಯೇ ಇದ್ದೆವು. ಈ ಪ್ರತಿಷ್ಠೆಯನ್ನು ಹಾಳು ಮಾಡಿದ್ದೆ ಬಿಜೆಪಿ ಸರ್ಕಾರ.
ಹಿರಿಯ ರಾಜಕಾರಣಿಗೆ ಕಾಂಗ್ರೆಸ್ ನೋವುಂಟು ಮಾಡಿದೆ. HG ರಾಮುಲು ಪುತ್ರ HR ಶ್ರೀನಾಥ್ಗೆ ಕಾಂಗ್ರೆಸ್ ದ್ರೋಹ ಮಾಡಿದೆ.. ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯನವರು ಕಾರಣ ಎಂದು ಪ್ರಣವಾನಂದ ಸ್ವಾಮೀಜಿ ಆಕ್ರೋಶ ಹೊರ ಹಾಕಿದ್ದಾರೆ..
ಆರ್ಥಿಕವಾಗಿ ದಿವಾಳಿಯಾಗ್ತಿರೋ ರಾಜ್ಯ ಉಳಿಸಲು ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡಲು ಕಾಂಗ್ರೆಸ್ಗೆ ಮತ ನೀಡಿ ಎಂದು ರಾಜ್ಯದ ಜನತೆಗೆ ಸಿದ್ದರಾಮಯ್ಯ ಕರೆ ನೀಡಿದ್ದಾರೆ.. ಜನಪರವಾದ ಆಡಳಿತ ನೀಡಲು ಮತ್ತು ನುಡಿದಂತೆ ನಡೆಯಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದಿದ್ದಾರೆ..
ಸಿದ್ದರಾಮಯ್ಯ ಕ್ಷೇತ್ರದ ಆಯ್ಕೆ ಸರ್ಕಸ್ ಮುಗಿದಿಲ್ಲ. ಈ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆಗೆ ಮತ್ತೊಂದು ಕ್ಷೇತ್ರದ ಆಫರ್ ಬಂದಿದೆ. ಹೊಸಪೇಟೆಯಿಂದ ಸ್ಪರ್ಧೆ ಮಾಡುವಂತೆ ಜಿಲ್ಲೆಯ ಮಾಧ್ಯಮ ವಕ್ತಾರ ಪತ್ರೇಶ್ ಹಿರೇಮಠ ಪತ್ರ ಬರೆದಿದ್ದಾರೆ.
ಉರಿಗೌಡ ಮತ್ತು ನಂಜೇಗೌಡ ಸಿನಿಮಾ ವಿವಾದ ವಿಚಾರ. ಇರಲಿ ಬಿಡಣ್ಣ.. ಇದರ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಉರಿಗೌಡ-ನಂಜೇಗೌಡ ಬಗ್ಗೆ ರಾಯಚೂರಿನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಬಿ.ವೈ.ವಿಜಯೇಂದ್ರ ಹೇಳಿದ್ರು.
ಉರಿಗೌಡ-ನಂಜೇಗೌಡ ಸೃಷ್ಟಿಯಿಂದ ಒಕ್ಕಲಿಗ ಸಮುದಾಯಕ್ಕೆ ಅಪಮಾನ. ಯಾರನ್ನೋ ಕರೆದು ಮಾತಾಡುವುದಲ್ಲ, ಸ್ವಾಮೀಜಿಗಳು ಹೋರಾಟ ಮಾಡಬೇಕು. ಬಿಜೆಪಿಯ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಕೆಲಸಕ್ಕೆ ಕಡಿವಾಣ ಹಾಕಬೇಕು ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ರು.
ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮ ಭಾಷಣದುದ್ದಕ್ಕೂ ಕೆಂಡಕಾರಿದ ಅವರು, ಹಲವು ಪ್ರಶ್ನೆಗಳನ್ನು ಕೇಳುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಪ್ರಧಾನಿ ನರೇಂದ್ರ ಮೋದಿ ಪ್ರವಾಹ ಬಂದಾಗ ಬರಲಿಲ್ಲ. ರಾಜ್ಯದಲ್ಲಿ ಜನರು ಸತ್ತಾಗ ಬರಲಿಲ್ಲ. ಆದ್ರೆ ಈಗ ಪದೇ ಪದೇ ಬರುತ್ತಿದ್ದಾರೆ ಎಂದು ಪ್ರಧಾನಿ ಮೋದಿ ರಾಜ್ಯ ಭೇಟಿ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ..
ಮಾತೆತ್ತಿದ್ರೆ ಹೊಡಿ, ಬಡಿ, ಕೊಲೆ ಮಾಡಿ ಅಂತ ಹೇಳ್ತಾರೆ. ಎಲ್ಲಿಯವರೆಗೂ ರಾಜ್ಯದ ಜನರ ಆಶೀರ್ವಾದ ಇರುತ್ತೋ ಅಲ್ಲಿಯವರೆಗೂ ನನ್ನನ್ನು ಯಾರೂ ಮುಗಿಸಲು ಆಗಲ್ಲ ಎಂದು ಅಶ್ವತ್ಥ್ ನಾರಾಯಣ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಯಲಿದೆ.. ಜಿಲ್ಲೆಯಾದ್ಯಂತ ಅಶ್ವತ್ಥ್ ನಾರಾಯಣ್ ವಿರುದ್ಧ ಪ್ರತಿಭಟನೆ ನಡೆಸಿ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಲಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯನನ್ನು ಟಿಪ್ಪು ರೀತಿ ಹೊಡೆದು ಹಾಕಬೇಕು
ಮಂಡ್ಯದಲ್ಲಿ ಸಚಿವ ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ
ನಿಮಗೆ ಸಾವರ್ಕರ್ ಬೇಕಾ..? ಟಿಪ್ಪು ಬೇಕಾ..? ನೀವೇ ತೀರ್ಮಾನಿಸಿ
ಟಿಪ್ಪುವಿನ ಜಾಗಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಬಂದು ಬಿಡ್ತಾರೆ
ಉರಿಗೌಡ ನಂಜೇಗೌಡ ಏನ್ ಮಾಡಿದ್ರಿ ಟಿಪ್ಪುಗೆ!
ಅದೇ ರೀತಿ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕು
ಸಾತನೂರು ಗ್ರಾಮದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಹೇಳಿಕೆ
Former CM Siddaramaiah : ರಾಜ್ಯ ಬಿಜೆಪಿ ನಾಯಕರು ನನ್ನ ವಿರುದ್ದ ಮಾಡಿರುವ ಭ್ರಷ್ಟಾಚಾರದ ಆರೋಪಗಳ ತನಿಖೆಗೆ ನಾನು ಸಿದ್ದನಿದ್ದೇನೆ. ಆದರೆ ಇದಕ್ಕಿಂತ ಮೊದಲು ನನ್ನ ಸರಳ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಇಲ್ಲಿಯವರೆಗೆ ಬಾಯಿ ಮುಚ್ಚಿಕೊಂಡಿರುವವರು ಈಗ ಯಾಕೆ ಬಾಯಿ ಬಡಿದುಕೊಳ್ಳುತ್ತಿದ್ದೀರಿ? ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಎಂಬ ಹೇಳಿಕೆಗೆ ಕೆಂಡ ಕಾರಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, 40% ಕಮೀಷನ್ ಆರೋಪ ನಮ್ಮ ಸರ್ಕಾರದ ಮೇಲೆ ಮಾಡಿದ್ರಾ ಗುತ್ತಿಗೆದಾರರು? ನಮ್ಮ ಸರ್ಕಾರದ ಮೇಲೆ ಪತ್ರ ಬರೆದಿದ್ದರಾ..?.ಯಾವ ಆಧಾರದಲ್ಲಿ ಇವ್ರು ಹೀಗೆ ಹೇಳ್ತಿದ್ದಾರೆ ಗೊತ್ತಿಲ್ಲ, ಎಂದರು.
ಚಿಕ್ಕಬಳ್ಳಾಪುರದ ಸುಧಾಕರ್ಗೆ ರಾಜಕೀಯ ಜನ್ಮ ಕೊಟ್ಟಿದ್ದು ಕಾಂಗ್ರೆಸ್.. ಸುಧಾಕರ್ ಡಾಕ್ಟರ್ ಓದಿದ್ದಾನಾ.. ಕಾಪಿ ಮಾಡಿದ್ದಾನೋ ಗೊತ್ತಿಲ್ಲ ಎಂದು ಚಿಕ್ಕಬಳ್ಳಾಪುರ ಪ್ರಜಾಧ್ವನಿ ಸಮಾವೇಶದಲ್ಲಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಭ್ರಷ್ಟ ಮಂತ್ರಿ ಅಂತ ಇದ್ರೆ ಅದು ಸುಧಾಕರ್ ಮಾತ್ರ ಎಂದಿದ್ದಾರೆ.
ಸುಧಾಕರ್ಗೆ ಆಪರೇಷನ್ ಕಮಲಕ್ಕೊಳಗಾಗಬೇಡ ಅಂತಾ ಮಧ್ಯರಾತ್ರಿ ನಾನು ಪರಿಪರಿಯಾಗಿ ಹೇಳಿದೆ. ಆದ್ರೆ ಬೆಳಗ್ಗೆನೇ ಬಾಂಬೆಗೆ ಹೋಗ್ಬಿಟ್ಟ ಎಂದ ಸಿದ್ದರಾಮಯ್ಯ ಹೇಳಿದ್ದಾರೆ.. ಭ್ರಷ್ಟಾಚಾರ ಆರೋಪದ ಬಗ್ಗೆ ನಿಮಗೆ ಏನಾದ್ರು ಧಮ್ಮು, ತಾಕತ್ ಇದ್ರೆ ತನಿಖೆ ನಡೆಸಿ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಬಿಜೆಪಿ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. 40% ಲಂಚ ಪಡೆಯೋ ಇವರು ಕಮಿಷನ್ ಪಡೆಯಲ್ಲ ಅಂತಾರೆ. ಹಾಗಾದ್ರೆ ಎಡಿಜಿಪಿ ಅವರು ಯಾಕೆ ಜೈಲಿಗೆ ಹೋದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬಿಜೆಪಿ ಪಕ್ಷ ಅಂದ್ರೆ ಸುಳ್ಳಿನ ಫ್ಯಾಕ್ಟರಿ.. ಬರೀ ಸುಳ್ಳು. ಸುಳ್ಳು ಹೇಳಿ ಜನರನ್ನ ಮರಳು ಮಾಡುವ ಪಕ್ಷ ಬಿಜೆಪಿ ಎಂದು ಮಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.